AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​​-1 ಬಿ ವೀಸಾ ಶುಲ್ಕ ಹೆಚ್ಚಳ ಗೊಂದಲ, ಯಾರ್ಯಾರಿಗೆ ಅನ್ವಯ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ಟ್ರಂಪ್

H-1B Visa: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) 1 ಲಕ್ಷ ಡಾಲರ್‌ಗೆ ಏರಿಸಿದ್ದಾರೆ. ಆದರೆ ಈ ವೀಸಾ ಶುಲ್ಕದ ಬಗ್ಗೆ ಸಾಕಷ್ಟು ಮಂದಿಗೆ ಗೊಂದಲವಿದೆ, ಅದು ಯಾರಿಗೆ ಅನ್ವಯ ಆಗುತ್ತೆ ಯಾರಿಗೆ ಆಗುವುದಿಲ್ಲ ಎನ್ನುವುದರ ಕುರಿತು ಟ್ರಂಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಇತರ ದೇಶಗಳಿಂದ ಅಮೆರಿಕಕ್ಕೆ ಬರುವ ಜನರು ಅಧಿಕ ಕೌಶಲ ಉಳ್ಳವರಾಗಿರಬೇಕು ಹಾಗೂ ಈ ವೀಸಾ ಪಡೆದು ಬರುವವರಿಂದಾಗಿ ಸ್ಥಳೀಯರು ತಮ್ಮ ಉದ್ಯೋಗ ಕಳೆದುಕೊಳ್ಳುವುದಿಲ್ಲ ಎಂಬುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಆಡಳಿತ ಹೇಳಿದೆ.

ಎಚ್​​-1 ಬಿ ವೀಸಾ ಶುಲ್ಕ ಹೆಚ್ಚಳ ಗೊಂದಲ, ಯಾರ್ಯಾರಿಗೆ ಅನ್ವಯ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ಟ್ರಂಪ್
ವೀಸಾ
ನಯನಾ ರಾಜೀವ್
|

Updated on: Sep 21, 2025 | 10:34 AM

Share

ವಾಷಿಂಗ್ಟನ್, ಸೆಪ್ಟೆಂಬರ್ 21: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) 1 ಲಕ್ಷ ಡಾಲರ್‌ಗೆ ಏರಿಸಿದ್ದಾರೆ. ಆದರೆ ಈ ವೀಸಾ ಶುಲ್ಕದ ಬಗ್ಗೆ ಸಾಕಷ್ಟು ಮಂದಿಗೆ ಗೊಂದಲವಿದೆ, ಅದು ಯಾರಿಗೆ ಅನ್ವಯ ಆಗುತ್ತೆ ಯಾರಿಗೆ ಆಗುವುದಿಲ್ಲ ಎನ್ನುವುದರ ಕುರಿತು  ಟ್ರಂಪ್ ಆಡಳಿತ ಸ್ಪಷ್ಟನೆ ಕೊಟ್ಟಿದೆ. ಇತರ ದೇಶಗಳಿಂದ ಅಮೆರಿಕಕ್ಕೆ ಬರುವ ಜನರು ಅಧಿಕ ಕೌಶಲ ಉಳ್ಳವರಾಗಿರಬೇಕು ಹಾಗೂ ಈ ವೀಸಾ ಪಡೆದು ಬರುವವರಿಂದಾಗಿ ಸ್ಥಳೀಯರು ತಮ್ಮ ಉದ್ಯೋಗ ಕಳೆದುಕೊಳ್ಳುವುದಿಲ್ಲ ಎಂಬುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಆಡಳಿತ ಹೇಳಿದೆ.

ಅಮೆರಿಕ ಸರ್ಕಾರವು ಹೊಸ 100,000 ಡಾಲರ್ ಶುಲ್ಕವು ಹೊಸ ಅರ್ಜಿದಾರರಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಪ್ರಸ್ತುತ ವೀಸಾ ಹೊಂದಿರುವವರಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೊಸ ಶುಲ್ಕವು ಈಗಾಗಲೇ ಎಚ್‌–1ಬಿ ವೀಸಾ ಹೊಂದಿರುವವರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವರದಿಯಲ್ಲಿ ಅದು ತಿಳಿಸಿದೆ.

ಹೊಸ ಶುಲ್ಕ ಯಾರಿಗೆ ಅನ್ವಯ?

ಈಗಾಗಲೇ H-1B ವೀಸಾಗಳನ್ನು ಹೊಂದಿರುವವರು ಮತ್ತು ಪ್ರಸ್ತುತ ದೇಶದ ಹೊರಗೆ ಇರುವವರಿಗೆ ಮರು-ಪ್ರವೇಶಿಸಲು 100,000 ಡಾಲರ್ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಎಕ್ಸ್ ಪೋಸ್ಟ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದು ಹೊಸ ವೀಸಾಗಳಿಗೆ ಮಾತ್ರ ಅನ್ವಯಿಸುತ್ತದೆ, ನವೀಕರಣಗಳಿಗೆ ಅಲ್ಲ ಮತ್ತು ಪ್ರಸ್ತುತ ವೀಸಾ ಹೊಂದಿರುವವರಿಗೆ ಅಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಮತ್ತಷ್ಟು ಓದಿ: ಭಾರತೀಯ ಉದ್ಯೋಗಿಗಳಿಗೆ ಟ್ರಂಪ್ ಶಾಕ್; 1 ಲಕ್ಷ ಡಾಲರ್ ಪಾವತಿಸದಿದ್ದರೆ ನಾಳೆಯಿಂದ ಅಮೆರಿಕಕ್ಕೆ ಪ್ರವೇಶವಿಲ್ಲ

ಇದು ವಾರ್ಷಿಕ ಶುಲ್ಕವಲ್ಲ ಒಮ್ಮೆ ಪಾವತಿಸುವಂಥಾ ಶುಲ್ಕ, ಹಾಗೆಯೇ ಈಗಾಗಲೇ ವೀಸಾ ಪಡೆದು ಬೇರೆ ದೇಶಕ್ಕೆ ಹೋಗಿರುವವರಿಗೆ ಇನ್ಯಾವತ್ತೋ ಬಂದರೆ ಅವರಿಗೆ ಮತ್ತೆ ಶುಲ್ಕ ವಿಧಿಸುವುದಿಲ್ಲ. ಅವರು ಯಾವಾಗ ಬೇಕಾದರೂ ದೇಶಬಿಟ್ಟು ಹೋಗಬಹುದು, ದೇಶಕ್ಕೆ ಮರಳಬಹುದು ಎಂದು ಟ್ರಂಪ್ ಹೇಳಿದ್ದಾರೆ.

ಟ್ರಂಪ್‌ ಅವರ ಈ ನಡೆಯು, ಉದ್ಯೋಗ ವೀಸಾ ಪಡೆದು ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯರು, ಅದರಲ್ಲೂ ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದುಡಿಯುತ್ತಿರುವವರ ಮೇಲೆ ಭಾರಿ ಪರಿಣಾಮ ಬೀರಲಿದೆ. ನೂತನ ವೀಸಾ ಶುಲ್ಕವು ಭಾನುವಾರ ಇಂದಿನಿಂದ ಜಾರಿಗೆ ಬರುತ್ತದೆ. ಇದು ಒಂದು ವರ್ಷದ ನಂತರ ಮುಕ್ತಾಯಗೊಳ್ಳಲಿದೆ. ಆದರೆ ಸರ್ಕಾರವು ಅದನ್ನು ಮುಂದುವರಿಸಲು ನಿರ್ಧರಿಸಿದರೆ ಅದನ್ನು ವಿಸ್ತರಿಸಬಹುದು.

ಪೋಸ್ಟ್​

ಟೆಕ್ಸಾಸ್‌ನ ಎಲ್ ಪಾಸೊದಲ್ಲಿ ನೆಲೆಸಿರುವ ಡಿಕಿನ್ಸನ್ ರೈಟ್ ಅವರ ವಲಸೆ ವಕೀಲರಾದ ಕ್ಯಾಥ್ಲೀನ್ ಕ್ಯಾಂಪ್‌ಬೆಲ್ ವಾಕರ್, ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್ ಮಾಡುವ ಮೂಲಕ, ಶ್ವೇತಭವನದ ಈ ಕ್ರಮವು ಒಂದು ದಿನದ ಸೂಚನೆಯೊಂದಿಗೆ ಅಸ್ತಿತ್ವದಲ್ಲಿರುವ H-1B ಪ್ರಕ್ರಿಯೆಯಲ್ಲಿ ಸಂಪೂರ್ಣ ಅವ್ಯವಸ್ಥೆಯನ್ನು ಉಂಟುಮಾಡುತ್ತದೆ ಎಂದಿದ್ದಾರೆ. ಶುಲ್ಕವು ಕಂಪನಿಗಳಿಗೆ ವಾರ್ಷಿಕ ವೆಚ್ಚವಾಗಿರುತ್ತದೆ ಎಂದು ಲುಟ್ನಿಕ್ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ಟ್ರಂಪ್ ಶುಲ್ಕವನ್ನು ಘೋಷಿಸಿದ ನಂತರ, ಮೈಕ್ರೋಸಾಫ್ಟ್, ಜೆಪಿ ಮಾರ್ಗನ್ ಮತ್ತು ಅಮೆಜಾನ್ ಕಂಪನಿಗಳು ಎಚ್1ಬಿ ವೀಸಾಗಳನ್ನು ಹೊಂದಿರುವ ತಮ್ಮ ಉದ್ಯೋಗಿಗಳಿಗೆ ಅಮೆರಿಕವನ್ನು ತೊರೆಯದಂತೆ ಸೂಚಿಸಿವೆ. ಇದಲ್ಲದೆ ಡೊನಾಲ್ಡ್ ಟ್ರಂಪ್ ಆದೇಶ ಜಾರಿಗೆ ಬರುವ ಸೆಪ್ಟೆಂಬರ್ 21 ರ ಬೆಳಿಗ್ಗೆ 12 ಗಂಟೆಯೊಳಗೆ ಅಮೆರಿಕಕ್ಕೆ ಮರಳುವಂತೆ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಹೇಳಿದೆ ಎಂದು ಮಾಹಿತಿ ಸಿಕ್ಕಿದೆ. 2016 ರ ಬಳಿಕ ಮೊದಲ ಬಾರಿಗೆ 2024ರ ಫೆಬ್ರವರಿ 1 ರಂದು ವಲಸಿಗರಲ್ಲದವರಿಗೆ ನೀಡುವ ಎಲ್​-1 ಹಾಗು ಇಬಿ-5 ವಿಸಾಗಳ ಶುಲ್ಕಗಳ ಮೇಲೆ ಅಮೆರಿಕ ಶುಲ್ಕವನ್ನು ಏರಿಸಿತ್ತು.

ಆದರೆ ಶ್ವೇತಭವನದ ಅಧಿಕಾರಿಯೊಬ್ಬರು ಮಾತನಾಡುತ್ತಾ ಇದು ಒಂದು ಬಾರಿ ಶುಲ್ಕ ಎಂದು ಹೇಳಿದರು. ವಲಸೆ ತಡೆಯುವ ಉದ್ದೇಶದಿಂದ ಅಮೆರಿಕದಲ್ಲಿ ವಾಸ ಹಾಗೂ ಕೆಲಸ ಮಾಡಲು ಬರುವ ಭಾರತ ಹಾಗೂ ವಿದೇಶಿ ಪ್ರಜೆಗಳಿಗೆ ಎಚ್​1 ಬಿ ವೀಸಾಕ್ಕೆ ಒಂದು ಲಕ್ಷ ಡಾಲರ್ ಶುಲ್ಕ ವಿಧಿಸಲು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಒಪ್ಪಿಗೆ ನೀಡಿದ್ದಾರೆ.

ಎಚ್​1 ಬಿ ವೀಸಾದ ದುರುಪಯೋಗವು ರಾಷ್ಟ್ರೀಯ ಭದ್ರತೆಗೆ ಸವಾಲಾಗಿದೆ. ಈ ಹಿನ್ನಲೆ 1 ಲಕ್ಷ ಡಾಲರ್ ಶುಲ್ಕ ಪಾವತಿಸದ ಹೊರತಾಗಿ ವೀಸಾ ನೀಡಲು ಅನುಮತಿ ನೀಡುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.ಅಮೆರಿಕಾದ ಕಂಪನಿಗಳು ವಿದೇಶಿ ನೌಕರರನ್ನು ಮುಖ್ಯವಾಗಿ ಟೆಕ್ನಿಕಲ್ ಕ್ಷೇತ್ರದಲ್ಲಿ ಭಾರತ ಹಾಗು ಚೀನಾದ ಸಾವಿರಾರು ನೌಕರರನ್ನು ನೇಮಕ ಮಾಡಿಕೊಳ್ಳುತ್ತಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ