AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯೆರಾ ಲಿಯೋನ್​ನಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 92 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿ ಬದುಕುವುದು ಅನುಮಾನ

ವಿಶ್ವದ ಬಡರಾಷ್ಟ್ರಗಳಲ್ಲಿ ಒಂದಾದ ಸಿಯೆರಾ ಲಿಯೋನ್​ನಲ್ಲಿ ಶುಕ್ರವಾರ ಸಂಭವಿಸಿದ ಇಂಧನ ಟ್ಯಾಂಕರ್ ಸ್ಫೋಟದಲ್ಲಿ ಕನಿಷ್ಠ 92 ಮಂದಿ ಮೃತಪಟ್ಟಿದ್ದು, 30 ಮಂದಿ ಸ್ಥಿತಿ ಗಂಭೀರವಾಗಿದೆ.

ಸಿಯೆರಾ ಲಿಯೋನ್​ನಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 92 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿ ಬದುಕುವುದು ಅನುಮಾನ
ಚಿತ್ರ ಕೃಪೆ: SIERRAEYESALONE
TV9 Web
| Edited By: |

Updated on:Nov 06, 2021 | 6:29 PM

Share

ಇಂಧನ ಟ್ಯಾಂಕರ್​ವೊಂದು ಡಿಕ್ಕಿ ಹೊಡೆದ ನಂತರದಲ್ಲಿ ಸ್ಫೋಟಗೊಂಡು, ಕನಿಷ್ಠ 92 ಮಂದಿ ಸಾವನ್ನಪ್ಪಿದ್ದು, ಇತರ ಹತ್ತಾರು ಮಂದಿ ಗಾಯಗೊಂಡ ಘಟನೆ ಶುಕ್ರವಾರ ಸಿಯೆರಾ ಲಿಯೋನ್​ನ ರಾಜಧಾನಿಯಲ್ಲಿ ಸಂಭವಿಸಿದೆ, ಎಂದು ಅಧಿಕಾರಿಗಳು ಹೇಳಿದ್ದಾರೆ. “92 ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಈ ಬೆಳಗ್ಗೆ ನಮಗೆ ವರದಿ ಬಂದಿದೆ,” ಎಂದು ಉಪಾಧ್ಯಕ್ಷ ಮೊಹ್ಮದ್ ಜುಲ್ದೇ ಜಲ್ಲೋಹ್ ಹೇಳಿದ್ದಾರೆ. ಈ ಸ್ಫೋಟದಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಗಂಭೀರ ಸ್ವರೂಪದ ಸುಟ್ಟ ಗಾಯಗಳೊಂದಿಗೆ 88ಕ್ಕೂ ಹೆಚ್ಚು ಮಂದಿಯ ಚಿಕಿತ್ಸೆ ನಡೆಯುತ್ತಿದೆ ಎಂದು ಸೇರಿಸಲಾಗಿದೆ. ಶನಿವಾರ ಬೆಳಗ್ಗೆ ಹೊತ್ತಿಗೆ 92 ದೇಹಗಳನ್ನು ತಂದಿರುವುದಾಗಿ ಫ್ರೀಟೌನ್​ನ ಕನೌಟ್ ಆಸ್ಪತ್ರೆಯಲ್ಲಿನ ಶವಾಗಾರದಿಂದ ವರದಿ ಬಂದಿದೆ. ತೀವ್ರವಾಗಿ ಸುಟ್ಟ ಗಾಯಗಳಾಗಿ ಐಸಿಯುದಲ್ಲಿ ಇರುವ ಮೂವತ್ತು ಮಂದಿ ಬದುಕುಳಿವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ಫ್ರೀಟೌನ್​ನ ಪೂರ್ವಕ್ಕೆ ಇರುವ ಉಪನಗರವಾದ ವೆಲ್ಲಿಂಗ್​ಟನ್​ನಲ್ಲಿ ಟ್ರಕ್​ವೊಂದು ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಮೇಲೆ ಈ ಸ್ಫೋಟ ಸಂಭವಿಸಿದೆ. ಅಪಘಾತವಾದ ಟ್ಯಾಂಕರ್​ನಿಂದ ತೈಲ ಸಂಗ್ರಹಕ್ಕೆ ಮುಂದಾದ ಜನರು ಸಹ ಈ ಘಟನೆಯಲ್ಲಿ ಸಂತ್ರಸ್ತರಾಗಿದ್ದಾರೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ನಗರದ ಮೇಯರ್ ತಿಳಿಸಿದ್ದಾರೆ. ಬಹಳ ಗಂಭೀರವಾಗಿ ಸುಟ್ಟುಹೋಗಿರುವ ಸಂತ್ರಸ್ತರನ್ನು ಹತ್ತಿರದ ಮಳಿಗೆಗಳು ಮತ್ತು ಮನೆಗಳಲ್ಲಿ ಮಲಗಿಸಲಾಗಿದೆ ಎಂದು ಹೇಳಿದ್ದು, ಈ ಬಗ್ಗೆ ಯಾವುದೇ ಸುದ್ದಿ ಸಂಸ್ಥೆ ಖಚಿತಪಡಿಸಿಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಗಿರಕಿ ಹೊಡೆಯುತ್ತಿರುವ ಫೋಟೋಗಳು, ವಿಡಿಯೋಗಳು ಗಾಬರಿಪಡಿಸುವಂತಿವೆ.

ಈ ಅವಘಡದಲ್ಲಿ ಆಗಿರುವ ಆಸ್ತಿ ಹಾನಿ ಪ್ರಮಾಣವು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಸ್ಥಳೀಯ ಪತ್ರಕರ್ತರೊಬ್ಬರು ಮಾಧ್ಯಮವೊಂದರ ಜತೆಗೆ ಮಾತನಾಡಿ, 100ಕ್ಕೂ ಹೆಚ್ಚು ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದು, ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಸ್ಫೋಟ ನಡೆದಾಗ ಹಲವರು ಭಾರೀ ಸಂಚಾರ ದಟ್ಟಣೆಯಲ್ಲಿ ಕೂತಿದ್ದರು ಎಂದು ತಿಳಿಸಲಾಗಿದೆ. ಪ್ರಾಣ ಕಳೆದುಕೊಂಡವರು ಮತ್ತು ಸುಟ್ಟು ಹೋದವರಲ್ಲಿ ವಾಹನದೊಳಗೆ ಇದ್ದವರೇ ಹೆಚ್ಚು ಎನ್ನಲಾಗಿದೆ.

ಜಗತ್ತಿನ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಸಿಯೆರಾ ಲಿಯೋನ್​ನಲ್ಲಿ ಈ ಹಿಂದೆ ಕೂಡ ಪೆಟ್ರೋಲ್​ ಟ್ಯಾಂಕರ್​ಗಳನ್ನು ಒಳಗೊಂಡಂತೆ ಅಪಘಾತ ಸಂಭವಿಸಿದೆ. ಆಫ್ರಿಕಾದ ಇತರ ಭಾಗಗಳಲ್ಲೂ ಇದೇ ರೀತಿಯ ಘಟನೆ ಸಂಭವಿಸಿ, ಹಲವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

Published On - 6:16 pm, Sat, 6 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ