Gita Gopinath: ಐಎಂಎಫ್‌ನ ಉನ್ನತ ಹುದ್ದೆಗೆ ಬಡ್ತಿ ಪಡೆದ ಮೈಸೂರು ಮೂಲದ ಗೀತಾ ಗೋಪಿನಾಥ್
ಐಎಂಎಫ್‌ನ ಉಪವ್ಯವಸ್ಥಾಪಕ ನಿರ್ದೇಶಕ ಜೆಫ್ರಿ ಒಕಾಮೊಟೊ ಅವರ ಅಧಿಕಾರಾವಧಿ ಜನವರಿಯಲ್ಲಿ ಮುಕ್ತಾಯವಾಗಲಿದೆ. ಹೀಗಾಗಿ, ಆ ಹುದ್ದೆಗೆ ಖ್ಯಾತ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರನ್ನು ನೇಮಕ ಮಾಡಲಾಗಿದೆ.
ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್)ಯ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಗೀತಾ ಗೋಪಿನಾಥ್ 2022ರ ಜನವರಿಯಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೈಸೂರು ಮೂಲದವರಾದ ಗೀತಾ ಗೋಪಿನಾಥ್ ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿದ್ದು, ಅವರಿಗೆ ಐಎಂಎಫ್‌ನ ಪ್ರಥಮ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ನೀಡಲಾಗಿದೆ ಎಂದು ಐಎಂಎಫ್ ಘೋಷಿಸಿದೆ. ಈ ಮೂಲಕ ಭಾರತ ಮೂಲದ ಗೀತಾ ಗೋಪಿನಾಥ್ ಐಎಫ್ಎಫ್ನ ಮತ್ತೊಂದು ಪ್ರಮುಖ ಹುದ್ದೆಗೆ ಏರಿದ್ದಾರೆ.
ಐಎಂಎಫ್‌ನ ಉಪವ್ಯವಸ್ಥಾಪಕ ನಿರ್ದೇಶಕ ಜೆಫ್ರಿ ಒಕಾಮೊಟೊ ಅವರ ಅಧಿಕಾರಾವಧಿ ಜನವರಿಯಲ್ಲಿ ಮುಕ್ತಾಯವಾಗಲಿದೆ. ಹೀಗಾಗಿ, ಆ ಹುದ್ದೆಗೆ ಖ್ಯಾತ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಮೂರು ವರ್ಷ ಐಎಂಎಫ್‌ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿರುವ ಗೀತಾ ಗೋಪಿನಾಥ್ ಮುಂದಿನ ಜನವರಿಯಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಐಎಂಎಫ್‌ನ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿರುವ ಜೆಫ್ರಿ ಒಕಾಮೊಟೊ ಅವರ ಅಧಿಕಾರಾವಧಿ 2022ರ ಮೊದಲ ತಿಂಗಳು ಮುಕ್ತಾಯವಾಗಲಿದೆ. ಆ ಸ್ಥಾನಕ್ಕೆ ಗೀತಾ ಗೋಪಿನಾಥ್ ಬಡ್ತಿ ಪಡೆದಿದ್ದಾರೆ. ಈ ಮೂಲಕ ಐಎಂಎಫ್‌ನಲ್ಲಿ ಉನ್ನತ ಸ್ಥಾನಗಳಲ್ಲಿ ಇಬ್ಬರು ಮಹಿಳೆಯರು ಸೇವೆ ಸಲ್ಲಿಸಿದಂತಾಗಲಿದೆ.
Today, I’m announcing FDMD @gwsokamoto will leave the IMF early next year & proposing chief economist @GitaGopinath to become the new FDMD.
— Kristalina Georgieva (@KGeorgieva) December 2, 2021
ಗೀತಾ ಗೋಪಿನಾಥ್ ಅವರು ಐಎಂಎಫ್‌ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಜನವರಿಯಲ್ಲಿ ಗೀತಾ ಗೋಪಿನಾಥ್ ಅಧಿಕಾರಾವಧಿ ಮುಕ್ತಾಯವಾಗುತ್ತಿತ್ತು. ಹೀಗಾಗಿ, ಅದಾದ ಬಳಿಕ ಗೀತಾ ಗೋಪಿನಾಥ್ ಜನವರಿಯಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದ ಉಪನ್ಯಾಸಕ ಹುದ್ದೆಗೆ ಮರಳುವುದಾಗಿ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಘೋಷಿಸಿದ್ದರು. ಆದರೆ, ಜನವರಿಯಲ್ಲಿ ಅವರು ಮತ್ತೆ ಐಎಂಎಫ್ ಮುಖ್ಯ ಹುದ್ದೆಗೆ ಬಡ್ತಿ ಪಡೆಯುವ ಮೂಲಕ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಈ ಕುರಿತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಪ್ರತಿಕ್ರಿಯೆ ನೀಡಿದ್ದು, ಜೆಫ್ರಿ ಮತ್ತು ಗೀತಾ ಇಬ್ಬರೂ ನನಗೆ ಒಳ್ಳೆಯ ಸಹೋದ್ಯೋಗಿಗಳು. ಜೆಫ್ರಿ ಹುದ್ದೆ ತೊರೆಯುತ್ತಿರುವುದಕ್ಕೆ ಬೇಸರವಾಗುತ್ತಿದೆ. ಆದರೆ, ಗೀತಾ ಗೋಪಿನಾಥ್ ಆ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ನನಗೆ ಖುಷಿಯಾಗಿದೆ ಎಂದಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಇತಿಹಾಸದಲ್ಲಿ ಮೊದಲ ಮಹಿಳಾ ಮುಖ್ಯ ಅರ್ಥಶಾಸ್ತ್ರಜ್ಞರಾಗಿದ್ದ ಗೀತಾ ಗೋಪಿನಾಥ್ ಐಎಂಎಫ್‌ನ ಸದಸ್ಯ ರಾಷ್ಟ್ರಗಳಿಂದ ಮೆಚ್ಚುಗೆಯನ್ನು ಗಳಿಸಿದ್ದಾರೆ ಮತ್ತು ಕಠಿಣವಾದ ಕೆಲಸವನ್ನು ಮುನ್ನಡೆಸಿ, ಯಶಸ್ವಿಗೊಳಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.
I am honored to become the IMF’s First Deputy Managing Director. With the pandemic, the work of the Fund has never been more important. I look forward to working with my brilliant colleagues to help our membership face these important challenges.https://t.co/jpp3C7dRog
— Gita Gopinath (@GitaGopinath) December 2, 2021
ತಮಗೆ ಸಿಕ್ಕಿರುವ ಹೊಸ ಜವಾಬ್ದಾರಿಯ ಬಗ್ಗೆ ಗೀತಾ ಗೋಪಿನಾಥ್ ಸಂತೋಷ ವ್ಯಕ್ತಪಡಿಸಿದ್ದು, ನನಗೆ ಹೊಸ ಅವಕಾಶ ನೀಡಿದ್ದಕ್ಕಾಗಿ ಕ್ರಿಸ್ಟಲಿನಾ ಜಾರ್ಜಿವಾ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಐಎಂಎಫ್‌ನ ಪ್ರತಿಭಾವಂತರ ಜೊತೆ ಮತ್ತೆ ಕೆಲಸ ಮಾಡುವುದು ನನಗೆ ಸಿಕ್ಕಿರುವ ಅದ್ಭುತವಾದ ಅವಕಾಶ ಎಂದಿದ್ದಾರೆ.
ಮೈಸೂರಿನಲ್ಲೇ ಹುಟ್ಟಿ ಬೆಳೆದವರು. ಈಗಲೂ ಗೀತಾ ಗೋಪಿನಾಥ್ ತಂದೆ ಗೋಪಿನಾಥ್ , ಮೈಸೂರು ಹೊರ ವಲಯದಲ್ಲಿ ಕೃಷಿ ಮಾಡುತ್ತಿದ್ದಾರೆ. ತಮ್ಮದೇ ಆದ ಫಾರ್ಮ್ ಹೌಸ್ ಅನ್ನು ಮೈಸೂರು ನಗರದ ಹೊರವಲಯದಲ್ಲಿ ಹೊಂದಿದ್ದಾರೆ. ಕೊರೊನಾದ ಸಾಂಕ್ರಮಿಕದ ಸಂದರ್ಭದಲ್ಲಿ ತಮ್ಮ ಫಾರ್ಮ್ ಹೌಸ್ ನಲ್ಲಿ ಇದ್ದ ಹಸುಗಳನ್ನು ಬಡವರಿಗೆ ದಾನವಾಗಿ ನೀಡಿದ್ದರು.
ಲಸಿಕೆ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಹಣದುಬ್ಬರದ ಮೇಲೂ ಒಂದು ಕಣ್ಣಿಟ್ಟರಬೇಕು ಎನ್ನುತ್ತಾರೆ ಗೀತಾ ಗೋಪಿನಾಥ್
Published On - 12:47 pm, Fri, 3 December 21