AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Germany: ಹ್ಯಾಂಬರ್ಗ್​ ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯಿಂದ ಗುಂಡಿನ ದಾಳಿ, ವಿಮಾನಗಳ ಹಾರಾಟ ರದ್ದು

ಉತ್ತರ ಜರ್ಮನಿಯ ನಗರವಾದ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ವಾಹನವೊಂದು ಭದ್ರತೆಯನ್ನು ಮೀರಿ ವಿಮಾನ ನಿಲ್ದಾಣದ ಆವರಣವನ್ನು ಪ್ರವೇಶಿಸಿ ಅವ್ಯವಸ್ಥೆ ಸೃಷ್ಟಿಸಿತು. ಈ ಸಂದರ್ಭದಲ್ಲಿ ವಾಹನದಲ್ಲಿದ್ದ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ದಾಳಿಯಿಂದಾಗಿ ಮುನ್ನೆಚ್ಚರಿಕೆಯಾಗಿ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣವನ್ನು ಪ್ರಯಾಣಿಕರಿಗೆ ಮುಚ್ಚಲಾಗಿದೆ ಮತ್ತು ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ.

Germany: ಹ್ಯಾಂಬರ್ಗ್​ ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯಿಂದ ಗುಂಡಿನ ದಾಳಿ, ವಿಮಾನಗಳ ಹಾರಾಟ ರದ್ದು
ಗುಂಡಿನ ದಾಳಿImage Credit source: CNN
Follow us
ನಯನಾ ರಾಜೀವ್
|

Updated on:Nov 05, 2023 | 9:10 AM

ಉತ್ತರ ಜರ್ಮನಿಯ ನಗರವಾದ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ವಾಹನವೊಂದು ಭದ್ರತೆಯನ್ನು ಮೀರಿ ವಿಮಾನ ನಿಲ್ದಾಣದ ಆವರಣವನ್ನು ಪ್ರವೇಶಿಸಿ ಅವ್ಯವಸ್ಥೆ ಸೃಷ್ಟಿಸಿತು. ಈ ಸಂದರ್ಭದಲ್ಲಿ ವಾಹನದಲ್ಲಿದ್ದ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ದಾಳಿಯಿಂದಾಗಿ ಮುನ್ನೆಚ್ಚರಿಕೆಯಾಗಿ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣವನ್ನು ಪ್ರಯಾಣಿಕರಿಗೆ ಮುಚ್ಚಲಾಗಿದೆ ಮತ್ತು ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಆಯುಧ ಹಿಡಿದ ವ್ಯಕ್ತಿಯೊಬ್ಬ ಭದ್ರತಾ ಗೇಟ್ ಮುರಿದು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದ, ಈ ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ.ವಿಮಾನ ನಿಲ್ದಾಣದಲ್ಲಿ ಎಲ್ಲರೂ ಸುರಕ್ಷಿತವಾಗಿದ್ದಾರೆ.

ಘಟನೆಯ ನಂತರ ಅಲ್ಲಿದ್ದ ಪ್ರಯಾಣಿಕರು ಆತಂಕಗೊಂಡರು. ಮತ್ತು ತಮ್ಮ ಪ್ರಾಣ ಉಳಿಸಿಕೊಳ್ಳಲು ಅಲ್ಲಿ ಇಲ್ಲಿ ಓಡಲಾರಂಭಿಸಿದರು. ಪರಿಸ್ಥಿತಿ ಹದಗೆಡುತ್ತಿರುವುದನ್ನು ಕಂಡ ಪೊಲೀಸರು ಎಲ್ಲಾ ಕಡೆಯಿಂದ ವಿಮಾನ ನಿಲ್ದಾಣವನ್ನು ಸುತ್ತುವರಿದಿದ್ದಾರೆ. ಪೊಲೀಸರ ಪ್ರಕಾರ, ಕಾರಿನಲ್ಲಿದ್ದ ವ್ಯಕ್ತಿ ಟರ್ಮಿನಲ್ 1 ತಲುಪಿದ್ದರು. ಗಾಳಿಯಲ್ಲಿ ಗುಂಡು ಹಾರಿಸುವುದರ ಜೊತೆಗೆ, ಆ ವ್ಯಕ್ತಿ ತನ್ನ ಕಾರಿನಿಂದ ಎರಡು ಬೆಂಕಿಯ ಬಾಟಲಿಗಳನ್ನು ಎಸೆದನು. ಆದರೆ, ಈ ಎಲ್ಲ ಸಂಗತಿಗಳಿಂದ ಯಾರಿಗೂ ತೊಂದರೆಯಾಗಿಲ್ಲ.

35 ವರ್ಷದ ವ್ಯಕ್ತಿಯ ಜೊತೆಗೆ ನಾಲ್ಕು ವರ್ಷದ ಮಗು ಕೂಡ ಕಾರಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸವಾರನೊಬ್ಬ ಮಗುವನ್ನು ಒತ್ತೆಯಾಳಾಗಿ ಇಟ್ಟಿದ್ದಾನೆ ಎಂಬ ಸಂದೇಶ ಬಂದಿತ್ತು. ಈ ಸಮಯದಲ್ಲಿ ಮಹಿಳೆಯೊಬ್ಬರಿಂದ ಕರೆ ಬಂದಿದ್ದು, ಪತಿ ತನ್ನ ಮಗುವನ್ನು ಅಪಹರಿಸಿದ್ದಾರೆ ಎಂದು ಆಕೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ, ನಾಲ್ವರು ಸಾವು

ಘಟನೆಯ ನಂತರ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ವಿಮಾನ ನಿಲ್ದಾಣದ ಎಲ್ಲಾ ಟರ್ಮಿನಲ್‌ಗಳ ಗೇಟ್‌ಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ಕಾರಣಗಳಿಗಾಗಿ, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ, ಇದರಿಂದಾಗಿ ಸುಮಾರು 27 ವಿಮಾನಗಳು ಪರಿಣಾಮ ಬೀರಿವೆ. ಇದರೊಂದಿಗೆ ಇತರ ನಗರಗಳಿಂದ ಬರುವ ವಿಮಾನಗಳನ್ನು ಸಹ ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:01 am, Sun, 5 November 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ