Gotabaya Rajapaksa: ಇಂದು ಮಾಲ್ಡೀವ್ಸ್​ನಿಂದ ಸಿಂಗಾಪುರ್​ಗೆ ಹಾರಲಿದ್ದಾರೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ

Sri Lanka Crisis: ಸಿಂಗಾಪುರ್​ಗೆ ತೆರಳಿದ ಬಳಿಕ ಅಲ್ಲಿಂದಲೇ ಗೊಟಬಯ ರಾಜಪಕ್ಸ ತಮ್ಮ ರಾಜೀನಾಮೆ ಪತ್ರವನ್ನು ಶ್ರೀಲಂಕಾ ಸಂಸತ್​ನ ಸ್ಪೀಕರ್​ಗೆ ಕಳುಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Gotabaya Rajapaksa: ಇಂದು ಮಾಲ್ಡೀವ್ಸ್​ನಿಂದ ಸಿಂಗಾಪುರ್​ಗೆ ಹಾರಲಿದ್ದಾರೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ
ಗೊಟಬಯ ರಾಜಪಕ್ಸImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 14, 2022 | 9:13 AM

ನವದೆಹಲಿ: ಬುಧವಾರ ಶ್ರೀಲಂಕಾದಿಂದ ಮಾಲ್ಡೀವ್ಸ್‌ಗೆ ಪಲಾಯನ ಮಾಡಿರುವ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ವಿರುದ್ಧ ಶ್ರೀಲಂಕಾದಲ್ಲಿ ಪ್ರತಿಭಟನೆ ಹೆಚ್ಚಾಗಿದೆ. ಮಾಲ್ಡೀವ್ಸ್​ನಲ್ಲೂ (Maldives) ಶ್ರೀಲಂಕಾ ವಲಸಿಗರ ಪ್ರತಿಭಟನೆಯ ಕಾವು ಗೊಟಬಯ ಅವರಿಗೆ ತಟ್ಟಿದೆ. ಇದರ ನಡುವೆ ಗೊಟಬಯ ರಾಜಪಕ್ಸ ಇಂದು ಮಾಲ್ಡೀವ್ಸ್​​ನಿಂದ ಸಿಂಗಾಪುರ್​ಗೆ ಹಾರುವ ನಿರೀಕ್ಷೆಯಿದೆ. ಈ ಬಗ್ಗೆ ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, ಸಿಂಗಾಪುರ್​ಗೆ ತೆರಳಿದ ಬಳಿಕ ಅಲ್ಲಿಂದಲೇ ಗೊಟಬಯ ರಾಜಪಕ್ಸ ತಮ್ಮ ರಾಜೀನಾಮೆ ಪತ್ರವನ್ನು ಶ್ರೀಲಂಕಾ ಸಂಸತ್​ನ ಸ್ಪೀಕರ್​ಗೆ ಕಳುಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಮತ್ತು ಗೊಟಬಯ ರಾಜಪಕ್ಸ ಅವರ ಪಲಾಯನಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ 10 ಪ್ರಮುಖ ಬೆಳಣಿಗೆಗಗಳು ಇಲ್ಲಿವೆ:

  1. ಜನರ ಪ್ರತಿಭಟನೆಗೆ ಹೆದರಿರುವ ಗೊಟಬಯ ರಾಜಪಕ್ಸ ಮಾಲ್ಡೀವ್ಸ್​ನಿಂದಲೂ ಪಲಾಯನ ಮಾಡಲು ನಿರ್ಧರಿಸಿದ್ದಾರೆ. ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಹಾರಿಸಲು ಖಾಸಗಿ ಜೆಟ್ ವ್ಯವಸ್ಥೆ ಮಾಡುವಂತೆ ಮಾಲ್ಡೀವ್ಸ್ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ ಎಂದು ಮಾಲ್ಡೀವ್ಸ್‌ನ ಸರ್ಕಾರಿ ಮೂಲಗಳು ತಿಳಿಸಿವೆ. ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸ ತಮ್ಮ ರಾಜೀನಾಮೆಯನ್ನು ನೀಡದೆ ನಿನ್ನೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದರು.
  2. ಆದರೆ, ಸಿಂಗಾಪುರ್ ಸರ್ಕಾರ ಗೊಟಬಯ ರಾಜಪಕ್ಸ ಅವರನ್ನು ತಮ್ಮ ದೇಶದೊಳಗೆ ಬಿಡುವ ವಿಚಾರವಾಗಿ ಕೂಡಲೇ ಸ್ಪಂದನೆ ನೀಡಿಲ್ಲ ಎಂದು ಹೇಳಲಾಗಿದೆ.
  3. ಇದನ್ನೂ ಓದಿ
    Image
    Gotabaya Rajapaksa: ಶ್ರೀಲಂಕಾದಿಂದ ಪರಾರಿಯಾದ ಗೊಟಬಯ ರಾಜಪಕ್ಸ ವಿರುದ್ಧ ಮಾಲ್ಡೀವ್ಸ್​​ನಲ್ಲೂ ಪ್ರತಿಭಟನೆ
    Image
    Gotabaya Rajapaksa Profile: ಆಗ ಹೀರೊ ಈಗ ವಿಲನ್; ಶ್ರೀಲಂಕಾ ಬಿಕ್ಕಟ್ಟಿನ ಖಳನಾಯಕ ಗೊಟಬಯ ರಾಜಪಕ್ಸ
    Image
    Sri Lanka Economic Crisis: ಮಾಲ್ಡೀವ್ಸ್​ಗೆ ಓಡಿಹೋದ ಅಧ್ಯಕ್ಷ ಗೊಟಬಯ ರಾಜಪಕ್ಸ; ಮಾಜಿ ವಿತ್ತ ಸಚಿವಗೆ ವಿಮಾನ ಹತ್ತಲು ಬಿಡದ ಜನ
    Image
    ರಾಜೀನಾಮೆ ಪತ್ರಕ್ಕೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಸಹಿ; ನಾಳೆ ಸಂಸತ್​​ನಲ್ಲಿ ಘೋಷಣೆ
  4. ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಸರ್ಕಾರ ಮತ್ತು ಪ್ರತಿಪಕ್ಷಗಳೆರಡಕ್ಕೂ ಒಪ್ಪಿಗೆಯಾಗುವ ಪ್ರಧಾನಿಯನ್ನು ನಾಮನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರಿಗೆ ಸೂಚಿಸಿದ್ದಾರೆ.
  5. ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರನಿಲ್ ವಿಕ್ರಮಸಿಂಘೆ ವಿಧಿಸಿದ್ದ ಕರ್ಫ್ಯೂ ಹಿಂಪಡೆಯಲಾಗಿದೆ.
  6. ಸಾವಿರಾರು ಜನರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಕಚೇರಿಗೆ ನುಗ್ಗಿ, ಅವರ ನಿವಾಸವನ್ನು ವಶಪಡಿಸಿಕೊಂಡಿದ್ದರು. ಶ್ರೀಲಂಕಾ ಸಂಸತ್ತಿನ ಗೇಟ್‌ಗಳನ್ನು ತಳ್ಳಿ, ಒಳ ನುಗ್ಗಲು ಪ್ರಯತ್ನಿಸಿದ್ದರು. ಹೀಗಾಗಿ, ಅವರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು.
  7. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಈಗಾಗಲೇ ಭರವಸೆ ನೀಡಿದಂತೆ ಬುಧವಾರ ತಡರಾತ್ರಿ ತಮ್ಮ ರಾಜೀನಾಮೆಯನ್ನು ಕಳುಹಿಸಲಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಹೇಳಿದ್ದಾರೆ. ಪ್ರಧಾನಿ ವಿಕ್ರಮಸಿಂಘೆ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
  8. ಶ್ರೀಲಂಕಾದ ಸರ್ಕಾರಿ ಟಿವಿ ನೆಟ್‌ವರ್ಕ್ ಆಗಿರುವ ರೂಪವಾಹಿನಿ ಕಾರ್ಪೊರೇಷನ್ ಪ್ರತಿಭಟನಾಕಾರರು ಟಿವಿ ಸ್ಟೇಷನ್‌ಗೆ ಪ್ರವೇಶಿಸಿದ ನಂತರ ಅದರ ಪ್ರಸಾರವನ್ನು ಸ್ಥಗಿತಗೊಳಿಸಿತು. ಚಾನೆಲ್ ನಂತರ ಪ್ರಸಾರವನ್ನು ಪುನರಾರಂಭಿಸಿತು.
  9. ಕಳೆದ ರಾತ್ರಿ ಗೊಟಬಯ ರಾಜಪಕ್ಸ ಅವರು ತಮಗೆ ಖಾಸಗಿ ಜೆಟ್ ವ್ಯವಸ್ಥೆ ಮಾಡುವಂತೆ ವಿನಂತಿಸಿದ್ದಾರೆ. ಅಧ್ಯಕ್ಷರಾಗಿ ಗೊಟಬಯ ರಾಜಪಕ್ಸ ಅವರು ರಕ್ಷಣಾ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿ ಮುಂದುವರಿದಿದ್ದಾರೆ.
  10. ಮಾಲ್ಡೀವ್ಸ್‌ಗೆ ಆಗಮಿಸಿದ ನಂತರ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ, ಅವರ ಪತ್ನಿ ಮತ್ತು ಅಂಗರಕ್ಷಕರನ್ನು ಪೊಲೀಸ್ ಬೆಂಗಾವಲಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಯಿತು ಎಂದು ಮಾಲೆಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೊಟಬಯ ರಾಜಪಕ್ಸ ಅವರ ಕಿರಿಯ ಸಹೋದರ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸ ಕೂಡ ದೇಶವನ್ನು ತೊರೆದಿದ್ದಾರೆ ಎಂದು ವರದಿಗಳು ಹೇಳಿವೆ.
  11. ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ನಿನ್ನೆ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ ಮತ್ತು ಅವರ ಸಹೋದರ ಬಸಿಲ್ ಪಲಾಯನ ಮಾಡಲು ಭಾರತ ಸಹಾಯ ಮಾಡಿದೆ ಎಂಬ ವರದಿಗಳನ್ನು ತಳ್ಳಿಹಾಕಿದೆ.

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ