AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ಚುನಾವಣೆಯನ್ನು ರದ್ದುಗೊಳಿಸಿ; ಮಾಜಿ ಪ್ರಧಾನಿ ಶೇಖ್ ಹಸೀನಾ ಒತ್ತಾಯ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಇಂದು ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಇಂದು ಚುನಾವಣೆ ಮುಗಿದ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿ ನಡೆದ ಚುನಾವಣೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. 2024ರ ಸಾಮೂಹಿಕ ಪ್ರತಿಭಟನೆಗಳ ಬಳಿಕ ಶೇಖ್ ಹಸೀನಾ ಅವರ ಸರ್ಕಾರ ಪತನವಾಗಿತ್ತು. ಅದಾದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ.

ಬಾಂಗ್ಲಾದೇಶದ ಚುನಾವಣೆಯನ್ನು ರದ್ದುಗೊಳಿಸಿ; ಮಾಜಿ ಪ್ರಧಾನಿ ಶೇಖ್ ಹಸೀನಾ ಒತ್ತಾಯ
Shiekh HasinaImage Credit source: PTI
ಸುಷ್ಮಾ ಚಕ್ರೆ
|

Updated on: Feb 12, 2026 | 9:28 PM

Share

ನವದೆಹಲಿ, ಫೆಬ್ರವರಿ 12: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶದ ಚುನಾವಣೆ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ. ಇಂದು ನಡೆದ ಚುನಾವಣೆಗಳು ಸಂವಿಧಾನಬಾಹಿರವಾಗಿದ್ದವು ಎಂದು ಆರೋಪಿಸಿದ ಮಾಜಿ ಪ್ರಧಾನಿ ಶೇಕ್ ಹಸೀನಾ “ಈ ಮತದಾರರಿಲ್ಲದ, ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ಚುನಾವಣೆಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಅಕ್ರಮಗಳಿವೆ ಎಂದು ಕೂಡ ಶೇಖ್ ಹಸೀನಾ ಆರೋಪಿಸಿದ್ದಾರೆ. “ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ ವಿಧಾನಗಳ ಮೂಲಕ ಅಧಿಕಾರ ವಹಿಸಿಕೊಂಡ ಮಹಮ್ಮದ್ ಯೂನಸ್ ಆಯೋಜಿಸಿದ ಇಂದಿನ ಚುನಾವಣೆಯು ಸಂವಿಧಾನಬಾಹಿರವಾಗಿದೆ. ಜನರ ಮತದಾನದ ಹಕ್ಕುಗಳು, ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಂವಿಧಾನವನ್ನು ಕಡೆಗಣಿಸಿ, ಅವಾಮಿ ಲೀಗ್ ಇಲ್ಲದೆ ಮತ್ತು ಮತದಾರರಿಲ್ಲದೆ ಚುನಾವಣೆಯನ್ನು ಏರ್ಪಡಿಸಲಾಗಿದೆ” ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಸುಳ್ಳು ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು, ಎಲ್ಲಾ ರಾಜಕೀಯ ಕೈದಿಗಳು ಹಾಗೂ ಶಿಕ್ಷಕರು, ಪತ್ರಕರ್ತರು, ಬುದ್ಧಿಜೀವಿಗಳು ಮತ್ತು ವೃತ್ತಿಪರರನ್ನು ಬಿಡುಗಡೆ ಮಾಡಬೇಕು, ಅವಾಮಿ ಲೀಗ್‌ನ ಚಟುವಟಿಕೆಗಳ ಮೇಲೆ ವಿಧಿಸಲಾದ ಅಮಾನತು ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರದ ಅಡಿಯಲ್ಲಿ ಮುಕ್ತ, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಚುನಾವಣೆಯನ್ನು ಏರ್ಪಡಿಸುವ ಮೂಲಕ ಜನರ ಮತದಾನದ ಹಕ್ಕುಗಳನ್ನು ಪುನಃಸ್ಥಾಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಜನರ ಮತದಾನದ ಹಕ್ಕುಗಳು, ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಸಂವಿಧಾನವನ್ನು ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವಾಮಿ ಲೀಗ್ ಬೆಂಬಲಿಗರು ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳು, ಬಂಧನಗಳು, ಬೆದರಿಕೆಗಳು ಮತ್ತು ಭಯದ ವಾತಾವರಣ ಕಂಡುಬಂದಿದೆ ಎಂದು ಶೇಖ್ ಹಸೀನಾ ಹೇಳಿದ್ದಾರೆ.

ಇದನ್ನೂ ಓದಿ: Bangladesh Elections 2026: ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ, ಅವಾಮಿ ಲೀಗ್ ಸ್ಪರ್ಧೆಯಿಂದ ಹೊರಕ್ಕೆ

ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ತಾರಿಕ್ ರೆಹಮಾನ್ ಮುಂದಿನ ಸರ್ಕಾರವನ್ನು ರಚಿಸಲು ಪ್ರಮುಖ ಸ್ಪರ್ಧಿಯಾಗಿದ್ದಾರೆ. ಅವರು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರರಾಗಿದ್ದು, 17 ವರ್ಷಗಳ ಕಾಲ ಲಂಡನ್‌ನಲ್ಲಿದ್ದ ಅವರು ಕಳೆದ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳಿದರು. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಪುನರ್ನಿರ್ಮಿಸಲು, ಕಾನೂನಿನ ನಿಯಮವನ್ನು ಪುನಃಸ್ಥಾಪಿಸಲು ಮತ್ತು ಹೆಣಗಾಡುತ್ತಿರುವ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ರೆಹಮಾನ್ ಪ್ರತಿಜ್ಞೆ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು