Greece Train Accident: ಗ್ರೀಸ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 32 ಮಂದಿ ಸಾವು, 85ಕ್ಕೂ ಅಧಿಕ ಜನರಿಗೆ ಗಾಯ
ಗ್ರೀಸ್ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ರೀಸ್ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಧಾನಿ ಅಥೆನ್ಸ್ ಮತ್ತು ಥೆಸಲೋನಿಕಿ ನಡುವೆ ಅಥೆನ್ಸ್‌ನಿಂದ ಉತ್ತರಕ್ಕೆ 235 ಮೈಲುಗಳಷ್ಟು ದೂರದಲ್ಲಿರುವ ಟೆಂಪಿ ಬಳಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಪೈಕಿ 3 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ 32ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 85 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 25 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಹತ್ತಿರದ ನಗರಗಳಿಂದ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಗಿದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
JUST IN: Cargo train and passenger train collide in Central Greece, several dead multiple injured.. pic.twitter.com/TG9nVmsSmE
— Chuck Callesto (@ChuckCallesto) February 28, 2023
ವರದಿಗಳ ಪ್ರಕಾರ, ಸರ್ಕಾರಿ ಅಧಿಕಾರಿಗಳು ಅಪಘಾತದ ನಂತರ, ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದರೆ, ರಕ್ಷಣಾ ಸಹಾಯಕ್ಕಾಗಿ ಸೈನ್ಯವನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.
ಬೆಂಕಿಯನ್ನು ನಂದಿಸಿದ ನಂತರ ಅನೇಕ ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಈ ಘಟನೆಯ ಚಿತ್ರಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:41 am, Wed, 1 March 23