AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆ ಎತ್ತಿದವರಿಗೆ ತಕ್ಕ ಉತ್ತರ ನೀಡಿದ ಅಮೆರಿಕ

ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆ ಮಾಡಿದವರಿಗೆ ಅಮೆರಿಕ(America) ತಕ್ಕ ಉತ್ತರ ನೀಡಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರ, ಅಲ್ಲಿಗೆ ಭೇಟಿ ನೀಡುವ ಯಾರಾದರೂ ಅದನ್ನು ಸ್ವತಃ ಅನುಭವಿಸಬಹುದು ಎಂದು ಅಮೆರಿಕ ಶ್ವೇತ ಭವನ ಹೇಳಿದೆ.

ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆ ಎತ್ತಿದವರಿಗೆ ತಕ್ಕ ಉತ್ತರ ನೀಡಿದ ಅಮೆರಿಕ
ಜೋ ಬೈಡನ್-ನರೇಂದ್ರ ಮೋದಿImage Credit source: Indian Express
ನಯನಾ ರಾಜೀವ್
|

Updated on: Jun 06, 2023 | 12:14 PM

Share

ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆ ಮಾಡಿದವರಿಗೆ ಅಮೆರಿಕ(America) ತಕ್ಕ ಉತ್ತರ ನೀಡಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರ, ಅಲ್ಲಿಗೆ ಭೇಟಿ ನೀಡುವ ಯಾರಾದರೂ ಅದನ್ನು ಸ್ವತಃ ಅನುಭವಿಸಬಹುದು ಎಂದು ಅಮೆರಿಕ ಶ್ವೇತ ಭವನ ಹೇಳಿದೆ. ಭಾರತದ ಪ್ರಜಾಪ್ರಭುತ್ವದ ಬಗ್ಗೆ ಅನುಮಾನವಿದ್ದವರು ಅಲ್ಲಿಗೆ ಹೋಗಿ ನೋಡಿ, ಎಲ್ಲರಿಗೂ ಅರ್ಥವಾಗುತ್ತದೆ ಎಂದು ಹೇಳಿದೆ. ಭಾರತದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಮೇಲಿನ ಕಳವಳವನ್ನು ಅಮೆರಿಕವು ಸ್ಪಷ್ಟವಾಗಿ ತಳ್ಳಿಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ ಕೊನೆಯ ವಾರದಲ್ಲಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ಎಲ್ಲೂ ಉಲ್ಲೇಖಿಸಿಲ್ಲ, ಆದರೂ ಅವರ ಕಮೆಂಟ್​ಗೆ ತಕ್ಕೆ ಉತ್ತರ ಸಿಕ್ಕಂತಾಗಿದೆ. ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸುತ್ತಿರುವ ಹೊತ್ತಿನಲ್ಲಿ ಈ ಹೇಳಿಕೆ ಹೊರ ಬಿದ್ದಿದೆ. ರಾಹುಲ್ ಗಾಂಧಿ ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಭಾರತಕ್ಕೆ ಹಿಂತಿರುಗಿ ಪ್ರಜಾಪ್ರಭುತ್ವದೊಂದಿಗೆ ಭಾರತೀಯ ಸಂವಿಧಾನದ ರಕ್ಷಣೆಗೆ ನಿಲ್ಲುವಂತೆ ಅವರು ವಿನಂತಿಸಿದ್ದರು.

ಅಮೆರಿಕ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಹಾಡಿ ಹೊಗಳಿದ್ದಾರೆ. ಸಹಜವಾಗಿ, ನಮ್ಮ ಎರಡು ದೇಶಳ ನಡುವೆ ಬಲವಾದ ಆರ್ಥಿಕ ಸಂಬಂಧವಿದೆ, ಭಾರತವು ಪೆಸಿಫಿಕ್ ಕ್ವಾಡ್​ನ ಸದಸ್ಯ ಹಾಗೂ ಇಂಡೋ-ಪೆಸಿಫಿಕ್ ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ಸ್ನೇಹಿತ ಮತ್ತು ಪಾಲುದಾರ ರಾಷ್ಟ್ರವಾಗಿದೆ. ಭಾರತವು ನಿಸ್ಸಂಶಯವಾಗಿ ನಮ್ಮ ಎರಡು ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತ್ರವಲ್ಲ, ಬಹುಪಕ್ಷೀಯ ಹಲವು ಹಂತಗಳಲ್ಲಿ ಸಂಬಂಧ ಹೊಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ