AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ನೇಪಾಳದ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅವರನ್ನು ಶನಿವಾರ ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಯ ವೇಳೆ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಾಲೆನ್ ಶಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ
ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿImage Credit source: TV9 Network
ಗಣಪತಿ ಶರ್ಮಾ
|

Updated on:Mar 28, 2026 | 10:43 AM

Share

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.

ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ. ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲಪ್ರಯೋಗ ಮಾಡಿದ್ದಲ್ಲದೆ, ಹಿಂಸಾಚಾರವನ್ನು ತಡೆಯುವಲ್ಲಿ ಒಲಿ ಸರ್ಕಾರ ವಿಫಲವಾಗಿತ್ತು ಎಂದು ತನಿಖಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿಶೇಷವೆಂದರೆ, ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಪ್ರಮುಖ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ:  ಭಾರತಕ್ಕೆ ಶಾಕ್ ನೀಡಲಿದೆಯೇ ರಷ್ಯಾ? ಏಪ್ರಿಲ್ 1 ರಿಂದ ಕಚ್ಚಾ ತೈಲ ರಫ್ತು ಸ್ಥಗಿತ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ನೂತನ ಗೃಹ ಸಚಿವ ಸುದನ್ ಗುರುಂಗ್, ‘ಕೊಟ್ಟ ಮಾತಿನಂತೆ ನಾವು ನಡೆದಿದ್ದೇವೆ. ಕಾನೂನಿಗಿಂತ ಯಾರೂ ಮೇಲಲ್ಲ. ಇದು ಯಾರ ವಿರುದ್ಧದ ಸೇಡಲ್ಲ, ಬದಲಾಗಿ ನ್ಯಾಯದ ಆರಂಭವಷ್ಟೇ’ ಎಂದು ಉಲ್ಲೇಖಿಸಿದ್ದಾರೆ. ಸೆಪ್ಟೆಂಬರ್ 8 ರಂದು ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಹತ್ಯೆ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:41 am, Sat, 28 March 26

Follow Us
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್