AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿ, ಜೈಶಂಕರ್​​​ಗೆ ಆಹ್ವಾನ ನೀಡಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದ ವಿದೇಶಾಂಗ ಮಂತ್ರಿ ಎಸ್​​​. ಜೈಶಂಕರ್​​​ ಅವರಿಗೆ ನಮ್ಮ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. ಜೈಶಂಕರ್​​​ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯಲ್ಲಿ ನಮ್ಮ ಜತೆಗೆ ನೀವು ನಿಲ್ಲಬೇಕು, ಪಾಕಿಸ್ತಾನ ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಾಯಕರಿಗೆ ತಿಳಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ನಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿ, ಜೈಶಂಕರ್​​​ಗೆ ಆಹ್ವಾನ ನೀಡಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 05, 2024 | 12:43 PM

Share

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕ್​​ನಲ್ಲಿ ತಮ್ಮ ಪಕ್ಷದ ಪರವಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಭಾರತದ ವಿದೇಶಾಂಗ ಮಂತ್ರಿ ಎಸ್​​​. ಜೈಶಂಕರ್​​​ ಅವರಿಗೆ ಆಹ್ವಾನ ನೀಡಿದ್ದಾರೆ, ಜೈಶಂಕರ್​​​ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ತಮ್ಮ ಹೋರಾಟದಲ್ಲಿ ಭಾಗವಹಿಸುವಂತೆ ಹಾಗೂ ಭಾಷಣ ಮಾಡುವಂತೆ ಆಹ್ವಾನ ನೀಡಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಪ್ರತಿಭಟನೆಗೆ ಭಾರತದ ಸಹಾಯ ಕೇಳಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ಪ್ರಾಂತೀಯ ಮಾಹಿತಿ ಸಲಹೆಗಾರ ಬ್ಯಾರಿಸ್ಟರ್ ಅಲಿ ಸೈಫ್ ಅವರು ‘ಪಾಕಿಸ್ತಾನದ ರಾಜ್ಯವನ್ನು ಬಲಪಡಿಸಲು’ ಪಿಟಿಐನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಭಾರತವನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಕಾರ್ಯಕರ್ತರು ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಭಾರತೀಯ ವಿದೇಶಾಂಗ ಸಚಿವರನ್ನು ಆಹ್ವಾನಿಸಿದೆ ಎಂದು ಪಿಟಿಐ ಕೂಡ ವರದಿ ಮಾಡಿದೆ.

ಜೈಶಂಕರ್ ಅವರು ನಮ್ಮ ಜತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಮ್ಮ ಜನರೊಂದಿಗೆ ಮಾತನಾಡಬೇಕು, ಪಾಕಿಸ್ತಾನವು ಪ್ರಬಲ ಪ್ರಜಾಪ್ರಭುತ್ವವಾಗಿದ್ದು, ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ ಎಂದು ಅಲಿ ಸೈಫ್ ಹೇಳಿದರು. ವಿಶ್ವ ನಾಯಕರು ಪಾಕಿಸ್ತಾನಕ್ಕೆ ಬರುತ್ತಿದ್ದಾರೆ ಮತ್ತು “ನಾವು ಅವರಿಗೆ ನಮ್ಮ ಪ್ರಜಾಪ್ರಭುತ್ವವನ್ನು ತೋರಿಸಲು ಬಯಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: SCO ಶೃಂಗಸಭೆಗಾಗಿ ಅಕ್ಟೋಬರ್ 15, 16ರಂದು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಜೈಶಂಕರ್

ಇನ್ನು ಪಾಕಿಸ್ತಾನದಲ್ಲಿ ನಡೆಯುವ ಎಸ್‌ಸಿಒ ಶೃಂಗಸಭೆಯಲ್ಲಿ ಜೈಶಂಕರ್​​​​ ಅವರು ಭಾಗವಹಿಸಲಿದ್ದಾರೆ. ಈಗಾಗಲೇ ಅವರಿಗೆ ಅಲ್ಲಿ ನೀಡಬೇಕಾದ ಭದ್ರತೆ ಬಗ್ಗೆ ಅಲ್ಲಿನ ಗೃಹ ಹಾಗೂ ರಕ್ಷಣಾ ಸಚಿವಾಲಯಕ್ಕೆ ತಿಳಿಸಲಾಗಿದೆ. ಅವರು ಕೂಡ ಭದ್ರತೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಇನ್ನು ಪಾಕಿಸ್ತಾನ ಭಯೋತ್ಪಾದನೆ ಬಗ್ಗೆ ಸರಿಯಾದ ನಿಲುವು ತೆಗೆದುಕೊಳ್ಳುವರೆಗೆ ಯಾವುದೇ ಒಪ್ಪಂದವನ್ನು ಮುಂದುರಿಸುವುದಿಲ್ಲ ಎಂದು ಹೇಳಿದೆ. ಆದರೆ ಭಾರತ ಎಸ್‌ಸಿಒ ಶೃಂಗಸಭೆಯಲ್ಲಿ ರಾಜತಂತ್ರಿಕಾ ಆಧಾರದಲ್ಲಿ ನಡೆಯಲಿದೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ