AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ. ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ […]

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 14, 2020 | 2:18 PM

Share

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ.

ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದರ ಭಾಗವಾಗಿ ಬ್ರೆಜಿಲ್​ನಿಂದ ಇಂಪೋರ್ಟ್ ಮಾಡಿಕೊಳ್ಳಲಾದ ಚಿಕನ್ ವಿಂಗ್ಸ್​ನ ಕೊರೊನಾ ಟೆಸ್ಟ್​ಗೆ ಒಳಪಡಿಸಿದಾಗ ಅದರಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಅಲ್ಲಿಯ ಆಡಳಿತ ಮಂಡಳಿ ತಿಳಿಸಿದೆ.

ನೋಂದಣಿ ಸಂಖ್ಯೆಯ ಪ್ರಕಾರ ಕೋಳಿ ಮಾಂಸವು ದಕ್ಷಿಣ ರಾಜ್ಯ ಸಾಂಟಾ ಕ್ಯಾಟರಿನಾದ ಅರೋರಾ ಅಲಿಮೆಂಟೋಸ್ ಸ್ಥಾವರದಿಂದ ಬಂದಿದೆ. ಉತ್ಪನ್ನದೊಂದಿಗೆ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿ ಹಾಗೂ ಕೊರೊನಾ ಸೋಂಕಿತ ಚಿಕನ್ ಬಳಿ ಇರಿಸಲಾದ ಆಹಾರ ಪದಾರ್ಥಗಳನ್ನು ಟೆಸ್ಟ್​ಗೆ ಒಳಪಡಿಸಲಾಗಿದೆ. ಆದರೆ ವರದಿ ನೆಗೆಟಿವ್ ಬಂದಿದೆ. ಆದರೂ ಆಮದು ಮಾಡಿಕೊಳ್ಳಲಾದ ಮಾಂಸ ಸೀಫುಡ್ ಬಳಕೆ ಮಾಡುವಾಗ ಎಚ್ಚರದಿಂದ ಇರಲು ಹಾಗೂ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಇಲ್ಲಿಯ ಸರ್ಕಾರ ತಿಳಿಸಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ