ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ, ಗಾಂಧಿ ಜಯಂತಿಗೆ 2 ದಿನ ಮೊದಲು ನಾಚಿಕೆಗೇಡಿನ ಕೃತ್ಯ
ಗಾಂಧಿ ಜಯಂತಿ(Gandhi Jayanti)ಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

ಲಂಡನ್, ಸೆಪ್ಟೆಂಬರ್ 30: ಗಾಂಧಿ ಜಯಂತಿ(Gandhi Jayanti)ಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವುದನ್ನು ಚಿತ್ರಿಸುವ ಈ ಪ್ರತಿಮೆಯ ಪೀಠದ ಮೇಲೆ ಭಾರತ ವಿರೋಧಿ ಬರಹಗಳು ಕಂಡುಬಂದಿವೆ. ಪ್ರತಿಮೆಯ ಮೇಲೆ ಬಿಳಿ ಬಣ್ಣವನ್ನು ಬಳಿಯಲಾಗಿತ್ತು. ವಿಶ್ವಸಂಸ್ಥೆಯು ಅಕ್ಟೋಬರ್ 2ರಂದು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಘೋಷಿಸಿದೆ. ಅಂದು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವುದರ ಜತೆಗೆ ಭಜನೆಗಳನ್ನು ಹಾಡಲಾಗುತ್ತದೆ.
@HCI_London is deeply saddened and strongly condemns the shameful act of vandalism of the statue of Mahatma Gandhi at Tavistock Square in London. This is not just vandalism, but a violent attack on the idea of nonviolence, three days before the international day of nonviolence,…
— India in the UK (@HCI_London) September 29, 2025
ಕಲಾವಿದೆ ಫ್ರೆಡ್ಡಾ ಬ್ರಿಲಿಯಂಟ್ ಕೆತ್ತಿದ ಮತ್ತು ಇಂಡಿಯಾ ಲೀಗ್‌ನ ಬೆಂಬಲದೊಂದಿಗೆ ರಚಿಸಲಾದ ಕಂಚಿನ ಪ್ರತಿಮೆಯನ್ನು 1968 ರಲ್ಲಿ ಚೌಕದಲ್ಲಿ ಅನಾವರಣಗೊಳಿಸಲಾಯಿತು, ಮಹಾತ್ಮ ಗಾಂಧಿಯವರು ಯೂನಿವರ್ಸಿಟಿ ಕಾಲೇಜ್ ಲಂಡನ್‌ನಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದರು.
ಭಾರತೀಯ ಹೈಕಮಿಷನ್ ಈ ವಿಷಯವನ್ನು ಸ್ಥಳೀಯ ಆಡಳಿತ ಮತ್ತು ಮೆಟ್ರೋಪಾಲಿಟನ್ ಪೊಲೀಸರೊಂದಿಗೆ ಪ್ರಸ್ತಾಪಿಸಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ ಎಂದು ಹೇಳಿದೆ. ಭಾರತೀಯ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪ್ರತಿಮೆಯನ್ನು ದುರಸ್ತಿ ಮಾಡಿ ಅದರ ಘನತೆಯನ್ನು ಪುನಃಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ.
ಮತ್ತಷ್ಟು ಓದಿ: ಮಹಾತ್ಮಾ ಗಾಂಧಿ ಕುರಿತ ಹತ್ತು ಅತ್ಯುತ್ತಮ ಸಿನಿಮಾಗಳು ಇವು
ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಈ ಘಟನೆ ಗಾಂಧಿ ಜಯಂತಿಗೆ (ಅಕ್ಟೋಬರ್ 2) ಕೆಲವೇ ದಿನಗಳ ಮೊದಲು ಸಂಭವಿಸಿದೆ ಎಂಬುದು ಗಮನಿಸಬೇಕಾದ ಸಂಗತಿ, ಈ ಸಮಯದಲ್ಲಿ ಪ್ರತಿ ವರ್ಷ ಈ ಸ್ಥಳದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಾಗುತ್ತದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




