Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ; ಹಮಾಸ್​ನಿಂದ ಗಾಜಾದಲ್ಲಿ ಬಂಧಿತರಾಗಿದ್ದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರ ಬಿಡುಗಡೆ

ಕದನ ವಿರಾಮದ ಅಡಿಯಲ್ಲಿ ಪ್ರಮುಖ ಕೈದಿಗಳ ವಿನಿಮಯದಲ್ಲಿ 4 ಇಸ್ರೇಲಿ ಮಹಿಳಾ ಸೈನಿಕರನ್ನು ಹಮಾಸ್ ಬಿಡುಗಡೆ ಮಾಡಿದೆ. ಇದು ಇಸ್ರೇಲ್ ಬಂಧನದಲ್ಲಿರುವ ಪ್ಯಾಲೆಸ್ತೀನಿಯನ್ನರ ಬಿಡುಗಡೆಗೆ ದಾರಿ ಮಾಡಿಕೊಟ್ಟಿದೆ. ಪ್ರಸ್ತುತ ಒತ್ತೆಯಾಳುಗಳ ಬಿಡುಗಡೆಯು ಗಾಜಾ ಕದನ ವಿರಾಮ ಒಪ್ಪಂದದಲ್ಲಿ ಒಪ್ಪಿಕೊಂಡಿರುವ ಎರಡನೇ ಕೈದಿಗಳ ವಿನಿಮಯದ ಭಾಗವಾಗಿದೆ. ಈ ಒಪ್ಪಂದವು ಇಸ್ರೇಲಿನ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರ ಬಿಡುಗಡೆಗೆ ಅನುಕೂಲವಾಗುವಂತೆ ಪ್ರಯತ್ನಿಸುತ್ತದೆ.

ಕದನ ವಿರಾಮ; ಹಮಾಸ್​ನಿಂದ ಗಾಜಾದಲ್ಲಿ ಬಂಧಿತರಾಗಿದ್ದ ನಾಲ್ವರು ಇಸ್ರೇಲಿ ಮಹಿಳಾ ಸೈನಿಕರ ಬಿಡುಗಡೆ
Four Israeli Soldiers Held In Gaza
Follow us
ಸುಷ್ಮಾ ಚಕ್ರೆ
|

Updated on: Jan 25, 2025 | 4:05 PM

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್‌ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು ಬಹಿರಂಗಪಡಿಸಿದ ನಂತರ ಹಮಾಸ್ ಇಂದು ಕದನ ವಿರಾಮ ಒಪ್ಪಂದದ ಭಾಗವಾಗಿ ಗಾಜಾದಲ್ಲಿ ಬಂಧಿಸಲ್ಪಟ್ಟಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ.

ಇಸ್ರೇಲ್ ಜೈಲಿನಲ್ಲಿ ಬಂಧಿಸಲ್ಪಟ್ಟಿರುವ ಡಜನ್​ಗಟ್ಟಲೆ ಪ್ಯಾಲೆಸ್ತೀನಿಯನ್ನರ ಬಿಡುಗಡೆಗೆ ಬದಲಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ನಿರೀಕ್ಷಿತ ವಿನಿಮಯಕ್ಕೆ ಮುಂಚಿತವಾಗಿ ಟೆಲ್ ಅವಿವ್ ಮತ್ತು ಗಾಜಾ ನಗರದಲ್ಲಿ ಜನರು ಮೊದಲೇ ಸೇರಲು ಪ್ರಾರಂಭಿಸಿದ್ದರು. ಅವರು ತಮ್ಮವರನ್ನು ನೋಡಲು ಕಾತುರರಾಗಿ, ಭಾವುಕರಾಗಿದ್ದರು. ಕಳೆದ ವಾರಾಂತ್ಯದಲ್ಲಿ ಗಾಜಾ ಪಟ್ಟಿಯಲ್ಲಿ ಕದನ ವಿರಾಮ ಪ್ರಾರಂಭವಾಗಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಕಂಪೆನಿಯಲ್ಲಿ ಉದ್ಯೋಗ ನೀಡುವುದಾಗಿ ವಂಚನೆ, ಬ್ಲ್ಯಾಕ್​ಮೇಲ್

ಇಸ್ರೇಲ್ ಮತ್ತು ಹಮಾಸ್ ನಡುವಿನ ಒಪ್ಪಂದವು ಇಸ್ರೇಲ್ ಮತ್ತು ಉಗ್ರಗಾಮಿ ಗುಂಪಿನ ನಡುವಿನ ಅತ್ಯಂತ ಮಾರಕ ಮತ್ತು ಅತ್ಯಂತ ವಿನಾಶಕಾರಿ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಗಾಜಾದಲ್ಲಿ 15 ತಿಂಗಳ ಕಾಲ ನಡೆದ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಕದನ ವಿರಾಮದ ಪ್ರಮುಖ ಹೆಜ್ಜೆಯಾಗಿ ಸುಮಾರು 200 ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಹಮಾಸ್ ಇಂದು ನಾಲ್ಕು ಇಸ್ರೇಲಿ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದೆ.

ಸೈನಿಕರಾದ ಕರೀನಾ ಅರಿಯೆವ್, ಡೇನಿಯಲಾ ಗಿಲ್ಬೋವಾ, ನಾಮಾ ಲೆವಿ ಮತ್ತು ಲಿರಿ ಅಲ್ಬಾಗ್ ಅವರನ್ನು ಗಾಜಾದಲ್ಲಿರುವ ರೆಡ್‌ಕ್ರಾಸ್‌ಗೆ ಹಸ್ತಾಂತರಿಸಲಾಯಿತು. ಅಕ್ಟೋಬರ್ 7, 2023ರಂದು ಹಮಾಸ್ ಹೋರಾಟಗಾರರು ತಮ್ಮ ನೆಲೆಯನ್ನು ಆಕ್ರಮಿಸಿಕೊಂಡಾಗ ಅವರನ್ನು ಸೆರೆಹಿಡಿಯಲಾಗಿತ್ತು. ಸೈನಿಕರಲ್ಲಿ ಒಬ್ಬರನ್ನು ಇಸ್ಲಾಮಿಕ್ ಜಿಹಾದ್ ಬಣ ಬಂಧಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ; ಮಕ್ಕಳು ಸೇರಿ 18 ಜನ ಸಾವು

ಜನವರಿ 19ರಂದು ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಪ್ರಾರಂಭವಾದ ನಂತರ ಇದು ಎರಡನೇ ಕೈದಿಗಳ ವಿನಿಮಯವಾಗಿದೆ. ಇದಕ್ಕೂ ಮೊದಲು 90 ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಹಮಾಸ್ ಮೂವರು ಇಸ್ರೇಲಿ ನಾಗರಿಕರನ್ನು ಬಿಡುಗಡೆ ಮಾಡಿತ್ತು.

ಅಕ್ಟೋಬರ್ 7ರಂದು ಹಮಾಸ್ ದಾಳಿಯ ನಂತರ ಸಂಘರ್ಷ ತೀವ್ರಗೊಂಡಿತು. ಇದರಿಂದ 1,200 ಜನರು ಸಾವನ್ನಪ್ಪಿ, 250ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಗಾಜಾಗೆ ಕರೆದೊಯ್ಯಲಾಗಿತ್ತು. ಅಂದಿನಿಂದ ಇಸ್ರೇಲಿ ವೈಮಾನಿಕ ದಾಳಿಗಳು 47,000ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಕೊಂದಿವೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ