Hajj Pilgrimage: ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಜೂನ್ 14ರಿಂದ ಆರಂಭ
ಹಜ್ ಯಾತ್ರೆಯು ಜೂನ್ 14ರಿಂದ ಆರಂಭವಾಗಲಿದೆ ಎಂದು ಸೌದಿ ಅರೇಬಿಯಾ ಹೇಳಿದೆ. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ಭೇಟಿ ನೀಡುತ್ತಾರೆ.
ಮುಸ್ಲಿಮರ ಪವಿತ್ರ ಹಜ್ ಯಾತ್ರೆ(Hajj Pilgrimage) ಇದೇ ಜೂನ್ 14 ರಿಂದ ಪ್ರಾರಂಭವಾಗಲಿದೆ ಎಂದು ಸೌದಿ ಅರೇಬಿಯಾ ಘೋಷಣೆ ಮಾಡಿದೆ. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ಭೇಟಿ ನೀಡುತ್ತಾರೆ. ಕೆಂದರೆ ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ.
ಜೂನ್ 14 ರಂದು ಹಜ್ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಕ್ರಮವಾಗಿ ಜೂನ್ 15 ಮತ್ತು ಜೂನ್ 16 ರಂದು ಅರಾಫತ್ ದಿನ ಮತ್ತು ಈದ್ ಅಲ್ ಅಧಾ ಆಚರಣೆಗಳು ನಡೆಯಲಿವೆ.
ಯಾತ್ರಾರ್ಥಿಗಳಿಗೆ ಇದು ಅಧ್ಯಾತ್ಮಿಕ ಅನುಭವವಾಗಿದ್ದು, ಇಲ್ಲಿಗೆ ಭೇಟಿ ನೀಡಿದರೆ ಪಾಪಗಳು ಕಳೆದು ಹೋಗಲಿವೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ.
ಮತ್ತಷ್ಟು ಓದಿ: Hajj 2022: ಮುಸ್ಲಿಮರು ಪವಿತ್ರ ಹಜ್ ಯಾತ್ರೆ ಕೈಗೊಳ್ಳುವುದೇಕೆ? ಇದರ ಹಿಂದಿರುವ ಉದ್ದೇಶವೇನು?
1920 ರ ದಶಕದಲ್ಲಿ ಮೆಕ್ಕಾವನ್ನು ಸೌದಿ ರಾಜಮನೆತನ ತಮ್ಮ ವಶಕ್ಕೆ ತೆಗೆದುಕೊಂಡಿತು. ಆ ಬಳಿಕ ತೀರ್ಥಯಾತ್ರೆ ಆಯೋಜಿಸುವುದು ಹೆಮ್ಮೆ ಎಂದು ಅದು ಪರಿಗಣಿಸಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ.
ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಹಜ್ ಯಾತ್ರೆ ಮಹತ್ವ ಮತ್ತು ಇತಿಹಾಸ
ಹಜ್ ಯಾತ್ರೆಯು ಪ್ರಪಂಚದಾದ್ಯಂತದ ಮುಸ್ಲಿಮರನ್ನು ಸೌದಿ ಅರೇಬಿಯಾದ ಮೆಕ್ಕಾಕ್ಕೆ ಭೇಟಿ ನೀಡುವಂತೆ ಮಾಡುತ್ತದೆ. ಮೆಕ್ಕಾಕ್ಕೆ ಭೇಟಿ ನೀಡುವ ಮೂಲಕ ಮುಸ್ಲಿಮರು ಪ್ರವಾದಿ ಮುಹಮ್ಮದ್ ಅವರ ಹೆಜ್ಜೆಗಳನ್ನು ಕಾಣಲು ಬಯಸುತ್ತಾರೆ. ಇಬ್ರಾಹಿಂ ಮತ್ತು ಇಸ್ಮಾಯಿಲ್ ಅಥವಾ ಅಬ್ರಹಾಂ ಮತ್ತು ಇಸ್ಮಾಯಿಲ್ ಅವರ ಪ್ರಯಾಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ.
ಅಂದಹಾಗೆ ಈ ಪ್ರದೇಶ ಕ್ರಿಶ್ಚಿಯನ್ ಮತ್ತು ಇಸ್ಲಾಂ ಎರಡಕ್ಕೂ ಪವಿತ್ರವಾದ ಸ್ಥಳವಾಗಿದೆ.ಕೆಲವು ಯಾತ್ರಿಕರು ತಮ್ಮ ಇಡೀ ಜೀವನವನ್ನು ಯಾತ್ರೆಗಾಗಿಯೇ ಮೀಸಲಿಟ್ಟಿರುತ್ತಾರೆ. ಇನ್ನು ಹಲವರು ಹಜ್ ಯಾತ್ರೆಗೆ ಪರವಾನಗಿ ಪಡೆಯಲೇಂದೆ ವರ್ಷಗಟ್ಟಲೆ ಕಾಯುತ್ತಾರೆ. ಸೌದಿ ಅಧಿಕಾರಿಗಳು ಕೋಟಾ ವ್ಯವಸ್ಥೆಯ ಅಡಿ ಆಯಾ ದೇಶಗಳಿಗೆ ಕೋಟಾ ಹಂಚಿಕೆ ಮಾಡುತ್ತಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ