
ವಾಷಿಂಗ್ಟನ್, ಮೇ 16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಮೆರಿಕನ್ ಪಡೆಗಳು ಮತ್ತು ನೈಜೀರಿಯಾದ ಸಶಸ್ತ್ರ ಪಡೆಗಳು ಸೇರಿ ಐಸಿಸ್‌ನ ಎರಡನೇ ಕಮಾಂಡ್ ಆಗಿರುವ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆ ಮಾಡಿವೆ ಎಂದು ಘೋಷಿಸಿದ್ದಾರೆ. ಅಬು ಬಿಲಾಲ್ ಆಫ್ರಿಕಾದಲ್ಲಿ ಅಡಗಿಕೊಳ್ಳಬಹುದೆಂದು ನಾನು ಭಾವಿಸಿದ್ದೆ. ಆದರೆ ಆತ ಏನು ಮಾಡುತ್ತಿದ್ದಾರೆಂದು ಪೂರ್ತಿ ಮಾಹಿತಿ ನೀಡುವ ಮೂಲಗಳು ನಮ್ಮಲ್ಲಿವೆ ಎಂದು ಅವರಿಗೆ ತಿಳಿದಿರಲಿಲ್ಲ. ಇನ್ನು ಯಾರನ್ನೂ ಆ ಉಗ್ರ ಭಯಪಡಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
ನಿನ್ನೆ ರಾತ್ರಿ (ಅಮೆರಿಕದ ಕಾಲಮಾನ ಪ್ರಕಾರ) ಈ ಬಗ್ಗೆ ಪೋಸ್ಟ್ ಮಾಡಿರುವ ಟ್ರಂಪ್, “ಇಂದು ರಾತ್ರಿ ನನ್ನ ಸೂಚನೆಯ ಮೇರೆಗೆ ಧೈರ್ಯಶಾಲಿಯಾದ ಅಮೇರಿಕನ್ ಪಡೆಗಳು ಮತ್ತು ನೈಜೀರಿಯಾದ ಸಶಸ್ತ್ರ ಪಡೆಗಳು ಯುದ್ಧಭೂಮಿಯಿಂದ ವಿಶ್ವದ ಅತ್ಯಂತ ಸಕ್ರಿಯ ಭಯೋತ್ಪಾದಕನನ್ನು ಹತ್ಯೆ ಮಾಡಲು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದವು” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: 10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್; ವಿಮಾನ ನಿಲ್ದಾಣದಲ್ಲಿ ಯುಎಸ್ ಅಧ್ಯಕ್ಷರಿಗೆ ಭರ್ಜರಿ ಸ್ವಾಗತ
ಪಶ್ಚಿಮ ಆಫ್ರಿಕಾದ ಕೆಲವು ಭಾಗಗಳಲ್ಲಿ ಪ್ರಮುಖ ಜಾಲವನ್ನು ಹೊಂದಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನೊಂದಿಗಿನ ಸಂಬಂಧಕ್ಕಾಗಿ ಅಲ್-ಮಿನುಕಿಯನ್ನು 2023ರಲ್ಲಿ ಯುಎಸ್ ನಿರ್ಬಂಧಗಳ ಅಡಿಯಲ್ಲಿ ಇರಿಸಲಾಗಿತ್ತು. “ಅವರು ಇನ್ನು ಮುಂದೆ ಆಫ್ರಿಕಾದ ಜನರನ್ನು ಭಯಭೀತಗೊಳಿಸುವುದಿಲ್ಲ ಅಥವಾ ಅಮೆರಿಕನ್ನರನ್ನು ಗುರಿಯಾಗಿಸಲು ಕಾರ್ಯಾಚರಣೆಗಳನ್ನು ಪ್ಲಾನ್ ಮಾಡಲು ಸಹಾಯ ಮಾಡುವುದಿಲ್ಲ. ಆತನ ಹತ್ಯೆಯಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.
US President Donald Trump posts, “Tonight, at my direction, brave American forces and the Armed Forces of Nigeria flawlessly executed a meticulously planned and very complex mission to eliminate the most active terrorist in the world from the battlefield. Abu-Bilal al-Minuki,… pic.twitter.com/DKs2UqnI00
— ANI (@ANI) May 16, 2026
2023ರಲ್ಲಿ ಅಮೆರಿಕವು ಅಬು-ಬಿಲಾಲ್ ಅಲ್-ಮಿನುಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಿತು. ಜೂನ್ 2023ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವಧಿಯಲ್ಲಿ ಅಮೆರಿಕ ಅಬು-ಬಿಲಾಲ್ ಅಲ್-ಮಿನುಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು. ಅಬು ಬಕರ್ ಮುಹಮ್ಮದ್ ಅಲ್-ಮೈನುಕಿ ಎಂದೂ ಕರೆಯಲ್ಪಡುವ ಅಬು-ಬಿಲಾಲ್ ಅಲ್-ಮಿನುಕಿ ಆಫ್ರಿಕಾದ ಸಹೇಲ್ ಪ್ರದೇಶದಲ್ಲಿ ನೆಲೆಸಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ