ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ಇಸ್ರೇಲ್ ಘೋಷಣೆ

Yahya Sinwar: ಗಾಜಾದಲ್ಲಿ ನಡೆದ ಐಡಿಎಫ್ ಕಾರ್ಯಾಚರಣೆ ವೇಳೆ ಮೃತರಾದ ಮೂವರ ಪೈಕಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೂಡ ಸೇರಿದ್ದಾರೆ ಎಂಬುದು ಖಚಿತವಾಗಿದೆ. 1,200ಕ್ಕೂ ಹೆಚ್ಚು ಇಸ್ರೇಲಿಗಳನ್ನು ಕೊಂದ ಹಮಾಸ್ ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಕರೆಯಲ್ಪಡುವ ಯಾಹ್ಯಾ ಸಿನ್ವಾರ್​​ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಘೋಷಿಸಿದೆ.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ಇಸ್ರೇಲ್ ಘೋಷಣೆ
ಯಾಹ್ಯಾ ಸಿನ್ವಾರ್
Follow us
ಸುಷ್ಮಾ ಚಕ್ರೆ
|

Updated on:Oct 17, 2024 | 11:04 PM

ಜೆರುಸಲೆಂ: ಇಸ್ರೇಲ್ ಇರಾನ್ ಮತ್ತು ಗಾಜಾ ಪಟ್ಟಿಯ ಮೇಲೆ ಯುದ್ಧ ಸಾರಿದ್ದು, ಹಮಾಸ್ ನಾಯಕರ ಸರಣಿ ಹತ್ಯೆ ನಡೆಸುತ್ತಿದೆ. ಇಂದು ನಡೆದ ಭಾರೀ ಕಾರ್ಯಾಚರಣೆಯಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್​​ ಅವರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಐಡಿಎಫ್ ಘೋಷಣೆ ಮಾಡಿದ್ದು, ಸಾಮೂಹಿಕ ಹಂತಹ ಯಾಹ್ಯಾನನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದೆ. ಯಾಹ್ಯಾ ಸಿನ್ವಾರ್ 2023ರಲ್ಲಿ ಇಸ್ರೇಲ್ ಮೇಲೆ ನಡೆದ ಭಯಾನಕ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಸ್ರೇಲ್ ಸೇಡು ತೀರಿಸಿಕೊಂಡಿದೆ.

ಅಕ್ಟೋಬರ್ 7ರ ಹತ್ಯಾಕಾಂಡ ಮತ್ತು ದುಷ್ಕೃತ್ಯಗಳಿಗೆ ಕಾರಣವಾದ ಸಾಮೂಹಿಕ ಹಂತಕ ಯಾಹ್ಯಾ ಸಿನ್ವಾರ್ ಅವರನ್ನು ಐಡಿಎಫ್ (ಇಸ್ರೇಲಿ ಮಿಲಿಟರಿ) ಸೈನಿಕರು ಹತ್ಯೆ ಮಾಡಿದ್ದಾರೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೇಯರ್ ಸೇರಿದಂತೆ 5 ಮಂದಿ ಸಾವು

“ಒಂದು ವರ್ಷದ ಅನ್ವೇಷಣೆಯ ನಂತರ ನಮ್ಮ ಹಮಾಸ್ ಭಯೋತ್ಪಾದಕ ಸಂಘಟನೆಯ ನಾಯಕ ಯಾಹ್ಯಾ ಸಿನ್ವಾರ್‌ನನ್ನು ದಕ್ಷಿಣ ಗಾಜಾ ಪಟ್ಟಿಯ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿದ್ದಾರೆ” ಎಂದು ಇಸ್ರೇಲ್ ಮಿಲಿಟರಿ ದೃಢಪಡಿಸಿತು. ಆದರೆ, ಅವರ ಸಾವನ್ನು ಹಮಾಸ್ ಇನ್ನೂ ದೃಢಪಡಿಸಿಲ್ಲ.

ಅಕ್ಟೋಬರ್ 7ರ ದಾಳಿಯ ಮಾಸ್ಟರ್ ಮೈಂಡ್ ಸಿನ್ವಾರ್ ಎಂದು ಇಸ್ರೇಲ್ ಆರೋಪಿಸಿದೆ. ಇದು ಇಸ್ರೇಲಿ ಇತಿಹಾಸದಲ್ಲಿ ಅತ್ಯಂತ ಮಾರಕವಾದ ದಾಳಿಯಾಗಿತ್ತು. ಇತ್ತೀಚಿನ ತಿಂಗಳುಗಳಲ್ಲಿ ಇತರ ಇರಾನ್ ಬೆಂಬಲಿತ ಆಪರೇಟಿವ್ ಕಮಾಂಡರ್‌ಗಳು ಸಹ ಕೊಲ್ಲಲ್ಪಟ್ಟಿದ್ದಾರೆ. ಹಮಾಸ್‌ನ ಸೇನಾ ಮುಖ್ಯಸ್ಥ ಮೊಹಮ್ಮದ್ ಡೀಫ್‌ನನ್ನು ಕೊಂದಿರುವುದಾಗಿ ಇಸ್ರೇಲ್ ಈ ವರ್ಷದ ಆರಂಭದಲ್ಲಿ ಹೇಳಿತ್ತು. ಆದರೂ ಪ್ಯಾಲೆಸ್ತೀನ್ ಗುಂಪು ಅದನ್ನು ದೃಢಪಡಿಸಿರಲಿಲ್ಲ.

ಇದನ್ನೂ ಓದಿ: ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ

ಹಾಗೇ, ಇತ್ತೀಚೆಗೆ ಲೆಬನಾನ್‌ ಮೇಲೆ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಹತ್ಯೆ ಮಾಡಿತ್ತು. ಇದೀಗ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್​ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Thu, 17 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ