ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ

ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ
ಇಂಡೋನೇಷ್ಯಾದಲ್ಲಿ ಫುಟ್​ಬಾಲ್ ಅಭಿಮಾನಿಗಳ ದಾಂಧಲೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 02, 2022 | 8:11 PM

ಜಕಾರ್ತಾ:  ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್​ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್​ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರೆಮಾ ಎಫ್​ಸಿ ಮತ್ತು ಪೆರ್​ಸೆಬಯಾ ಸುರಬಯ ಫುಟ್​ಬಾಲ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಸೋತ ತಂಡದ ಬೆಂಬಲಿಗರು ಏಕಾಏಕಿ ಕ್ರೀಡಾಂಗಣಕ್ಕೆ ನುಗ್ಗಿದರು. ಮೈದಾನಕ್ಕೆ ನುಗ್ಗಿದ ಅಭಿಮಾನಿಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದರು. ಇದರಿಂದ ಕಾಲ್ತುಳಿತ ಉಟಾಯಿತು. ಹಲವರು ಉಸಿರುಗಟ್ಟಿ ಮೃತಪಟ್ಟರು. ಸ್ಥಳೀಯ ಸುದ್ದಿಮಾಧ್ಯಮಗಳು ಪ್ರಸಾರ ಮಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕುಗಳಲ್ಲಿ ಮಲಾಂಗ್​ನಲ್ಲಿ ಜನರು ಮೈದಾನದತ್ತ ಓಡುವುದು ಮತ್ತು ಶವಗಳನ್ನು ಸುತ್ತಿಟ್ಟಿರುವ ಬ್ಯಾಗ್​ಗಳ ದೃಶ್ಯಗಳು ಇವೆ.

ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್​ಬಾಲ್ ಕ್ಲಬ್ ಆಗಿರುವ ‘ಬಿಆರ್​ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್​ಐ ಲಿಗಾ-1 ತಂಡವು ಪೆರ್​ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್​ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದಲ್ಲಿ ಈ ಹಿಂದೆಯೂ ಹಲವು ಬಾರಿ ಫುಟ್​ಬಾಲ್ ಪಂದ್ಯಗಳ ವೇಳೆ ಹಿಂಸಾಚಾರ ನಡೆದಿತ್ತು. ಹಲವು ಕ್ಲಬ್​ಗಳ ನಡುವೆ ವೈಷಮ್ಯ ಇರುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿದೆ. ಜನಪ್ರಿಯ ತಂಡಗಳ ಅಭಿಮಾನಿಗಳು ಸೋಲು-ಗೆಲುವುಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿ, ಹಿಂಸಾಚಾರಕ್ಕೆ ಕಾರಣರಾಗುತ್ತಾರೆ.

Published On - 7:15 am, Sun, 2 October 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್