Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾನ್ಸ್​ನಲ್ಲೂ ಭುಗಿಲೆದ್ದ ಹಿಜಾಬ್ ಚರ್ಚೆ; ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರ ಸ್ಕಾರ್ಫ್ ಬ್ಯಾನ್ ಮಾಡುವುದಾಗಿ ಅಧ್ಯಕ್ಷೀಯ ಅಭ್ಯರ್ಥಿ ಘೋಷಣೆ

ಫ್ರಾನ್ಸ್​ನ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮರೀನ್ ಲೆ ಪೆನ್ ಅವರು ಸಾರ್ವಜನಿಕವಾಗಿ ಹಿಜಾಬ್ ಧರಿಸುವ ಮುಸ್ಲಿಮರಿಗೆ ದಂಡ ವಿಧಿಸುವುದಾಗಿ ಇಂದು ಪ್ರತಿಜ್ಞೆ ಮಾಡಿದ್ದಾರೆ.

ಫ್ರಾನ್ಸ್​ನಲ್ಲೂ ಭುಗಿಲೆದ್ದ ಹಿಜಾಬ್ ಚರ್ಚೆ; ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರ ಸ್ಕಾರ್ಫ್ ಬ್ಯಾನ್ ಮಾಡುವುದಾಗಿ ಅಧ್ಯಕ್ಷೀಯ ಅಭ್ಯರ್ಥಿ ಘೋಷಣೆ
ಫ್ರಾನ್ಸ್​ ಅಧ್ಯಕ್ಷೀಯ ಅಭ್ಯರ್ಥಿ ಮರೀನ್ ಲೆ ಪೆನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 07, 2022 | 7:30 PM

ಪ್ಯಾರೀಸ್​: ಕರ್ನಾಟಕದಲ್ಲಿ ಇತ್ತೀಚೆಗೆ ಹಿಜಾಬ್ (Hijab Row) ಗಲಾಟೆ ಭುಗಿಲೆದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ಕರ್ನಾಟಕದಲ್ಲಿ ಶಾಲೆ ಯೂನಿಫಾರ್ಮ್​ ಹಾಕಿಕೊಳ್ಳಬೇಕು ಮತ್ತು ಶಾಲೆ ಒಳಗೆ ಹಿಜಾಬ್ ಹಾಕುವಂತಿಲ್ಲ ಎಂದು ಕೋರ್ಟ್​ ತೀರ್ಪು ನೀಡಿತ್ತು. ಇದೀಗ ಫ್ರಾನ್ಸ್​ನಲ್ಲಿ (France) ಕೂಡ ಹಿಜಾಬ್​ ಚರ್ಚೆಗಳು ಶುರುವಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬ್ಯಾನ್​ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಫ್ರಾನ್ಸ್​ನ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮರೀನ್ ಲೆ ಪೆನ್ ಅವರು ಸಾರ್ವಜನಿಕವಾಗಿ ಹಿಜಾಬ್ ಧರಿಸುವ ಮುಸ್ಲಿಮರಿಗೆ ದಂಡ ವಿಧಿಸುವುದಾಗಿ ಇಂದು ಪ್ರತಿಜ್ಞೆ ಮಾಡಿದ್ದಾರೆ. ಮೊದಲ ಹಂತದ ಚುನಾವಣೆ ಬೆನ್ನಲ್ಲೇ ಅಭ್ಯರ್ಥಿಗಳು ಕೊನೆಯ ಹಂತದ ಪ್ರಚಾರ ನಡೆಸಿದ್ದಾರೆ.

ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಈ ಬಾರಿಯೂ ಗೆಲ್ಲುವ ಸಾಧ್ಯತೆಯಿದ್ದರೂ ಅಂತಿಮ ಹಂತದಲ್ಲಿ ಲೆ ಪೆನ್ ಭಾರೀ ಪೈಪೋಟಿ ನೀಡುವ ಸಾಧ್ಯತೆಯಿದೆ. ಫ್ರಾನ್ಸ್‌ನ ಸಾಂಪ್ರದಾಯಿಕ ಬಲ- ಮತ್ತು ಎಡ-ಪಂಥೀಯ ಪಕ್ಷಗಳು ಚುನಾವಣಾ ಸಮರವನ್ನು ಎದುರಿಸುತ್ತಿರುವಾಗ, ತೀವ್ರ-ಎಡಪಂಥೀಯ ಅಭ್ಯರ್ಥಿ ಜೀನ್-ಲುಕ್ ಮೆಲೆನ್‌ಚೋನ್ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾದ ಸಾಧ್ಯತೆಯಿದೆ.

ಇಂದು ಆರ್‌ಟಿಎಲ್ ರೇಡಿಯೊದೊಂದಿಗೆ ಮಾತನಾಡಿದ ಲೆ ಪೆನ್, ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶಿರಸ್ತ್ರಾಣವನ್ನು (ಹಿಜಾಬ್) ನಿಷೇಧಿಸುವ ನನ್ನ ಪ್ರತಿಜ್ಞೆಯನ್ನು ಕಾರ್ಯಗತಗೊಳಿಸಲಾಗುವುದು. ಕಾರ್‌ಗಳಲ್ಲಿ ಸೀಟ್‌ಬೆಲ್ಟ್ ಧರಿಸುವ ರೀತಿಯಲ್ಲಿಯೇ ರಸ್ತೆಗಳಲ್ಲಿ ಹಿಜಾಬ್ ಧರಿಸುವ ವಿಚಾರದಲ್ಲಿಯೂ ಪೊಲೀಸರು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮಾಡಲಾಗುವುದು. ಪೊಲೀಸರ ಮೂಲಕವೇ ಈ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

“ನಿಮ್ಮ ಸೀಟ್ ಬೆಲ್ಟ್ ಧರಿಸದಿರುವುದು ಕಾನೂನುಬಾಹಿರವಾದ್ದರಿಂದ ಜನರಿಗೆ ದಂಡವನ್ನು ವಿಧಿಸಲಾಗುತ್ತದೆ. ಈ ಕ್ರಮವನ್ನು ಜಾರಿಗೊಳಿಸಲು ಪೊಲೀಸರು ತುಂಬಾ ಸಮರ್ಥರಾಗಿದ್ದಾರೆಂದು ನನಗೆ ಅನಿಸುತ್ತಿದೆ. ಅದೇ ರೀತಿಯಲ್ಲಿ ಮುಸ್ಲಿಮರು ಶಿರಸ್ತ್ರಾಣ ಧರಿಸದಂತೆಯೂ ಪೊಲೀಸರೇ ಎಚ್ಚರ ವಹಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಎರಡನೇ ಸುತ್ತಿನ ಚುನಾವಣೆಯನ್ನು ಏಪ್ರಿಲ್ 24 ರಂದು ನಿಗದಿಪಡಿಸಲಾಗಿದೆ. ಸರಾಸರಿ ಸಮೀಕ್ಷೆಗಳ ಪ್ರಕಾರ ಮ್ಯಾಕ್ರನ್ ಶೇ. 54 ಮತ್ತು ಲೆ ಪೆನ್‌ ಶೇ. 46ರಷ್ಟು ಮುನ್ನಡೆ ಸಾಧಿಸಿದ್ದಾರೆ. ಲೆ ಪೆನ್ ತನ್ನ ಕೊನೆಯ ಪ್ರಚಾರ ರ್ಯಾಲಿಯನ್ನು ಇಂದು ಸಂಜೆ ದಕ್ಷಿಣದ ಭದ್ರಕೋಟೆಯಾದ ಪರ್ಪಿಗ್ನಾನ್‌ನಲ್ಲಿ ನಡೆಸಿದ್ದಾರೆ.

ಇದನ್ನೂ ಓದಿ: Covid 4th Wave: ಚೀನಾದಲ್ಲಿ ಲಾಕ್​ಡೌನ್, ಫ್ರಾನ್ಸ್​ನಲ್ಲಿ ಹೆಚ್ಚಿದ ಕೊವಿಡ್ ರೋಗಿಗಳ ಸಂಖ್ಯೆ; ಭಾರತದಲ್ಲೂ ಮತ್ತೆ ಕೊರೊನಾ ಆತಂಕ

US Covid cases: ಅಮೇರಿಕಾ, ಫ್ರಾನ್ಸ್​ನಲ್ಲಿ ತೀವ್ರಗತಿಯಲ್ಲಿ ಏರುತ್ತಿವೆ ಕೊರೊನಾ ಪ್ರಕರಣಗಳು; ಇಲ್ಲಿದೆ ಅಂಕಿಅಂಶ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ