AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು

ಇದ್ದಕ್ಕಿಂತೆ ಧೋ ಎಂದು ಸುರಿಯುವ ಮಳೆಯನ್ನು ಸಮರ್ಪಕವಾಗಿ ಅಂದಾಜಿಸಲು ಅಧಿಕಾರಿಗಳು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರವಾಹದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುವವರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರವಾಹ
TV9 Web
| Edited By: |

Updated on:Jul 31, 2022 | 12:53 PM

Share

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ (Balochistan) ವ್ಯಾಪಕವಾಗಿ ಮಳೆಸುರಿಯುತ್ತಿದ್ದು, ಸಿಂಧ್ (Sindh) ಪ್ರಾಂತ್ಯಕ್ಕೆ ನೀರು ನುಗ್ಗುತ್ತಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಹಲವು ಹಳ್ಳಿಗಳು ಹಠಾತ್ ಪ್ರವಾಹದಿಂದ (Flash Floods in Pakistan) ಮುಳುಗಿದ್ದು, 50 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಬಲೂಚಿಸ್ತಾನದಲ್ಲಿ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಇದ್ದಕ್ಕಿಂತೆ ಧೋ ಎಂದು ಸುರಿಯುವ ಮಳೆಯನ್ನು ಸಮರ್ಪಕವಾಗಿ ಅಂದಾಜಿಸಲು ಅಧಿಕಾರಿಗಳು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರವಾಹದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುವವರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

‘ಕಚಾವ್ ಪ್ರಾಂತ್ಯದಲ್ಲಿ 50ಕ್ಕೂ ಹೆಚ್ಚು ಮತ್ತು ಸಂಪರ್ಕ ರಸ್ತೆಗಳು ಮುಳುಗಿವೆ. ಮಳೆ ನೀರಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಜೀವ ಉಳಿಸಿಕೊಳ್ಳಲು ಬೆಟ್ಟಗಳನ್ನು ಹತ್ತಿದ್ದಾರೆ. ಇಂಥವನ್ನು ಗುರುತಿಸಿ ಅಗತ್ಯ ಸೌಕರ್ಯ ಒದಗಿಸಲು ಅಧಿಕಾರಿಗಳು ಹೆಣಗಾಡುತ್ತಿದ್ದಾರೆ. ಸುಮಾರು 70 ವರ್ಷ ದಾಟಿದ ಹಿರಿಯ ಮಹಿಳೆಯೊಬ್ಬರು ವೈದ್ಯಕೀಯ ಸೇವೆ ಸಿಗದ ಕಾರಣ ಬೆಟ್ಟದ ಮೇಲೆಯೇ ಮೃತಪಟ್ಟಿದ್ದಅರೆ.

ಪ್ರಸಕ್ತ ಮುಂಗಾರು ಋತುಮಾನದಲ್ಲಿ ಬಲೂಚಿಸ್ತಾನದಲ್ಲಿ ಈ ಹಿಂದೆ ಕಂಡಕೇಳರಿಯದ ರೀತಿಯಲ್ಲಿ ಮಳೆಯಾಗಿದೆ. ಬಲೂಚಿಸ್ತಾನ ಮತ್ತು ಖೈಬರ್ ಪಖ್ತೂನ್​ಖ್ವಾ ಪ್ರಾಂತ್ಯಗಳಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬಲೂಚಿಸ್ತಾನದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಏಳು ಮಂದಿ ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಖೈಬರ್ ಪಖ್ತೂನ್​ಖ್ವಾ ಪ್ರಾಂತ್ಯದಲ್ಲಿ ಮಳೆ ಆರ್ಭಟಕ್ಕೆ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಒಂದು ದಿನದ ಅವಧಿಯಲ್ಲಿ ವಿವಿಧೆಡೆ 100ಕ್ಕೂ ಹೆಚ್ಚು ಮನೆಗಳು ಕುಸಿದಿವೆ.

ಮಳೆ ಆರ್ಭಟಕ್ಕೆ ತತ್ತರಿಸಿರುವ ಬಲೂಚಿಸ್ತಾನದಲ್ಲಿ ಮುಂದಿನ 10 ದಿನಗಳ ಅವಧಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜನರು ಮನೆಗಳಿಂದ ಆಚೆ ಬರಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಬಲೂಚಿಸ್ತಾನದಲ್ಲಿ ಮುಂಗಾರು ಆರಂಭವಾದ ಕಳೆದ ಜೂನ್ 1ರ ನಂತರ 124 ಜನರು ಜೀವ ಕಳೆದುಕೊಂಡಿದ್ದಾರೆ. 10 ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ. 565 ಕಿಮೀಯಷ್ಟು ರಸ್ತೆ ಮತ್ತು 2 ಲಕ್ಷ ಎಕರೆ ಕೃಷಿಭೂಮಿ ಪ್ರವಾಹದಿಂದ ಹಾಳಾಗಿದೆ. 712 ಜಾನುವಾರುಗಳು ಸಾವನ್ನಪ್ಪಿವೆ. ಹಲವು ಅಣೆಕಟ್ಟುಗಳು ಕೊಚ್ಚಿಹೋಗಿವೆ ಎಂದು ಬಲೂಚಿಸ್ತಾನ ಸರ್ಕಾರ ಹೇಳಿದೆ.

ಬಲೂಚಿಸ್ತಾನ ಮತ್ತು ಸಿಂಧ್ ಪ್ರಾಂತ್ಯದ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ಕುಸಿದಿರುವ ಕಾರಣ ಬಲೂಚಿಸ್ತಾನದಲ್ಲಿ ಪರಿಹಾರ ಕಾಮಗಾರಿ ನಿರ್ವಹಿಸಲೂ ಕಷ್ಟವಾಗುತ್ತಿದೆ. ಕ್ವೆಟ್ಟಾ-ಕರಾಚಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿಗೊಳಿಸಲಾಗಿದೆ.

Published On - 12:53 pm, Sun, 31 July 22

Follow Us
TV9 Web
TV9 Web

TV9 Kannada

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್