Greece Train Accident: ಗ್ರೀಸ್​ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 32 ಮಂದಿ ಸಾವು, 85ಕ್ಕೂ ಅಧಿಕ ಜನರಿಗೆ ಗಾಯ

ಗ್ರೀಸ್​ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Greece Train Accident: ಗ್ರೀಸ್​ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 32 ಮಂದಿ ಸಾವು, 85ಕ್ಕೂ ಅಧಿಕ ಜನರಿಗೆ ಗಾಯ
ಗ್ರೀಸ್​ನಲ್ಲಿ ರೈಲು ಅಪಘಾತ
Image Credit source: Reuters

Updated on: Mar 01, 2023 | 11:02 AM

ಗ್ರೀಸ್​ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಧಾನಿ ಅಥೆನ್ಸ್ ಮತ್ತು ಥೆಸಲೋನಿಕಿ ನಡುವೆ ಅಥೆನ್ಸ್‌ನಿಂದ ಉತ್ತರಕ್ಕೆ 235 ಮೈಲುಗಳಷ್ಟು ದೂರದಲ್ಲಿರುವ ಟೆಂಪಿ ಬಳಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಪೈಕಿ 3 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 32ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 85 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 25 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಹತ್ತಿರದ ನಗರಗಳಿಂದ ಆಂಬ್ಯುಲೆನ್ಸ್‌ಗಳನ್ನು ಕರೆಸಲಾಗಿದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಸರ್ಕಾರಿ ಅಧಿಕಾರಿಗಳು ಅಪಘಾತದ ನಂತರ, ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದರೆ, ರಕ್ಷಣಾ ಸಹಾಯಕ್ಕಾಗಿ ಸೈನ್ಯವನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.

ಬೆಂಕಿಯನ್ನು ನಂದಿಸಿದ ನಂತರ ಅನೇಕ ಜನರು ಪ್ರಜ್ಞಾಹೀನರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಈ ಘಟನೆಯ ಚಿತ್ರಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 7:41 am, Wed, 1 March 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us