AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ನಂತರ ಮೊದಲ ಬಾರಿ ದೂರವಾಣಿ ಮೂಲಕ ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ಜತೆ ಅಮೆರಿಕ ಅಧ್ಯಕ್ಷ ಜೊ ಬಿಡೆನ್ ಸಂಭಾಷಣೆ

ಬೀಜಿಂಗ್ ಮತ್ತು ವಾಷಿಂಗ್ಟನ್ ನಡುವೆ ಹೆಚ್ಚುತ್ತಿರುವ ಪೈಪೋಟಿಯನ್ನು ನಿರ್ವಹಿಸುವ ಉದ್ದೇಶದಿಂದ ಇಬ್ಬರು ನಾಯಕರು "ವಿಶಾಲವಾದ, ಕಾರ್ಯತಂತ್ರದ ಚರ್ಚೆ" ನಡೆಸಿದ್ದಾರೆ ಎಂದು ಶ್ವೇತಭವನವು ಬಿಡೆನ್-ಷಿ ಫೋನ್ ಕರೆಯನ್ನು ದೃಢಪಡಿಸುವ ಹೇಳಿಕೆಯನ್ನು ನೀಡಿದೆ.

ಏಳು ತಿಂಗಳ ನಂತರ ಮೊದಲ ಬಾರಿ ದೂರವಾಣಿ ಮೂಲಕ ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ಜತೆ ಅಮೆರಿಕ ಅಧ್ಯಕ್ಷ ಜೊ ಬಿಡೆನ್ ಸಂಭಾಷಣೆ
ಜೊ ಬಿಡೆನ್-ಷಿ ಜಿಂಗ್ ಪಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 10, 2021 | 5:24 PM

Share

ವಾಷಿಂಗ್ಟನ್: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಶುಕ್ರವಾರ ಬೆಳಿಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಜಗತ್ತಿನ ಬಲಿಷ್ಠ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸಿದ್ದಾರೆ. ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಶುಕ್ರವಾರ ಬೆಳಿಗ್ಗೆ ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಎಂದು ಚೀನಾದ ಅಧಿಕೃತ ಸುದ್ದಿ ಸಂಸ್ಥೆ ಕ್ಸಿನ್ಹುವಾ ಹೇಳಿಕೆಯಲ್ಲಿ ತಿಳಿಸಿದೆ.

“ಉಭಯ ನಾಯಕರು ಸ್ಪಷ್ಟ, ಆಳವಾದ ಮತ್ತು ವಿಶಾಲವಾದ ಕಾರ್ಯತಂತ್ರದ ಸಂವಹನ ಮತ್ತು ದ್ವಿಪಕ್ಷೀಯ ಸಂಬಂಧಗಳು ಮತ್ತು ಹಂಚಿಕೆಯ ಹಿತಾಸಕ್ತಿಯ ಸಂಬಂಧಿತ ವಿಷಯಗಳ ವಿನಿಮಯವನ್ನು ಮಾಡಿದ್ದರು” ಎಂದು ಕ್ಸಿನ್ಹುವಾ ವರದಿ ಹೇಳಿದೆ.

ಬೀಜಿಂಗ್ ಮತ್ತು ವಾಷಿಂಗ್ಟನ್ ನಡುವೆ ಹೆಚ್ಚುತ್ತಿರುವ ಪೈಪೋಟಿಯನ್ನು ನಿರ್ವಹಿಸುವ ಉದ್ದೇಶದಿಂದ ಇಬ್ಬರು ನಾಯಕರು “ವಿಶಾಲವಾದ, ಕಾರ್ಯತಂತ್ರದ ಚರ್ಚೆ” ನಡೆಸಿದ್ದಾರೆ ಎಂದು ಶ್ವೇತಭವನವು ಬಿಡೆನ್-ಷಿ ಫೋನ್ ಕರೆಯನ್ನು ದೃಢಪಡಿಸುವ ಹೇಳಿಕೆಯನ್ನು ನೀಡಿದೆ.

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಚೀನಾದ ನಾಯಕ ಷಿ ಜಿನ್‌ಪಿಂಗ್ ಅವರು 90 ನಿಮಿಷಗಳ ಕಾಲ ಮಾತನಾಡಿದರು. ಏಳು ತಿಂಗಳ ನಂತರ ತಮ್ಮ ಮೊದಲ ಮಾತುಕತೆಯಲ್ಲಿ ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಸ್ಪರ್ಧೆಯು ಸಂಘರ್ಷಕ್ಕೆ ತಿರುಗದಂತೆ ನೋಡಿಕೊಳ್ಳುವ ಅಗತ್ಯವನ್ನು ಚರ್ಚಿಸಿದರು ಎಂದು  ರಾಯಿಟರ್ಸ್ ವರದಿ ಮಾಡಿದೆ.

ಸಂವಾದವು ಆರ್ಥಿಕ ಸಮಸ್ಯೆಗಳು, ಹವಾಮಾನ ಬದಲಾವಣೆ ಮತ್ತು ಕೊವಿಡ್ -19 ಮೇಲೆ ಕೇಂದ್ರೀಕರಿಸಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಎರಡು ದೇಶಗಳ ನಡುವೆ “ಸ್ಪರ್ಧೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಯುನೈಟೆಡ್ ಸ್ಟೇಟ್ಸ್ ನಡೆಸುತ್ತಿರುವ ಪ್ರಯತ್ನದ ಭಾಗ” ಎಂದು ಚರ್ಚೆಯನ್ನು ಜೋ ಬಿಡನ್ ಸ್ಪಷ್ಟಪಡಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

“ಇಂಡೋ-ಪೆಸಿಫಿಕ್ ಮತ್ತು ಪ್ರಪಂಚದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯಲ್ಲಿ ಅಮೆರಿದ ನಿರಂತರ ಆಸಕ್ತಿಯನ್ನು ಅಧ್ಯಕ್ಷ ಬಿಡೆನ್ ಒತ್ತಿಹೇಳಿದ್ದಾರೆ. ಸ್ಪರ್ಧೆಯು ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಉಭಯ ರಾಷ್ಟ್ರಗಳ ಜವಾಬ್ದಾರಿಯನ್ನು ಇಬ್ಬರು ನಾಯಕರು ಚರ್ಚಿಸಿದರು ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.

ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಗುಂಪು ಅಧಿಕಾರಕ್ಕೆ ಬಂದ ಅಫ್ಘಾನಿಸ್ತಾನದಲ್ಲಿನ ತ್ವರಿತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೋ ಬಿಡೆನ್ ಮತ್ತು ಷಿ ಜಿನ್‌ಪಿಂಗ್ ನಡುವಿನ ಕರೆ ನಡೆದಿದೆ. ಈ ವಾರದ ಆರಂಭದಲ್ಲಿ, ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಮಧ್ಯಂತರ ಸರ್ಕಾರ ರಚನೆಯನ್ನು ಘೋಷಿಸಿತು.

ಇದನ್ನೂ ಓದಿ: ನಾನು ಕಾಶ್ಮೀರಿ ಪಂಡಿತ್, ವೈಷ್ಣೋ ದೇವಿ ಭೇಟಿ ನಂತರ ಮನೆಗೆ ಬಂದಿದ್ದೇನೆ ಎಂದು ಅನಿಸುತ್ತಿದೆ: ರಾಹುಲ್ ಗಾಂಧಿ

(For first time in seven months Chinese President Xi Jinping held a phone conversation with US President Joe Biden)

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ