AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Condoms: ಜ. 1ರಿಂದ 25 ವರ್ಷದೊಳಗಿನ ಯುವಕರಿಗೆ ಉಚಿತ ಕಾಂಡೋಮ್; ಫ್ರಾನ್ಸ್ ಸರ್ಕಾರ ಘೋಷಣೆ

2023ರ ಜನವರಿ 1ರಿಂದ ಫ್ರಾನ್ಸ್‌ನ ಮೆಡಿಕಲ್‌ ಶಾಪ್‌ಗಳಲ್ಲಿ 18ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು.

Free Condoms: ಜ. 1ರಿಂದ 25 ವರ್ಷದೊಳಗಿನ ಯುವಕರಿಗೆ ಉಚಿತ ಕಾಂಡೋಮ್; ಫ್ರಾನ್ಸ್ ಸರ್ಕಾರ ಘೋಷಣೆ
ಕಾಂಡೋಮ್‌
TV9 Web
| Edited By: |

Updated on:Dec 09, 2022 | 5:45 PM

Share

ನವದೆಹಲಿ: ಅನಗತ್ಯ ಗರ್ಭಧಾರಣೆ (Unwanted Pregnancy) ಮತ್ತು ಲೈಂಗಿಕ ರೋಗಗಳನ್ನು ನಿಯಂತ್ರಿಸುವ ಉದ್ದೇಶದಿಂದ ಜನವರಿ 1ರಿಂದ 18ರಿಂದ 25 ವರ್ಷದೊಳಗಿನ ಯುವಜನತೆಗೆ ಉಚಿತ ಕಾಂಡೋಮ್ (Free Condoms) ವಿತರಿಸಲು ಫ್ರಾನ್ಸ್​ ಸರ್ಕಾರ (French Government) ನಿರ್ಧರಿಸಿದೆ. ಈ ಬಗ್ಗೆ ಮಹತ್ವದ ಘೋಷಣೆ ಮಾಡಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್ (Emmanuel Macron), ಲೈಂಗಿಕ ರೋಗಗಳ (ಎಸ್‌ಟಿಡಿ) ಹರಡುವಿಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಮುಂದಿನ ವರ್ಷದಿಂದ ಫ್ರಾನ್ಸ್‌ನ ಯುವಜನರಿಗೆ ಮೆಡಿಕಲ್ ಶಾಪ್​ಗಳಲ್ಲಿ ಉಚಿತವಾಗಿ ಕಾಂಡೋಮ್‌ಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

“2023ರ ಜನವರಿ 1ರಿಂದ ಮೆಡಿಕಲ್‌ ಶಾಪ್‌ಗಳಲ್ಲಿ 18ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು” ಎಂದು ಮ್ಯಾಕ್ರನ್ ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಫ್ರಾನ್ಸ್‌ನಲ್ಲಿ 2020 ಮತ್ತು 2021ರಲ್ಲಿ STDಗಳ ದರವು ಸುಮಾರು 30% ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಜನರಲ್ಲಿ ಅನಗತ್ಯ ಗರ್ಭಧಾರಣೆಯನ್ನು ಕಡಿಮೆ ಮಾಡಲು ಮತ್ತು ಲೈಂಗಿಕವಾಗಿ ಹರಡುವ ರೋಗಗಳನ್ನು ತಡೆಯಲು 18ರಿಂದ 25 ವರ್ಷ ವಯಸ್ಸಿನವರಿಗೆ ಉಚಿತವಾಗಿ ಕಾಂಡೋಮ್‌ಗಳನ್ನು ಫಾರ್ಮಸಿಗಳು ಒದಗಿಸುತ್ತವೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ರಾನ್ಸ್​​​ ಸಂಸತ್​​​ನಲ್ಲಿ ಬಹುಮತ ಕಳೆದುಕೊಂಡ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್

ಏಡ್ಸ್ ಮತ್ತು ಇತರ ಲೈಂಗಿಕವಾಗಿ ಹರಡುವ ರೋಗಗಳ (STDs) ಹರಡುವಿಕೆಯನ್ನು ಎದುರಿಸಲು ಫ್ರಾನ್ಸ್​ನ ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಯಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿಗೆ ತರಲು ನಿರ್ಧರಿಸಿದೆ. ಅನಗತ್ಯ ಗರ್ಭಧಾರಣೆ ಮತ್ತು ಲೈಂಗಿಕ ರೋಗಗಳ (ಎಸ್‌ಟಿಡಿ) ಹರಡುವಿಕೆಯನ್ನು ನಿಯಂತ್ರಿಸಬೇಕಿದೆ. ಹೀಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರೆಂಚ್‌ ಸರ್ಕಾರ ತಿಳಿಸಿದೆ.

ಫ್ರಾನ್ಸ್​ ಸರ್ಕಾರ ಈಗಾಗಲೇ 25 ವರ್ಷದೊಳಗಿನ ಎಲ್ಲಾ ಮಹಿಳೆಯರಿಗೆ ಉಚಿತ ಗರ್ಭ ನಿರೋಧಕ ಮಾತ್ರೆಗಳನ್ನು ನೀಡುತ್ತಿದೆ. ಅದೇ ಮಾದರಿಯಲ್ಲಿ ಅನಗತ್ಯ ಗರ್ಭ ಧರಿಸುವಿಕೆಯನ್ನು ತಡೆಗಟ್ಟಲು ಉಚಿತ ಕಾಂಡೋಮ್‌ಗಳನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ 18 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೂ ಕಾಂಡೋಮ್‌ಗಳನ್ನು ವಿತರಿಸಲಾಗುವುದು ಎಂದು ಫ್ರೆಂಚ್‌ ಅಧ್ಯಕ್ಷ ಮ್ಯಾಕ್ರನ್ ಹೇಳಿದ್ದಾರೆ.

ಇದನ್ನೂ ಓದಿ: ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ

ಲೈಂಗಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಮತ್ತು ಅನಗತ್ಯ ಗರ್ಭಧಾರಣೆಯನ್ನು ತಡೆಯಲು ಯುವತಿಯರು ಗರ್ಭ ನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವುದಕ್ಕಿಂತ ಯುವಕರು ಕಾಂಡೋಮ್‌ ಬಳಸುವುದು ಉತ್ತಮ ಎಂದು ಫ್ರಾನ್ಸ್ ಅಧ್ಯಕ್ಷ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Fri, 9 December 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ