AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತನಿಂದ ಇನ್ನು ಯಾರಿಗೂ ಭಯವಿಲ್ಲ; ಐಸಿಸ್ ನಾಯಕ ಅಬು ಬಿಲಾಲ್ ಹತ್ಯೆಯಾಗಿದೆ ಎಂದ ಟ್ರಂಪ್

ಐಸಿಸ್‌ನ ಉನ್ನತ ನಾಯಕ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕನ್ ಮತ್ತು ನೈಜೀರಿಯನ್ ಪಡೆಗಳು ಹಿರಿಯ ಇಸ್ಲಾಮಿಕ್ ಸ್ಟೇಟ್ ಗುಂಪಿನ ನಾಯಕನನ್ನು ಕೊಂದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನಿಮ್ಮ ಸಹಕರಿಸಿದ್ದಕ್ಕೆ ನೈಜೀರಿಯಾ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೂಡ ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಆತನಿಂದ ಇನ್ನು ಯಾರಿಗೂ ಭಯವಿಲ್ಲ; ಐಸಿಸ್ ನಾಯಕ ಅಬು ಬಿಲಾಲ್ ಹತ್ಯೆಯಾಗಿದೆ ಎಂದ ಟ್ರಂಪ್
Donald Trump Image Credit source: AP
ಸುಷ್ಮಾ ಚಕ್ರೆ
|

Updated on: May 16, 2026 | 12:08 PM

Share

ವಾಷಿಂಗ್ಟನ್, ಮೇ 16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಮೆರಿಕನ್ ಪಡೆಗಳು ಮತ್ತು ನೈಜೀರಿಯಾದ ಸಶಸ್ತ್ರ ಪಡೆಗಳು ಸೇರಿ ಐಸಿಸ್‌ನ ಎರಡನೇ ಕಮಾಂಡ್ ಆಗಿರುವ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆ ಮಾಡಿವೆ ಎಂದು ಘೋಷಿಸಿದ್ದಾರೆ. ಅಬು ಬಿಲಾಲ್ ಆಫ್ರಿಕಾದಲ್ಲಿ ಅಡಗಿಕೊಳ್ಳಬಹುದೆಂದು ನಾನು ಭಾವಿಸಿದ್ದೆ. ಆದರೆ ಆತ ಏನು ಮಾಡುತ್ತಿದ್ದಾರೆಂದು ಪೂರ್ತಿ ಮಾಹಿತಿ ನೀಡುವ ಮೂಲಗಳು ನಮ್ಮಲ್ಲಿವೆ ಎಂದು ಅವರಿಗೆ ತಿಳಿದಿರಲಿಲ್ಲ. ಇನ್ನು ಯಾರನ್ನೂ ಆ ಉಗ್ರ ಭಯಪಡಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ನಿನ್ನೆ ರಾತ್ರಿ (ಅಮೆರಿಕದ ಕಾಲಮಾನ ಪ್ರಕಾರ) ಈ ಬಗ್ಗೆ ಪೋಸ್ಟ್ ಮಾಡಿರುವ ಟ್ರಂಪ್, “ಇಂದು ರಾತ್ರಿ ನನ್ನ ಸೂಚನೆಯ ಮೇರೆಗೆ ಧೈರ್ಯಶಾಲಿಯಾದ ಅಮೇರಿಕನ್ ಪಡೆಗಳು ಮತ್ತು ನೈಜೀರಿಯಾದ ಸಶಸ್ತ್ರ ಪಡೆಗಳು ಯುದ್ಧಭೂಮಿಯಿಂದ ವಿಶ್ವದ ಅತ್ಯಂತ ಸಕ್ರಿಯ ಭಯೋತ್ಪಾದಕನನ್ನು ಹತ್ಯೆ ಮಾಡಲು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದವು” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್; ವಿಮಾನ ನಿಲ್ದಾಣದಲ್ಲಿ ಯುಎಸ್ ಅಧ್ಯಕ್ಷರಿಗೆ ಭರ್ಜರಿ ಸ್ವಾಗತ

ಪಶ್ಚಿಮ ಆಫ್ರಿಕಾದ ಕೆಲವು ಭಾಗಗಳಲ್ಲಿ ಪ್ರಮುಖ ಜಾಲವನ್ನು ಹೊಂದಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನೊಂದಿಗಿನ ಸಂಬಂಧಕ್ಕಾಗಿ ಅಲ್-ಮಿನುಕಿಯನ್ನು 2023ರಲ್ಲಿ ಯುಎಸ್ ನಿರ್ಬಂಧಗಳ ಅಡಿಯಲ್ಲಿ ಇರಿಸಲಾಗಿತ್ತು. “ಅವರು ಇನ್ನು ಮುಂದೆ ಆಫ್ರಿಕಾದ ಜನರನ್ನು ಭಯಭೀತಗೊಳಿಸುವುದಿಲ್ಲ ಅಥವಾ ಅಮೆರಿಕನ್ನರನ್ನು ಗುರಿಯಾಗಿಸಲು ಕಾರ್ಯಾಚರಣೆಗಳನ್ನು ಪ್ಲಾನ್ ಮಾಡಲು ಸಹಾಯ ಮಾಡುವುದಿಲ್ಲ. ಆತನ ಹತ್ಯೆಯಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

2023ರಲ್ಲಿ ಅಮೆರಿಕವು ಅಬು-ಬಿಲಾಲ್ ಅಲ್-ಮಿನುಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಿತು. ಜೂನ್ 2023ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವಧಿಯಲ್ಲಿ ಅಮೆರಿಕ ಅಬು-ಬಿಲಾಲ್ ಅಲ್-ಮಿನುಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು. ಅಬು ಬಕರ್ ಮುಹಮ್ಮದ್ ಅಲ್-ಮೈನುಕಿ ಎಂದೂ ಕರೆಯಲ್ಪಡುವ ಅಬು-ಬಿಲಾಲ್ ಅಲ್-ಮಿನುಕಿ ಆಫ್ರಿಕಾದ ಸಹೇಲ್ ಪ್ರದೇಶದಲ್ಲಿ ನೆಲೆಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ