ರಷ್ಯಾದ ವೋಲ್ಗಾ ನದಿಯಲ್ಲಿ ಈಜಾಡುತ್ತಿದ್ದ ತಮಿಳುನಾಡಿನ 4 ಯುವಕರ ಸಾವು

ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ಅಧ್ಯಯನ ಮಾಡುತ್ತಿದ್ದ ತಮಿಳುನಾಡಿನ ನಾಲ್ವರು ಯುವಕರು ಶನಿವಾರ ವೋಲ್ಗಾ ನದಿಯಲ್ಲಿ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳೆಲ್ಲ ಚೆನ್ನೈ ಮೂಲದವರೆಂದು ತಿಳಿದುಬಂದಿದೆ. ಒಟ್ಟೇರಿಯದ ಎಂ ಸ್ಟೀಫನ್ (20), ತಾರಾಪುರದ ಮೊಹಮ್ಮದ್ ಆಶಿಕ್, ತಿಟ್ಟಕುಡಿನ ರಾಮು ವಿಘ್ನೇಶ್ ಮತ್ತು ಸೇಲಂನ ತಲೈವಾಸಲ್ ನ ಮನೋಜ್ ಆನಂದ್ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ನಾಲ್ವರೂ ವೋಲ್ಗೊಗ್ರಾಡ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ನಾಲ್ವರು ಸೇರಿದಂತೆ ಕೆಲವು ವಿದ್ಯಾರ್ಥಿಗಳು ನದಿಯಲ್ಲಿ […]

ರಷ್ಯಾದ ವೋಲ್ಗಾ ನದಿಯಲ್ಲಿ ಈಜಾಡುತ್ತಿದ್ದ ತಮಿಳುನಾಡಿನ 4 ಯುವಕರ ಸಾವು
ಸಾಧು ಶ್ರೀನಾಥ್​

Updated on: Aug 11, 2020 | 4:47 PM

ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ಅಧ್ಯಯನ ಮಾಡುತ್ತಿದ್ದ ತಮಿಳುನಾಡಿನ ನಾಲ್ವರು ಯುವಕರು ಶನಿವಾರ ವೋಲ್ಗಾ ನದಿಯಲ್ಲಿ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತ ವಿದ್ಯಾರ್ಥಿಗಳೆಲ್ಲ ಚೆನ್ನೈ ಮೂಲದವರೆಂದು ತಿಳಿದುಬಂದಿದೆ. ಒಟ್ಟೇರಿಯದ ಎಂ ಸ್ಟೀಫನ್ (20), ತಾರಾಪುರದ ಮೊಹಮ್ಮದ್ ಆಶಿಕ್, ತಿಟ್ಟಕುಡಿನ ರಾಮು ವಿಘ್ನೇಶ್ ಮತ್ತು ಸೇಲಂನ ತಲೈವಾಸಲ್ ನ ಮನೋಜ್ ಆನಂದ್ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ನಾಲ್ವರೂ ವೋಲ್ಗೊಗ್ರಾಡ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ನಾಲ್ವರು ಸೇರಿದಂತೆ ಕೆಲವು ವಿದ್ಯಾರ್ಥಿಗಳು ನದಿಯಲ್ಲಿ ಈಜಲು ಹೋಗಿದ್ದರು, ಅವರಲ್ಲಿ ಒಬ್ಬ ನದಿಯಲ್ಲಿ ಮುಳುಗುವುದನ್ನು ಕಂಡ ಮಿಕ್ಕವರು ಆತನನ್ನು ರಕ್ಷಿಸಲು ತೆರಳಿದ್ದಾರೆ. ಆದರೆ ಇತರರು ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಷ್ಯಾದ ಸ್ಥಳೀಯ ಪೊಲೀಸರ ಸಹಾಯದಿಂದಾಗಿ ಕೆಲವು ಗಂಟೆಗಳ ನಂತರ, ನಾಲ್ವರ ಶವಗಳನ್ನು ಹೊರಗೆ ತೆಗೆಯಲಾಗಿದೆ.

ಭಾರತೀಯ ರಾಯಭಾರ ಕಚೇರಿಯ ಮೂಲಕ ವಿದ್ಯಾರ್ಥಿಗಳ ಕುಟುಂಬಗಳಿಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳ ಶವಗಳನ್ನು ಮರಳಿ ಮನೆಗೆ ತರುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕುಟುಂಬ ಸದಸ್ಯರು ಮುಖ್ಯಮಂತ್ರಿಯನ್ನು ಕೋರಿದ್ದಾರೆ. ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ವಿದೇಶಾಂಗ ಸಚಿವಾಲಯ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ತಕ್ಷಣ ಸಂಪರ್ಕಿಸಿ ನಾಲ್ವರ ಶವಗಳನ್ನು ತರಲು ವ್ಯವಸ್ಥೆ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us