ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ​ ತುರ್ತು ಭೂಸ್ಪರ್ಶ ನಡೆಸಲಾಯಿತು.

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಇಮ್ರಾನ್ ಖಾನ್
Image Credit source: PTI
Updated By: Rakesh Nayak Manchi

Updated on: Oct 08, 2022 | 9:35 PM

ರಾವಲ್ಪಿಂಡಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ​ ತುರ್ತು ಭೂಸ್ಪರ್ಶ ನಡೆಸಲಾಯಿತು. ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಬಳಿ ಇರುವ ಆಟದ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಬಳಿಕ ಇಮ್ರಾನ್ ಖಾನ್ ರಸ್ತೆ ಮೂಲಕ ಪ್ರಯಾಣ ಬೆಳೆಸಿದರು.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥರು ಡೇರಾ ಇಸ್ಮಾಯಿಲ್ ಖಾನ್‌ನಿಂದ ಇಸ್ಲಾಮಾಬಾದ್‌ಗೆ ಹಿಂತಿರುಗುತ್ತಿದ್ದಾಗ ತುರ್ತು ಭೂಸ್ಪರ್ಶ ನಡೆಸಲಾಗಿದೆ ಎಂದು ಪಕ್ಷವು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪೈಲಟ್ ಅಡಿಯಾಲಾ ಟೌನ್‌ನ ಹಳ್ಳಿಯೊಂದರ ಬಳಿ ತುರ್ತು ಭೂಸ್ಪರ್ಶ ಮಾಡಿದರು. ನಂತರ ಇಮ್ರಾನ್ ಖಾನ್ ಅವರು ರಸ್ತೆ ಮೂಲಕ ತಮ್ಮ ನಿವಾಸಕ್ಕೆ ತೆರಳಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಟ್ವಿಟರ್‌ನಲ್ಲಿ ಪಕ್ಷವು ಹಂಚಿಕೊಂಡ ವೀಡಿಯೊದಲ್ಲಿ ಇಮ್ರಾನ್  ಖಾನ್ ಸ್ಥಳೀಯರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಅಲ್ಲದೆ ಆಟದ ಮೈದಾನದಲ್ಲಿ ಮಕ್ಕಳು ಆಟವನ್ನು ನಿಲ್ಲಿಸಿ ಇಮ್ರಾನ್ ಮಾತುಕತೆ ನಡೆಯುತ್ತಿದ್ದ ಸ್ಥಳದಲ್ಲಿ ಸೇರಿರುವುದನ್ನು ಕಾಣಬಹುದು.

ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Sat, 8 October 22