AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾನಾದಲ್ಲಿ ಭೀಕರ ದುರಂತ; ಮಿಲಿಟರಿ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಸಚಿವರು ಸೇರಿ 8 ಜನ ಸಾವು

ಘಾನಾದಲ್ಲಿ ಭೀಕರ ಅಪಘಾತ ಉಂಟಾಗಿದ್ದು, ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ರಕ್ಷಣಾ ಸಚಿವ, ಪರಿಸರ ಸಚಿವ ಸೇರಿದಂತೆ 8 ಜನ ಮೃತಪಟ್ಟಿದ್ದಾರೆ. ಇವರಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕಾಂಗ್ರೆಸ್ ಉಪಾಧ್ಯಕ್ಷರು, ಹಿರಿಯ ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಸಿಬ್ಬಂದಿ ಕೂಡ ಸೇರಿದ್ದಾರೆ. ಹೆಲಿಕಾಪ್ಟರ್ ಅಪಘಾತದ ಕಾರಣವನ್ನು ಇನ್ನೂ ಖಚಿತಪಡಿಸಿಲ್ಲ.

ಘಾನಾದಲ್ಲಿ ಭೀಕರ ದುರಂತ; ಮಿಲಿಟರಿ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಸಚಿವರು ಸೇರಿ 8 ಜನ ಸಾವು
Ghana Plane Accident
ಸುಷ್ಮಾ ಚಕ್ರೆ
|

Updated on:Aug 06, 2025 | 10:58 PM

Share

ಅಕ್ರಾ (ಘಾನಾ), ಆಗಸ್ಟ್ 6: ಇಂದು ಘಾನಾದಲ್ಲಿ (Ghana Helicopter Crash) ಅತಿ ದೊಡ್ಡ ಅಪಘಾತ ಸಂಭವಿಸಿದೆ. ಮಿಲಿಟರಿ ಹೆಲಿಕಾಪ್ಟರ್ ಪತನವಾಗಿ ಘಾನಾದ ಇಬ್ಬರು ಪ್ರಮುಖ ಕ್ಯಾಬಿನೆಟ್ ಸಚಿವರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಘಾನಾದ ರಕ್ಷಣಾ ಸಚಿವ ಎಡ್ವರ್ಡ್ ಒಮಾನೆ ಬೋಮಾ ಮತ್ತು ಪರಿಸರ ಸಚಿವ ಇಬ್ರಾಹಿಂ ಮುರ್ತಲಾ ಮುಹಮ್ಮದ್ ಅವರ ಸಾವುಗಳನ್ನು ಸರ್ಕಾರ ದೃಢಪಡಿಸಿದೆ. ಈ ಘಟನೆಯನ್ನು ಘಾನಾ ಸರ್ಕಾರ “ರಾಷ್ಟ್ರೀಯ ದುರಂತ” ಎಂದು ಕರೆದಿದೆ. ಘಾನಾ ಸಶಸ್ತ್ರ ಪಡೆಗಳ ಪ್ರಕಾರ, Z-9 ಯುಟಿಲಿಟಿ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಘಾನಾದ ರಾಜಧಾನಿ ಅಕ್ರಾದಿಂದ ಹೊರಟು ಪ್ರಮುಖ ಚಿನ್ನದ ಗಣಿಗಾರಿಕೆ ಕೇಂದ್ರವಾದ ಒಬುವಾಸಿಗೆ ಹೋಗುವ ಮಾರ್ಗದಲ್ಲಿತ್ತು. ಆದರೆ, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ರಾಡಾರ್‌ನಿಂದ ಮಾಯವಾಯಿತು.

ಈ ದುರಂತದಲ್ಲಿ ಮೃತರಾದವರಲ್ಲಿ ಇಬ್ಬರು ಮಂತ್ರಿಗಳ ಜೊತೆಗೆ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕಾಂಗ್ರೆಸ್‌ನ ಉಪಾಧ್ಯಕ್ಷರು, ಹಿರಿಯ ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಸಿಬ್ಬಂದಿ ಸದಸ್ಯರು ಕೂಡ ಸೇರಿದ್ದಾರೆ. ಸಾರಿಗೆ ಮತ್ತು ವೈದ್ಯಕೀಯ ಸ್ಥಳಾಂತರಿಸುವಿಕೆಗೆ ಸಾಮಾನ್ಯವಾಗಿ ಬಳಸಲಾಗುವ Z-9 ಹೆಲಿಕಾಪ್ಟರ್ ಪತನಗೊಂಡಾಗ ಅಧಿಕೃತ ಕಾರ್ಯಾಚರಣೆಯಲ್ಲಿತ್ತು ಎಂದು ವರದಿಯಾಗಿದೆ. ಅಪಘಾತದ ಕಾರಣವನ್ನು ಇನ್ನೂ ಖಚಿತಪಡಿಸಲಾಗಿಲ್ಲ.

ಇದನ್ನೂ ಓದಿ: Video: ಬಸ್‌ಗಳ ನಡುವೆ ಸಿಲುಕಿ ಅಪ್ಪಚ್ಚಿಯಾದ ಆಟೋ, ಭೀಕರ ಅಪಘಾತದ ದೃಶ್ಯ ಇಲ್ಲಿದೆ ನೋಡಿ

ಈ ದುರಂತವು ಕಳೆದ ಒಂದು ದಶಕದಲ್ಲಿ ಘಾನಾದಲ್ಲಿ ಸಂಭವಿಸಿದ ಅತ್ಯಂತ ಕೆಟ್ಟ ವೈಮಾನಿಕ ಅಪಘಾತಗಳಲ್ಲಿ ಒಂದಾಗಿದೆ. 2014ರಲ್ಲಿ ಕರಾವಳಿಯಲ್ಲಿ ಸೇವಾ ಹೆಲಿಕಾಪ್ಟರ್ ಅಪಘಾತದಲ್ಲಿ 3 ಜನರು ಸಾವನ್ನಪ್ಪಿದ್ದರು. 2021ರಲ್ಲಿ ಅಕ್ರಾದಲ್ಲಿ ಸರಕು ವಿಮಾನವು ರನ್‌ವೇಯನ್ನು ದಾಟಿ ಪ್ರಯಾಣಿಕರ ಬಸ್‌ಗೆ ಡಿಕ್ಕಿ ಹೊಡೆದು 10 ಜನರು ಸಾವನ್ನಪ್ಪಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Wed, 6 August 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ