AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa NightClub Fire: ಥೈಲ್ಯಾಂಡ್​ಗೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್​ಕ್ಲಬ್​ ಮಾಲೀಕರ ಬಂಧನ

ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್(Thailand)​ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.

Goa NightClub Fire: ಥೈಲ್ಯಾಂಡ್​ಗೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ ಗೋವಾ ನೈಟ್​ಕ್ಲಬ್​ ಮಾಲೀಕರ ಬಂಧನ
ಲೂತ್ರಾ ಸಹೋದರರುImage Credit source: India TV
ನಯನಾ ರಾಜೀವ್
|

Updated on: Dec 11, 2025 | 9:41 AM

Share

ಪಣಜಿ, ಡಿಸೆಂಬರ್ 11: ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್(Thailand)​ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಲಬ್​ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.

ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿಯ ನಂತರ ದೇಶದಿಂದ ಪಲಾಯನ ಮಾಡಿದ ಲೂತ್ರಾ ಸಹೋದರರ ಒಡೆತನದ ಗೋವಾದ ವಾಗೇಟರ್ ಪ್ರದೇಶದಲ್ಲಿರುವ ರೋಮಿಯೋ ಲೇನ್ ರೆಸ್ಟೋರೆಂಟ್ ಅನ್ನು ಕೆಡವಲಾಯಿತು. ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಇದರ ಮಾಲೀಕರು.

ರೋಮಿಯೋ ಲೇನ್ ಬಳಿ ಇರುವ ಅವರ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್ ಡಿಸೆಂಬರ್ 7 ರಂದು ಬೆಂಕಿಗೆ ಆಹುತಿಯಾಗಿ 25 ಜನರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕ್ಲಬ್​ನ ಮಾಲೀಕರನ್ನು ಥೈಲ್ಯಾಂಡ್​ನಲ್ಲಿ ಬಂಧಿಸಲಾಗಿದೆ. ಶೀಘ್ರದಲ್ಲೇ ಭಾರತಕ್ಕೆ ಕರೆತರುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಹೊಸ ವರ್ಷದ ಆಚರಣೆಗಾಗಿ ಹೆಚ್ಚಿನ ಸಂಖ್ಯೆಯ ಸ್ಥಳೀಯರು ಮತ್ತು ವಿದೇಶಿಯರು ಗೋವಾಕ್ಕೆ ಆಗಮಿಸುತ್ತಿರುವ ಸಮಯದಲ್ಲಿ ಗೋವಾ ನೈಟ್‌ಕ್ಲಬ್ ಬೆಂಕಿ ದುರಂತ ಸಂಭವಿಸಿದೆ.

ಮತ್ತಷ್ಟು ಓದಿ: ಗೋವಾ ನೈಟ್‌ಕ್ಲಬ್​​ ಬೆಂಕಿ ದುರಂತದಲ್ಲಿ 25 ಜನ ಸಾವು; ಮಾಲೀಕರು ಥೈಲ್ಯಾಂಡ್​​ಗೆ ಪರಾರಿ

ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಗೋವಾದ ಅರ್ಪೋರಾದ ಜನಪ್ರಿಯ ನೈಟ್‌ಕ್ಲಬ್‌ನಲ್ಲಿ ಹಲವಾರು ಸುರಕ್ಷತಾ ಅಪಾಯಗಳ ಪರಿಣಾಮವಾಗಿ ಸಂಭವಿಸಿದ ಬೆಂಕಿಯ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಗೋವಾ ಪೊಲೀಸರು ಅವರ ಪಾಸ್‌ಪೋರ್ಟ್‌ಗಳನ್ನು ಅಮಾನತುಗೊಳಿಸಿ ವಿದೇಶಾಂಗ ಸಚಿವಾಲಯವನ್ನು ವಿನಂತಿಸಿದ ಸ್ವಲ್ಪ ಸಮಯದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?