AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಹ್ಯಾ ಸಿನ್ವಾರ್ ಹತ್ಯೆ ನಿಜ; ಹಮಾಸ್ ಸ್ಪಷ್ಟನೆ

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರ ಹತ್ಯೆಯು ಗಾಜಾದಲ್ಲಿ "ಯುದ್ಧದ ಅಂತ್ಯದ ಆರಂಭ" ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. 2023ರ ಅಕ್ಟೋಬರ್ 7ರಿಂದ ಹಮಾಸ್ ವಶದಲ್ಲಿರುವ ಉಳಿದ 97 ಒತ್ತೆಯಾಳುಗಳನ್ನು ಹಿಂದಿರುಗಿಸುವವರೆಗೆ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯಾಹ್ಯಾ ಸಿನ್ವಾರ್ ಹತ್ಯೆ ನಿಜ; ಹಮಾಸ್ ಸ್ಪಷ್ಟನೆ
ಯಾಹ್ಯಾ ಸಿನ್ವಾರ್
ಸುಷ್ಮಾ ಚಕ್ರೆ
|

Updated on: Oct 18, 2024 | 8:36 PM

Share

ನವದೆಹಲಿ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಇಸ್ರೇಲ್ ಮಿಲಿಟರಿ ಪಡೆ ಹತ್ಯೆ ಮಾಡಿದ್ದು ಸುಳ್ಳು ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಹಮಾಸ್ ಇದೀಗ ತಮ್ಮ ನಾಯಕನ ಹತ್ಯೆಯ ಸುದ್ದಿಯನ್ನು ಒಪ್ಪಿಕೊಂಡಿದೆ. ಅಲ್ಲದೆ, ಗಾಜಾ ಪಟ್ಟಿಯ ಯುದ್ಧ ಅಂತ್ಯವಾಗುವವರೆಗೂ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ.

“ದಕ್ಷಿಣ ಗಾಜಾ ಪಟ್ಟಿಯ ಕಾರ್ಯಾಚರಣೆಯಲ್ಲಿ ಹಮಾಸ್ ಭಯೋತ್ಪಾದಕ ಸಂಘಟನೆಯ ನಾಯಕ ಯಾಹ್ಯಾ ಸಿನ್ವಾರ್‌ನನ್ನು ಹತ್ಯೆ ಮಾಡಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿತ್ತು. ಆದರೆ, ಅವರ ಸಾವನ್ನು ಹಮಾಸ್ ದೃಢಪಡಿಸಿರಲಿಲ್ಲ. ಇದೀಗ ಈ ಬಗ್ಗೆ ಹಮಾಸ್ ಸ್ಪಷ್ಟನೆ ನೀಡಿದ್ದು, ತಮ್ಮ ನಾಯಕನ ಸಾವನ್ನು ಖಚಿತಪಡಿಸಿದೆ. ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲಿನ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸಿನ್ವಾರ್ ಎಂದು ಹೇಳಲಾಗಿತ್ತು. ಇದಾದ ನಂತರ ಇಸ್ರೇಲ್ ಮತ್ತು ಗಾಜಾ ನಡುವಿನ ಸಂಘರ್ಷ ಉಲ್ಬಣಗೊಂಡಿತು.

ಇದನ್ನೂ ಓದಿ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ಇಸ್ರೇಲ್ ಘೋಷಣೆ

ಗಾಜಾದಲ್ಲಿ ಇಸ್ರೇಲಿ ವೈಮಾನಿಕ ದಾಳಿಯ ನಂತರ ಹಮಾಸ್ ತನ್ನ ನಾಯಕ ಯಾಹ್ಯಾ ಸಿನ್ವಾರ್ ಅವರ ಸಾವನ್ನು ದೃಢಪಡಿಸಿದೆ. ಸಿನ್ವಾರ್‌ನ ಸಾವು ಹಮಾಸ್ ಮತ್ತು ಹೆಜ್ಬೊಲ್ಲಾದ ಉನ್ನತ ಕಮಾಂಡರ್‌ಗಳ ವಿರುದ್ಧ ಇಸ್ರೇಲಿ ಆಕ್ರಮಣಗಳ ಸರಣಿಯಲ್ಲಿ ಹೊಸ ಬೆಳವಣಿಗೆಯಾಗಿದೆ. ಇದು ಉಗ್ರಗಾಮಿ ಸಂಘಟನೆಗಳಿಗೆ ದೊಡ್ಡ ಹಾನಿಯನ್ನುಂಟುಮಾಡಿದೆ.

ಹಮಾಸ್ ತನ್ನ ಪ್ರಕಟಣೆಯಲ್ಲಿ ಯಾಹ್ಯಾ ಸಿನ್ವಾರ್ ಯುದ್ಧಭೂಮಿಯಲ್ಲಿ ಇಸ್ರೇಲಿ ಪಡೆಗಳನ್ನು ಎದುರಿಸಿದ “ವೀರ ಹುತಾತ್ಮ” ಎಂದು ಹಮಾಸ್ ಶ್ಲಾಘಿಸಿದೆ. ಕದನ ವಿರಾಮ ಮತ್ತು ಗಾಜಾದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವವರೆಗೆ ಸಂಘರ್ಷದ ಸಮಯದಲ್ಲಿ ಇಸ್ರೇಲ್‌ನಿಂದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ ಎಂದು ಒತ್ತಿಹೇಳಿದೆ.

ಇದನ್ನೂ ಓದಿ: ಲೆಬನಾನ್‌: ಹಿಬ್ಜುಲ್ಲಾ ವಿರುದ್ಧದ ಯುದ್ಧದಲ್ಲಿ 8 ಇಸ್ರೇಲಿ ಸೈನಿಕರು ಸಾವು

ನಿನ್ನೆಯಷ್ಟೇ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಸಿನ್ವಾರ್ ಹತ್ಯೆಯನ್ನು ದೃಢಪಡಿಸಿದರು ಮತ್ತು ಹಮಾಸ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯು ಮುಗಿದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಇಸ್ರೇಲಿ ಅಧಿಕಾರಿಗಳು ಮತ್ತು ಗಾಜಾ ನಿವಾಸಿಗಳ ನಡುವೆ ಸಂಘರ್ಷ ಉಲ್ಬಣಗೊಳ್ಳುವ ಸಾಧ್ಯತೆ ಹುಟ್ಟುಹಾಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ