ಅಮೆರಿಕ ಇತಿಹಾಸದಲ್ಲಿ ಹೌಡಿ ಮೋದಿ ಹೊಸ ದಾಖಲೆ

ಅಮೆರಿಕ ಇತಿಹಾಸದಲ್ಲಿ ಹೌಡಿ ಮೋದಿ ಹೊಸ ದಾಖಲೆ

ಹ್ಯೂಸ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದ ಭಾರತೀಯರನ್ನು ಒಂದುಗೂಡಿಸೋ ಮಹತ್ವದ ಹೆಚ್ಚೆಯನ್ನ ಇಟ್ಟಿದ್ದಾರೆ.  ಅಮೆರಿಕಾದ ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ‘ಹೌಡಿ ಮೋದಿ’ ಕಾರ್ಯಕ್ರಮವನ್ನ ಆಯೋಜಿಸಿತ್ತು. ಈ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಿದ್ದಾರೆ.  ಮೋದಿಯವರ ಜೊತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮವು ಎರಡು ದೇಶದ ನಾಯಕರು ಜನರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಮಾತನಾಡುವ […]

sadhu srinath

|

Nov 19, 2020 | 12:08 AM

ಹ್ಯೂಸ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದ ಭಾರತೀಯರನ್ನು ಒಂದುಗೂಡಿಸೋ ಮಹತ್ವದ ಹೆಚ್ಚೆಯನ್ನ ಇಟ್ಟಿದ್ದಾರೆ.  ಅಮೆರಿಕಾದ ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ‘ಹೌಡಿ ಮೋದಿ’ ಕಾರ್ಯಕ್ರಮವನ್ನ ಆಯೋಜಿಸಿತ್ತು. ಈ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಿದ್ದಾರೆ.  ಮೋದಿಯವರ ಜೊತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮವು ಎರಡು ದೇಶದ ನಾಯಕರು ಜನರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಮಾತನಾಡುವ ಅತಿ ದೊಡ್ಡ ಖಾಸಗಿ ಕಾರ್ಯಕ್ರಮವಾಗಿತ್ತು.

ಕಾರ್ಯಕ್ರಮಕ್ಕೆ ಹೌಡಿ ಮೋದಿ ಹೆಸರೇಕೆ?: ಅಮೆರಿಕಾ ದ ನೈಋತ್ಯ ಭಾಗದಲ್ಲಿ ಅಥಿತಿಗಳಿಗೆ ಯೋಗ ಕ್ಷೇಮ ವಿಚಾರಿಸೋಕೆ ‘ಹೌ ಡು ಯು ಡು'(ನೀವು ಹೇಗಿದ್ದೀರಿ) ಎಂದು ಕೇಳುವುದು ಸಾಮಾನ್ಯ ಅದನ್ನು ಸಂಕ್ಷಿಪ್ತವಾಗಿ ‘ಹೌಡಿ’ ಎಂದು ಕರೆಯುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹ್ಯೂಸ್ಟನ್ ನಗರದಲ್ಲಿರುವ ಭಾರತೀಯರು ‘ಹೌಡಿ ಮೋದಿ’ ಎಂದು ಹೆಸರನ್ನಿಟ್ಟಿದ್ದಾರೆ.

ಟೆಕ್ಸಾಸ್​​ನ ಹ್ಯೂಸ್ಟನ್ ನಗರದ ಎನ್‌ಆರ್‌ಜಿ ಫುಟ್ ಬಾಲ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಭಾರತೀಯ ಮೂಲದ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವುದರ ಜೊತೆ ಅಮೆರಿಕದ 60 ಸಂಸದರು ಭಾಗವಹಿಸಿದ್ದರು. ಪತಂಜಲಿ ಯೋಗಪೀಠ, ಅಕ್ಷಯ ಪಾತ್ರಾ ಫೌಂಡೇಶನ್, ಐಐಟಿ ಹಳೆ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಸುಮಾರು 650 ಸಂಘ, ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

ಪ್ರಧಾನಿ ಮೋದಿ ಅವರು ಅಮೆರಿಕದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಮೊದಲಲ್ಲ. ಇದಕ್ಕೂ ಮುಂಚೆ 2014ರಲ್ಲಿ ಅಮೆರಿಕ ಭೇಟಿ ವೇಳೆ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕ್ವಾರ್ ನಲ್ಲಿ 20 ಸಾವಿರ ಮಂದಿಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು, ಇನ್ನು 2015ರಲ್ಲಿ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ ಕಾರ್ಯಕ್ರಮದಲ್ಲೂ ಸುಮಾರು 20 ಸಾವಿರ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

Follow us on

Related Stories

Most Read Stories

Click on your DTH Provider to Add TV9 Kannada