ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು

ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್​ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಪೆಡ್ರೋ ಅವರ ಆರೋಗ್ಯ ಉತ್ತಮವಾಗಿದೆ. ವೈಸ್ ಪ್ರೆಸಿಡೆಂಟ್ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರಸ್ ಶೃಂಗಸಭೆಯಲ್ಲಿ ಸ್ಪೇನ್​ ಅನ್ನು ಪ್ರತಿನಿಧಿಸಲಿದ್ದಾರೆ.

ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು
ಪೆಡ್ರೋImage Credit source: NDTV
Follow us
ನಯನಾ ರಾಜೀವ್
|

Updated on: Sep 08, 2023 | 8:10 AM

ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್(Pedro Sanchez)​ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಪೆಡ್ರೋ ಅವರ ಆರೋಗ್ಯ ಉತ್ತಮವಾಗಿದೆ. ವೈಸ್ ಪ್ರೆಸಿಡೆಂಟ್ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರಸ್ ಶೃಂಗಸಭೆಯಲ್ಲಿ ಸ್ಪೇನ್​ ಅನ್ನು ಪ್ರತಿನಿಧಿಸಲಿದ್ದಾರೆ.

ಶೃಂಗಸಭೆಯಿಂದ ದೂರ ಉಳಿದಿರುವ ಮೂರನೇ ವಿಶ್ವ ನಾಯಕ ಇವರಾಗಿದ್ದಾರೆ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ , ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಭೇಟಿ ನೀಡುತ್ತಿಲ್ಲ.

ಎಲ್ಲಾ G20 ದೇಶಗಳು ಮತ್ತು 9 ಇತರ ರಾಜ್ಯಗಳ ನಾಯಕರು (ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ) ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: G 20 Summit; ಶೃಂಗಸಭೆಗೂ ಮುನ್ನ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಸಾಧನೆಗಳಿವು

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ಆರೋಗ್ಯವಾಗಿದ್ದೇನೆ ವೈಸ್ ಪ್ರೆಸಿಡೆಂಟ್ ಹಾಗೂ ವಿದೇಶಾಂಗ ಸಚಿವರುಪಾಲ್ಗೊಳ್ಳಲಿದ್ದಾರೆ ಎಂದು ಎಕ್ಸ್​ಪೋಸ್ಟ್​ನಲ್ಲಿ ಪೆಡ್ರೋ ಬರೆದುಕೊಂಡಿದ್ದಾರೆ.

ಯುರೋಪಿಯನ್ ಒಕ್ಕೂಟದ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಉನ್ನತ ಅಧಿಕಾರಿಗಳು, ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಮೆರಿಕದಿಂದ ಹೊರಟಿದ್ದು, ಸಂಜೆ 7 ಗಂಟೆ ಸುಮಾರಿಗೆ ದೆಹಲಿಗೆ ಬಂದಿಳಿಯಲಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಜತೆಗೆ ಚರ್ಚೆ ನಡೆಸಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ