ದೇಶಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಭಾರತಕ್ಕೆ ಜರ್ಮನಿ ಬೆಂಬಲ
ಭಾರತದ ಭಯೋತ್ಪಾದನೆಯ ವಿರುದ್ಧದ ಯುದ್ಧವನ್ನು ಜರ್ಮನಿ ಬೆಂಬಲಿಸಿದೆ. ಭಾರತದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಜರ್ಮನಿ ಖಂಡಿಸಿದೆ. ಕೇಂದ್ರ ಸಚಿವ ಜೈಶಂಕರ್ ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯನ್ನು ಪುನರುಚ್ಚರಿಸಿದ್ದಾರೆ. ಭಾರತದ ಆಪರೇಷನ್ ಸಿಂಧೂರ್ ಕುರಿತು ತಮ್ಮ ಹೇಳಿಕೆಗಳಲ್ಲಿ ಜರ್ಮನಿಯ ವಿದೇಶಾಂಗ ಸಚಿವರು, "ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಜರ್ಮನಿ ಬೆಂಬಲಿಸುತ್ತದೆ. ಭಯೋತ್ಪಾದನೆಗೆ ಜಗತ್ತಿನಲ್ಲಿ ಸ್ಥಾನವಿಲ್ಲ. ಅದಕ್ಕಾಗಿಯೇ ಭಯೋತ್ಪಾದನೆಯ ವಿರುದ್ಧ ಹೋರಾಡುವ ಪ್ರತಿಯೊಬ್ಬರನ್ನು ನಾವು ಬೆಂಬಲಿಸುತ್ತೇವೆ" ಎಂದು ಹೇಳಿದ್ದಾರೆ.

ಬರ್ಲಿನ್, ಮೇ 23: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಇಂದು ಬರ್ಲಿನ್‌ನಲ್ಲಿ ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ವಾಡೆಫುಲ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಭಾರತವು ಆಪರೇಷನ್ ಸಿಂಧೂರ್ ನಡೆಸಿದ ನಂತರ ಭಾರತವು ಅಂತಾರಾಷ್ಟ್ರೀಯ ಸಮುದಾಯವನ್ನು ತಲುಪಲು ಪ್ರಾರಂಭಿಸಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಸಚಿವ ಜೈಶಂಕರ್ ಅವರೊಂದಿಗೆ ಮಾತನಾಡಿದ ಜರ್ಮನ್ ವಿದೇಶಾಂಗ ಸಚಿವರು, ಭಯೋತ್ಪಾದನೆ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಭಾರತ ಹೊಂದಿದೆ ಎಂದು ಹೇಳಿದ್ದಾರೆ.
ಭಾರತದ ಆಪರೇಷನ್ ಸಿಂಧೂರ್ ಕುರಿತು ತಮ್ಮ ಹೇಳಿಕೆಯಲ್ಲಿ ಜರ್ಮನಿಯ ವಿದೇಶಾಂಗ ಸಚಿವರು, “ಭಯೋತ್ಪಾದನೆಯ ವಿರುದ್ಧದ ಯಾವುದೇ ಹೋರಾಟವನ್ನು ಜರ್ಮನಿ ಬೆಂಬಲಿಸುತ್ತದೆ. ಜಗತ್ತಿನಲ್ಲಿ ಎಲ್ಲಿಯೂ ಭಯೋತ್ಪಾದನೆಗೆ ಎಂದಿಗೂ ಸ್ಥಾನವಿರುವುದಿಲ್ಲ. ಅದಕ್ಕಾಗಿಯೇ ಭಯೋತ್ಪಾದನೆ ವಿರುದ್ಧ ಹೋರಾಡುವ ಮತ್ತು ಹೋರಾಡಬೇಕಾದ ಪ್ರತಿಯೊಬ್ಬರನ್ನು ನಾವು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಪಾಕಿಸ್ತಾನ ವಿಮಾನ, ಮಿಲಿಟರಿ ವಿಮಾನಗಳ ಮೇಲಿನ ನಿಷೇಧ ಜೂನ್ 23ರವರೆಗೆ ವಿಸ್ತರಣೆ
Excellent meeting today with FM @JoWadephul in Berlin.
Deeply appreciate Germany’s understanding of India’s right to defend itself against terrorism.
Discussed making our Strategic Partnership stronger, deeper and closer. Identified areas of further promise and potential.… pic.twitter.com/teX3h6DDWb
— Dr. S. Jaishankar (@DrSJaishankar) May 23, 2025
ಮೇ 19ರಿಂದ 24ರವರೆಗೆ ನೆದರ್ಲ್ಯಾಂಡ್ಸ್, ಡೆನ್ಮಾರ್ಕ್ ಮತ್ತು ಜರ್ಮನಿಗೆ ಅಧಿಕೃತ ಭೇಟಿಯಲ್ಲಿರುವ ಸಚಿವ ಜೈಶಂಕರ್, ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತು ಭಾರತದ ನಿಲುವನ್ನು ಪುನರುಚ್ಚರಿಸಿದರು. “ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಪ್ರತಿಕ್ರಿಯಿಸಿದ ತಕ್ಷಣ ನಾನು ಬರ್ಲಿನ್‌ಗೆ ಬಂದಿದ್ದೇನೆ. ಭಾರತ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ಭಾರತ ಎಂದಿಗೂ ಪರಮಾಣು ಬೆದರಿಕೆಗೆ ಮಣಿಯುವುದಿಲ್ಲ ಮತ್ತು ಭಾರತ ಪಾಕಿಸ್ತಾನದೊಂದಿಗೆ ಸಂಪೂರ್ಣವಾಗಿ ದ್ವಿಪಕ್ಷೀಯವಾಗಿ ವ್ಯವಹರಿಸುತ್ತದೆ. ಆ ವಿಷಯದಲ್ಲಿ ಯಾವುದೇ ಭಾಗದಲ್ಲಿ ಯಾವುದೇ ಗೊಂದಲ ಇರಬಾರದು. ಭಯೋತ್ಪಾದನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕು ಪ್ರತಿಯೊಂದು ರಾಷ್ಟ್ರಕ್ಕೂ ಇದೆ ಎಂಬ ಜರ್ಮನಿಯ ತಿಳುವಳಿಕೆಯನ್ನು ನಾವು ಗೌರವಿಸುತ್ತೇವೆ” ಎಂದು ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








