AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ

ಭಾರತ ಮತ್ತು ಇಟಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜಾಗತಿಕ ಪ್ರವಾಸದ ಕೊನೆಯ ಹಾಗೂ ಅಂತ್ಯಂತ ಮಹತ್ವದ ಹಂತ ಇಟಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಇಟಲಿಯ ರಾಜಧಾನಿ ರೋಮ್‌ಗೆ ಆಗಮಿಸುವ ಮೂಲಕ ತಮ್ಮ ಐದು ರಾಷ್ಟ್ರಗಳ ಸುದೀರ್ಘ ಯುರೋಪಿಯನ್ ಪ್ರವಾಸದ ಕೊನೆಯ ಮತ್ತು ಅತ್ಯಂತ ಪ್ರಮುಖ ಘಟ್ಟವನ್ನು ತಲುಪಿದ್ದಾರೆ.

ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ
ಜಾರ್ಜಿಯಾ-ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 20, 2026 | 7:56 AM

Share

ರೋಮ್, ಮೇ 20: ಭಾರತ ಮತ್ತು ಇಟಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜಾಗತಿಕ ಪ್ರವಾಸದ ಕೊನೆಯ ಹಾಗೂ ಅಂತ್ಯಂತ ಮಹತ್ವದ ಹಂತ ಇಟಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಇಟಲಿಯ ರಾಜಧಾನಿ ರೋಮ್‌ಗೆ ಆಗಮಿಸುವ ಮೂಲಕ ತಮ್ಮ ಐದು ರಾಷ್ಟ್ರಗಳ ಸುದೀರ್ಘ ಯುರೋಪಿಯನ್ ಪ್ರವಾಸದ ಕೊನೆಯ ಮತ್ತು ಅತ್ಯಂತ ಪ್ರಮುಖ ಘಟ್ಟವನ್ನು ತಲುಪಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ವಿಶೇಷ ಆಹ್ವಾನದ ಮೇರೆಗೆ ನಡೆದಿರುವ ಈ ಪ್ರವಾಸವು, ಪ್ರಧಾನಿ ಮೋದಿಯವರು ಇಟಲಿಗೆ ನೀಡುತ್ತಿರುವ ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಯಾಗಿದೆ.

ರೋಮ್‌ಗೆ ಸ್ವಾಗತ, ಸ್ನೇಹಿತ ರೋಮ್‌ನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಇಟಲಿಯ ಉಪ ಪ್ರಧಾನಿ ಆಂಟೋನಿಯೊ ತಜಾನಿ ಅವರು ಅತ್ಯಂತ ಗೌರವಪೂರ್ವಕವಾಗಿ ಸ್ವಾಗತಿಸಿದರು. ಇದಾದ ನಂತರ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಂದ ಪ್ರಧಾನಿ ಮೋದಿಗೆ ಆತ್ಮೀಯ ಮತ್ತು ಅದ್ಧೂರಿ ಸ್ವಾಗತ ದೊರೆಯಿತು.

ಸದಾ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುವ ಈ ಇಬ್ಬರು ಜಾಗತಿಕ ನಾಯಕರ ಸ್ನೇಹ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭೇಟಿಯ ಬೆನ್ನಲ್ಲೇ ಪ್ರಧಾನಿ ಮೆಲೋನಿ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗಿನ ಹೊಸ ಮತ್ತು ಅದ್ಭುತವಾದ ಸೆಲ್ಫಿಯೊಂದನ್ನು ಹಂಚಿಕೊಂಡಿದ್ದಾರೆ. ಅದಕ್ಕೆ “ರೋಮ್‌ಗೆ ಸ್ವಾಗತ, ನನ್ನ ಸ್ನೇಹಿತ” ಎಂಬ ಹೃದಯಸ್ಪರ್ಶಿ ಶೀರ್ಷಿಕೆ ನೀಡಿದ್ದು, ಈ ಫೋಟೋ ಇಂಟರ್ನೆಟ್‌ನಲ್ಲಿ ಜಾಗತಿಕ ಮಟ್ಟದಲ್ಲಿ ತ್ವರಿತವಾಗಿ ವೈರಲ್ ಆಗಿದೆ.

ಐದು ರಾಷ್ಟ್ರಗಳ ಮಹತ್ವದ ಪ್ರವಾಸ ಪ್ರಧಾನಿ ಮೋದಿ ಅವರು ಮೇ 15 ರಂದು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ತಮ್ಮ ಈ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಿದ್ದರು. ಯುಎಇ ಭೇಟಿಯ ನಂತರ ನೆದರ್ಲ್ಯಾಂಡ್ಸ್, ಸ್ವೀಡನ್ ಮತ್ತು ನಾರ್ವೆ ದೇಶಗಳಿಗೆ ಭೇಟಿ ನೀಡಿ ಜಾಗತಿಕ ಬಾಂಧವ್ಯ ವೃದ್ಧಿಸಿದ ಮೋದಿ, ಈಗ ತಮ್ಮ ಪ್ರವಾಸದ ಅಂತಿಮ ನಿಲ್ದಾಣವಾಗಿ ಇಟಲಿಗೆ ಬಂದಿದ್ದಾರೆ. ಈ ಮುನ್ನ ಜೂನ್ 2024 ರಲ್ಲಿ ಜಿ-7 (G-7) ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಕೊನೆಯ ಬಾರಿಗೆ ಇಟಲಿಗೆ ಭೇಟಿ ನೀಡಿದ್ದರು.

ಮತ್ತಷ್ಟು ಓದಿ: ನೆದರ್‌ಲ್ಯಾಂಡ್ಸ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಭಾರತ ಮತ್ತು ಇಟಲಿ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಇದೀಗ ಹೊಸ ಅಧ್ಯಾಯ ಬರೆಯಲಾಗುತ್ತಿದ್ದು, ಈ ಭೇಟಿಯ ಅವಧಿಯಲ್ಲಿ ರಕ್ಷಣೆ, ವ್ಯಾಪಾರ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಐತಹಾಸಿಕ ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕುವ ನಿರೀಕ್ಷೆ ಇದೆ.

ಪ್ರಧಾನಿ ಅವರ ಭೇಟಿಯ ಹಿನ್ನೆಲೆಯಲ್ಲಿ ಇಟಾಲಿಯನ್ ಆಡಳಿತವು ಇಡೀ ರೋಮ್ ನಗರದಲ್ಲಿ ಸಮಗ್ರ ಮತ್ತು ಕಟ್ಟುನಿಟ್ಟಿನ ಭದ್ರತಾ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನಿ ಮೋದಿ ಅವರು ರೋಮ್‌ನ ಪಿಯಾಝಾ ಡೆಲ್ಲಾ ರಿಪಬ್ಲಿಕಾದಲ್ಲಿರುವ ಪ್ರಸಿದ್ಧ ಅನಂತರಾ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ.

ತಮ್ಮ ನಿಗದಿತ ಕಾರ್ಯಕ್ರಮಗಳ ಭಾಗವಾಗಿ, ಮೋದಿ ಅವರು ಮೊದಲು ಕ್ವಿರಿನೇಲ್ ಅರಮನೆಯಲ್ಲಿ ಇಟಲಿಯ ಅಧ್ಯಕ್ಷ ಸೆರ್ಗಿಯೊ ಮಟ್ಟರೆಲ್ಲಾ ಅವರನ್ನು ಭೇಟಿಯಾಗಲಿದ್ದಾರೆ. ತದನಂತರ, ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿ ನಡುವಿನ ದ್ವಿಪಕ್ಷೀಯ ಶೃಂಗಸಭೆಯು ರೋಮ್‌ನ ಐತಿಹಾಸಿಕ ವಿಲ್ಲಾ ಪ್ಯಾಂಫಿಲಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More