AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈದುಬೈ ದಾಳಿಯಲ್ಲಿ ಹೀರೋ ಪೈಲಟ್ ಸ್ಮಿತ್ ಮಚ್ಚರ್‌ಗೆ ತಲೆಬುರುಡೆಗೆ ಗಂಭೀರ ಗಾಯ: ಸೌದಿಯಲ್ಲಿ ತುರ್ತು ಶಸ್ತ್ರಚಿಕಿತ್ಸೆ

ಫ್ಲೈದುಬೈ ವಿಮಾನದಲ್ಲಿ ಸಹ-ಪೈಲಟ್‌ನ ದಾಳಿಗೆ ಒಳಗಾದ ಭಾರತೀಯ ಪೈಲಟ್ ಸ್ಮಿತ್ ಮಚ್ಚರ್, ತಲೆಬುರುಡೆಗೆ ಗಂಭೀರ ಗಾಯಗೊಂಡರೂ ಸಾಹಸ ತೋರಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿದ್ದರೂ, ಕಾಕ್‌ಪಿಟ್ ಬಾಗಿಲು ತೆರೆದು ಪ್ರಯಾಣಿಕರಿಗೆ ನೆರವಾಗುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಸೌದಿಯಲ್ಲಿ ತುರ್ತು ಶಸ್ತ್ರಚಿಕಿತ್ಸೆಗೊಳಗಾಗಿ ಯುಎಇಗೆ ಏರ್‌ಲಿಫ್ಟ್ ಆಗಿರುವ ಸ್ಮಿತ್, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಫ್ಲೈದುಬೈ ದಾಳಿಯಲ್ಲಿ ಹೀರೋ ಪೈಲಟ್ ಸ್ಮಿತ್ ಮಚ್ಚರ್‌ಗೆ ತಲೆಬುರುಡೆಗೆ ಗಂಭೀರ ಗಾಯ: ಸೌದಿಯಲ್ಲಿ ತುರ್ತು ಶಸ್ತ್ರಚಿಕಿತ್ಸೆ
ಸ್ಮಿತ್ Image Credit source: PTI
ನಯನಾ ರಾಜೀವ್
|

Updated on: Oct 06, 2026 | 3:06 PM

Share

ಅಬುಧಾಬಿ, ಅಕ್ಟೋಬರ್ 06: ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ದಾಳಿಯ ವೇಳೆ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ಗೆ ತಲೆಬುರುಡೆಗೆ ಗಂಭೀರ ಗಾಯವಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ. ಓಮನ್ ಕೋ-ಪೈಲಟ್ ಕ್ರ್ಯಾಶ್ ಆಕ್ಸ್‌ನಿಂದ ದಾಳಿ ನಡೆಸಿದ ವೇಳೆ ಸ್ಮಿತ್‌ಗೆ ‘ಡಿಪ್ರೆಸ್ಡ್ ಸ್ಕಲ್ ಫ್ರ್ಯಾಕ್ಚರ್’ ಉಂಟಾಗಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸೌದಿ ಅರೇಬಿಯಾದಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ತಲೆಬುರುಡೆಗೆ ಗಂಭೀರ ಗಾಯ

ಡಿಪ್ರೆಸ್ಡ್ ಸ್ಕಲ್ ಫ್ರ್ಯಾಕ್ಚರ್ ಎಂದರೆ ತಲೆಬುರುಡೆಯ ಮೂಳೆ ಮುರಿದು ಅದರ ಒಂದು ಭಾಗ ಒಳಕ್ಕೆ, ಮೆದುಳಿನ ಕಡೆಗೆ ಒತ್ತಲ್ಪಡುವ ಗಾಯ. ಇಂತಹ ಗಾಯ ಮೆದುಳಿನ ಮೇಲೆ ಒತ್ತಡ ಉಂಟುಮಾಡುವ ಸಾಧ್ಯತೆ ಇರುವುದರಿಂದ ತಕ್ಷಣದ ವೈದ್ಯಕೀಯ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು.ಸ್ಮಿತ್‌ಗೆ ತಲೆ ಮಾತ್ರವಲ್ಲದೆ ಕೈಕಾಲು, ಎದೆ ಮತ್ತು ಹೊಟ್ಟೆಯ ಮೇಲ್ಭಾಗದಲ್ಲೂ ಗಾಯಗಳಾಗಿವೆ ಎಂದು ವರದಿಯಾಗಿದೆ. ಆದರೆ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚೇತರಿಕೆಯ ಲಕ್ಷಣಗಳು ಕಾಣಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡರೂ ಕಾಕ್‌ಪಿಟ್ ಬಾಗಿಲು ತೆರೆದ ಸ್ಮಿತ್

ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ FZ1073 ವಿಮಾನದಲ್ಲಿ ಈ ಘಟನೆ ನಡೆದಿತ್ತು. ವಿಮಾನದಲ್ಲಿ 170ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಸಹ-ಪೈಲಟ್ ದಾಳಿ ನಡೆಸಿದ ಬಳಿಕ ಸ್ಮಿತ್ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಬಿದ್ದಿದ್ದರು. ಆದರೆ ವಿಮಾನ ವೇಗವಾಗಿ ಕೆಳಕ್ಕೆ ಇಳಿಯುತ್ತಿರುವುದನ್ನು ಅರಿತು, ಕೊನೆಯ ಪ್ರಯತ್ನವಾಗಿ ಕಾಕ್‌ಪಿಟ್ ಬಾಗಿಲು ತೆರೆಯಲು ಮುಂದಾದರು.

ಬಾಗಿಲು ತೆರೆದ ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ಒಳಗೆ ಬಂದು ಕೋ-ಪೈಲಟ್‌ನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ನೆರವಾದರು. ನಂತರ ವಿಮಾನದಲ್ಲಿದ್ದ ಇಬ್ಬರು ಆಫ್-ಡ್ಯೂಟಿ ಪೈಲಟ್‌ಗಳು ನಿಯಂತ್ರಣ ವಹಿಸಿಕೊಂಡರು. ವಿಮಾನವು ಬಳಿಕ ಸೌದಿ ಅರೇಬಿಯಾದ ತಬೂಕ್‌ನ ಪ್ರಿನ್ಸ್ ಸುಲ್ತಾನ್ ಬಿನ್ ಅಬ್ದುಲಜೀಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತು.

ಮತ್ತಷ್ಟು ಓದಿ: ಫ್ಲೈದುಬೈ ಪ್ರಕರಣ: ತಮ್ಮ ವಿರುದ್ಧದ ಆರೋಪ ತಳ್ಳಿಹಾಕಿದ ಇರಾನ್, ಕಟ್ಟುಕಥೆ ಎಂದ ವಿದೇಶಾಂಗ ಸಚಿವಾಲಯ

ಸೌದಿಯಲ್ಲಿ ಚಿಕಿತ್ಸೆ, ಬಳಿಕ ಯುಎಇಗೆ ಏರ್‌ಲಿಫ್ಟ್

ತಬೂಕ್‌ನಲ್ಲಿ ಸ್ಮಿತ್‌ಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಅಲ್ಲಿನ ವೈದ್ಯರು ಅವರ ತಲೆಬುರುಡೆಯನ್ನು ಪುನರ್‌ನಿರ್ಮಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಯುಎಇಗೆ ಏರ್‌ಲಿಫ್ಟ್ ಮಾಡಲಾಯಿತು. ಸದ್ಯ ಅವರು ಅಬುಧಾಬಿಯ ಮಿಲಿಟರಿ ಆಸ್ಪತ್ರೆಯಲ್ಲಿ ವಿಶೇಷ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಟುಂಬದ ಸದಸ್ಯರಿಗೂ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಸಂಭಾಷಣೆಯಲ್ಲಿ ಸ್ಮಿತ್ ತಮ್ಮ ಅನುಭವವನ್ನು ವಿವರಿಸಿದ್ದರು. ಗಂಭೀರವಾಗಿ ಗಾಯಗೊಂಡು ನೆಲದ ಮೇಲೆ ಬಿದ್ದಿದ್ದರೂ ವಿಮಾನ ಕೆಳಕ್ಕೆ ಇಳಿಯುತ್ತಿರುವುದು ಅವರಿಗೆ ತಿಳಿದಿತ್ತು ಎಂದು ಅವರು ಹೇಳಿದರು. “ನಾನು ಗಾಯಗೊಂಡು ನೆಲದ ಮೇಲೆ ಬಿದ್ದಿದ್ದೆ. ಆದರೆ ಕೊನೆಯ ಬಾರಿ ಬಾಗಿಲು ತೆರೆಯಲು ನನ್ನನ್ನು ನಾನೇ ಒತ್ತಾಯಿಸಿಕೊಂಡೆ. ನಾನು ನನ್ನ ಪ್ರಾಣಕ್ಕಾಗಿ ಹೋರಾಡುತ್ತಿದ್ದೆ. ಅದೇ ವೇಳೆ ಇತರರನ್ನು ಸಾಯಲು ಬಿಡುವುದಿಲ್ಲ ಎಂದು ನನಗೆ ತಿಳಿದಿತ್ತು” ಎಂದು ಸ್ಮಿತ್ ಮೋದಿ ಅವರಿಗೆ ಹೇಳಿದ್ದರು.

ಈ ಘಟನೆಯಲ್ಲಿ ಸ್ಮಿತ್ ಅವರ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಅವರನ್ನು ಶ್ಲಾಘಿಸಿದ್ದಾರೆ. ವಿಮಾನದಲ್ಲಿ ನಡೆದ ದಾಳಿ, ಸಹ-ಪೈಲಟ್‌ನ ಉದ್ದೇಶ ಮತ್ತು ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ಯುಎಇ ಸೇರಿದಂತೆ ಸಂಬಂಧಿತ ಅಧಿಕಾರಿಗಳ ತನಿಖೆ ಮುಂದುವರೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ