ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕ್ನಲ್ಲಿ ತಮ್ಮ ಪಕ್ಷದ ಪರವಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಭಾರತದ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರಿಗೆ ಆಹ್ವಾನ ನೀಡಿದ್ದಾರೆ, ಜೈಶಂಕರ್ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ತಮ್ಮ ಹೋರಾಟದಲ್ಲಿ ಭಾಗವಹಿಸುವಂತೆ ಹಾಗೂ ಭಾಷಣ ಮಾಡುವಂತೆ ಆಹ್ವಾನ ನೀಡಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಪ್ರತಿಭಟನೆಗೆ ಭಾರತದ ಸಹಾಯ ಕೇಳಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ಪ್ರಾಂತೀಯ ಮಾಹಿತಿ ಸಲಹೆಗಾರ ಬ್ಯಾರಿಸ್ಟರ್ ಅಲಿ ಸೈಫ್ ಅವರು ‘ಪಾಕಿಸ್ತಾನದ ರಾಜ್ಯವನ್ನು ಬಲಪಡಿಸಲು’ ಪಿಟಿಐನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಭಾರತವನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಕಾರ್ಯಕರ್ತರು ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಭಾರತೀಯ ವಿದೇಶಾಂಗ ಸಚಿವರನ್ನು ಆಹ್ವಾನಿಸಿದೆ ಎಂದು ಪಿಟಿಐ ಕೂಡ ವರದಿ ಮಾಡಿದೆ.
ಜೈಶಂಕರ್ ಅವರು ನಮ್ಮ ಜತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಮ್ಮ ಜನರೊಂದಿಗೆ ಮಾತನಾಡಬೇಕು, ಪಾಕಿಸ್ತಾನವು ಪ್ರಬಲ ಪ್ರಜಾಪ್ರಭುತ್ವವಾಗಿದ್ದು, ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ ಎಂದು ಅಲಿ ಸೈಫ್ ಹೇಳಿದರು. ವಿಶ್ವ ನಾಯಕರು ಪಾಕಿಸ್ತಾನಕ್ಕೆ ಬರುತ್ತಿದ್ದಾರೆ ಮತ್ತು “ನಾವು ಅವರಿಗೆ ನಮ್ಮ ಪ್ರಜಾಪ್ರಭುತ್ವವನ್ನು ತೋರಿಸಲು ಬಯಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: SCO ಶೃಂಗಸಭೆಗಾಗಿ ಅಕ್ಟೋಬರ್ 15, 16ರಂದು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಜೈಶಂಕರ್
ಇನ್ನು ಪಾಕಿಸ್ತಾನದಲ್ಲಿ ನಡೆಯುವ ಎಸ್‌ಸಿಒ ಶೃಂಗಸಭೆಯಲ್ಲಿ ಜೈಶಂಕರ್ ಅವರು ಭಾಗವಹಿಸಲಿದ್ದಾರೆ. ಈಗಾಗಲೇ ಅವರಿಗೆ ಅಲ್ಲಿ ನೀಡಬೇಕಾದ ಭದ್ರತೆ ಬಗ್ಗೆ ಅಲ್ಲಿನ ಗೃಹ ಹಾಗೂ ರಕ್ಷಣಾ ಸಚಿವಾಲಯಕ್ಕೆ ತಿಳಿಸಲಾಗಿದೆ. ಅವರು ಕೂಡ ಭದ್ರತೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಇನ್ನು ಪಾಕಿಸ್ತಾನ ಭಯೋತ್ಪಾದನೆ ಬಗ್ಗೆ ಸರಿಯಾದ ನಿಲುವು ತೆಗೆದುಕೊಳ್ಳುವರೆಗೆ ಯಾವುದೇ ಒಪ್ಪಂದವನ್ನು ಮುಂದುರಿಸುವುದಿಲ್ಲ ಎಂದು ಹೇಳಿದೆ. ಆದರೆ ಭಾರತ ಎಸ್‌ಸಿಒ ಶೃಂಗಸಭೆಯಲ್ಲಿ ರಾಜತಂತ್ರಿಕಾ ಆಧಾರದಲ್ಲಿ ನಡೆಯಲಿದೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ