ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು

| Updated By: ಸುಷ್ಮಾ ಚಕ್ರೆ

Updated on: Oct 14, 2021 | 4:11 PM

Hindu Temple Attack: ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಅಪರಿಚಿತರ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದ ದೇವಸ್ಥಾನದ ಮೇಲೆ ದಾಳಿ
Follow us on

ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಗೂಂಡಗಳು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಅಪರಿಚಿತರ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಾಂಗ್ಲಾದೇಶದ ಸ್ಥಳೀಯ ಮಾಧ್ಯಮಗಳ ಪ್ರಕಾರ, ದುರ್ಗಾ ದೇವಿಯ ದೇವಸ್ಥಾನದಲ್ಲಿ ಹಿಂಸಾಚಾರ ನಡೆದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಚಂದ್​ಪುರದ ಹಜಿಗಂಜ್, ಚತ್ತೋಗ್ರಾಂನ ಬಾಂಶ್​ಖಲಿ ಮತ್ತು ಕಾಕ್ಸ್​ ಬಜಾರ್​ನ ಪೆಕುವಾದಲ್ಲಿ ಕೂಡ ಹಿಂದೂ ದೇವಾಲಯಗಳಲ್ಲಿ ದಾಂಧಲೆ ಎಬ್ಬಿಸಿರುವ ಘಟನೆ ವರದಿಯಾಗಿದೆ.

ಇಂದು ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಿಂದೂ ದೇವಾಲಯಗಳ ಎದುರು ಜನರು ಹಾಗೂ ಪೊಲೀಸರ ನಡುವೆ ಗಲಾಟೆಯೂ ನಡೆದಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ ಭದ್ರತಾ ಪಡೆಯನ್ನು ಕೂಡ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Covaxin: ನವೆಂಬರ್​ನಲ್ಲಿ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಸಾಧ್ಯತೆ; ಆರೋಗ್ಯ ಸಮಸ್ಯೆ ಇರುವವರಿಗೆ ಆದ್ಯತೆ

Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

Published On - 4:06 pm, Thu, 14 October 21