ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ

ಗುಂಡು ಹಾರಿಸಿದ ವ್ಯಕ್ತಿಯ ದೇಹವು ಇದೀಗ ಪೊಲೀಸರಿಗೆ ಪತ್ತೆಯಾಗಿದೆ. ವರದಿಗಳ ಪ್ರಕಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ

ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 26, 2022 | 3:27 PM

ಮಾಸ್ಕೋ: ಮಧ್ಯ ರಷ್ಯಾದ (Russia) ಇಝೆವ್ಸ್ಕ್(Izhevsk) ನಗರದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಶಿಕ್ಷಕರು ಮತ್ತು ಐವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿಯು ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.  ದಾಳಿಕೋರರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ ದಾಳಿಕೋರ ನಾಜಿ ಚಿಹ್ನೆ ಮತ್ತು ಬಾಲಾಕ್ಲಾವಾ ಹೊಂದಿರುವ ಕಪ್ಪು ಟಾಪ್  ಧರಿಸಿದ್ದನು. ಯಾವುದೇ ಗುರುತಿನ ಚೀಟಿಯನ್ನು ಹೊಂದಿರಲಿಲ್ಲ. ಅವನ ಗುರುತನ್ನು ಪತ್ತೆ  ಹಚ್ಚಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಆಂತರಿಕ ಸಚಿವಾಲಯ ತಿಳಿಸಿದೆ.

ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಅಲೆಕ್ಸಾಂಡರ್ ಬ್ರೆಚಲೋವ್  ಶಾಲೆ No88 ಹೊರಗೆ ವಿಡಿಯೊ ಹೇಳಿಕೆ ನೀಡಿದ್ದು ಗಾಯಗೊಂಡವರಲ್ಲಿ ಮಕ್ಕಳೂ ಇದ್ದಾರೆ ಎಂದು ದೃಢಪಡಿಸಿದರು.ರಕ್ಷಣಾ ಕಾರ್ಯಕರ್ಚರು  ಮತ್ತು ವೈದ್ಯಕೀಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು, ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ.

ಸುಮಾರು 630,000 ಜನರಿರುವ ನಗರ, ಇಝೆವ್ಸ್ಕ್ ರಷ್ಯಾದ ಉಡ್ಮುರ್ಟ್ ಗಣರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿದೆ, ಇದು ಮಾಸ್ಕೋದಿಂದ ಪೂರ್ವಕ್ಕೆ 1,000 ಕಿಲೋಮೀಟರ್ (620 ಮೈಲುಗಳು) ದೂರದಲ್ಲಿದೆ.

Published On - 2:30 pm, Mon, 26 September 22