Silvio Berlusconi Death: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ನಿಧನ

ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ಅವರು ಇಂದು (ಜೂ.12) ನಿಧನ ಹೊಂದಿದ್ದಾರೆ ಎಂದು ಇಟಾಲಿಯನ್ ಮಾಧ್ಯಮ ವರದಿ ಮಾಡಿದೆ.

Silvio Berlusconi Death: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ನಿಧನ
ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 12, 2023 | 2:46 PM

ರೋಮ್: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ (Silvio Berlusconi) ಅವರು ಇಂದು (ಜೂ.12) ನಿಧನ ಹೊಂದಿದ್ದಾರೆ ಎಂದು ಇಟಾಲಿಯನ್ ಮಾಧ್ಯಮ ವರದಿ ಮಾಡಿದೆ. ಲೈಂಗಿಕ ಹಗರಣಗಳು ಮತ್ತು ಭ್ರಷ್ಟಾಚಾರ ಆರೋಪಗಳಿಂದ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ಮಿಲನ್‌ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಇಟಾಲಿಯನ್ ಮಾಧ್ಯಮ ವರದಿ ಮಾಡಿದೆ.

ಸಿಲ್ವಿಯೊ ಬೆರ್ಲುಸ್ಕೋನಿ ಆರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ, ಡಿಸ್ಚಾರ್ಜ್ ಆಗಿ ಮೂರು ವಾರಗಳ ನಂತರ ರಕ್ತ ಕ್ಯಾನ್ಸರ್​​ನ ಪರೀಕ್ಷೆಗೆಂದು ಶುಕ್ರವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಿಲನ್‌ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

ಸಿಲ್ವಿಯೊ ಬೆರ್ಲುಸ್ಕೋನಿ ಅವರಿಗೆ ಅಪರೂಪದ ರಕ್ತದ ಕ್ಯಾನ್ಸರ್‌ ಇದೆ ಎಂದು ವೈದ್ಯರು ಹೇಳಿದ್ದರು. ಸಿಲ್ವಿಯೊ ಬೆರ್ಲುಸ್ಕೋನಿ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2016 ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2020ರಲ್ಲಿ ಕರೋನವೈರಸ್​​ನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:Narendra Modi: ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ, ಪ್ರಮುಖ ನಾಯಕ; ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಶ್ಲಾಘನೆ

ಸಿಲ್ವಿಯೋ ಬೆರ್ಲುಸ್ಕೋನಿ ಅವರು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿಯ ಸಮ್ಮಿಶ್ರ ಸರ್ಕಾರದಲ್ಲಿ ಕಿರಿಯ ಸಚಿವರಾಗಿ ಹಾಗೂ ಬಲಪಂಥೀಯ ಫೋರ್ಜಾ ಇಟಾಲಿಯಾ ಪಕ್ಷದ ಮುಖ್ಯಸ್ಥರಾಗಿದ್ದರು. ಅವರು 1994 ಮತ್ತು 2011ರ ನಡುವೆ ಒಟ್ಟು ಒಂಬತ್ತು ವರ್ಷಗಳ ಕಾಲ ಮೂರು ಬಾರಿ ಇಟಲಿಯ ಪ್ರಧಾನ ಮಂತ್ರಿಯಾಗಿದ್ದರು. ಅವರು ತಮ್ಮ 33 ವರ್ಷದ ಗೆಳತಿ ಮಾರ್ಟಾ ಫಾಸಿನಾ, ಇಬ್ಬರು ಮಾಜಿ ಪತ್ನಿಯರು ಮತ್ತು ಐದು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:26 pm, Mon, 12 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ