ಪಾಕಿಸ್ತಾನದಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; 86 ಮಂದಿ ಸಾವು, 151 ಮಂದಿಗೆ ಗಾಯ

ಪಂಜಾಬ್‌ನಲ್ಲಿ ಅತಿ ಹೆಚ್ಚು ಜನರು ಸಾವನ್ನಪ್ಪಿದ್ದು, 52 ಜನರು ಸಾವಿಗೀಡಾಗಿದ್ದಾರೆ. ಏತನ್ಮಧ್ಯೆ, ಖೈಬರ್ ಪಖ್ತುಂಖ್ವಾದಲ್ಲಿ 20,ಬಲೂಚಿಸ್ತಾನದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ

ಪಾಕಿಸ್ತಾನದಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; 86 ಮಂದಿ ಸಾವು, 151 ಮಂದಿಗೆ ಗಾಯ
ಪಾಕಿಸ್ತಾನದಲ್ಲಿ ಮಳೆ
Follow us
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 1:06 PM

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಭಾರೀ ಮಳೆಯಾಗುತ್ತಿದ್ದು ಜೂನ್ 25 ರಿಂದ ಇಲ್ಲಿಯವರೆಗೆ 86 ಜನರು ಸಾವಿಗೀಡಾಗಿದ್ದು, 151 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮೂಲದ ARY ನ್ಯೂಸ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (NDMA) ಉಲ್ಲೇಖಿಸಿ ವರದಿ ಮಾಡಿದೆ.ಎಆರ್​​ವೈ ನ್ಯೂಸ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಪಾಕಿಸ್ತಾನದಾದ್ಯಂತ (Pakistan Rain) ಭಾರೀ ಮಳೆಯಿಂದಾಗಿ ಆರು ಜನರು ಸಾವಿಗೀಡಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎನ್​​​ಡಿಎಂಎ ತನ್ನ ವರದಿಯಲ್ಲಿ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿಯ ಪ್ರಕಾರ, ಇಲ್ಲಿಯವರೆಗೆ 86 ಸಾವುಗಳು ಮತ್ತು 151 ಗಾಯಗಳು ವರದಿಯಾಗಿವೆ. ಇದರಲ್ಲಿ 16 ಮಹಿಳೆಯರು ಮತ್ತು 37 ಮಕ್ಕಳು ಸೇರಿದ್ದಾರೆ.ದೇಶಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, 97 ಮನೆಗಳಿಗೆ ಹಾನಿಯಾಗಿದೆ.

ಪಂಜಾಬ್‌ನಲ್ಲಿ ಅತಿ ಹೆಚ್ಚು ಜನರು ಸಾವನ್ನಪ್ಪಿದ್ದು, 52 ಜನರು ಸಾವಿಗೀಡಾಗಿದ್ದಾರೆ. ಏತನ್ಮಧ್ಯೆ, ಖೈಬರ್ ಪಖ್ತುಂಖ್ವಾದಲ್ಲಿ 20,ಬಲೂಚಿಸ್ತಾನದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

2023 ರಲ್ಲಿ ಪಾಕಿಸ್ತಾನದಲ್ಲಿ ವಿನಾಶಕಾರಿ ಪ್ರವಾಹದ ಶೇಕಡಾ 72 ರಷ್ಟು ಸಾಧ್ಯತೆಗಳಿವೆ ಎಂದು ಎನ್​​​ಡಿಎಂಎ ಏಪ್ರಿಲ್ ನಲ್ಲಿ ಭವಿಷ್ಯ ನುಡಿದಿತ್ತು. ತಾಪಮಾನದಲ್ಲಿ ತ್ವರಿತ ಏರಿಕೆ, ಹಿಮನದಿ ಕರಗುವಿಕೆ ಮತ್ತು ಮುಂಗಾರು ಮಳೆಯ ಆರಂಭವು ಪ್ರವಾಹಕ್ಕೆ ಕಾರಣವಾಗಬಹುದು ಎಂದು ಎನ್​​​ಡಿಎಂಎ ಅಧ್ಯಕ್ಷ ಲೆಫ್ಟಿನೆಂಟ್ ಜನರಲ್ ಇನಾಮ್ ಹೈದರ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಎನ್‌ಡಿಎಂಎ ಮತ್ತು ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವಾಲಯವು 17 ಉಪಗ್ರಹಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದು, 36 ಪ್ರವಾಹ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ಇರಿಸಲಾಗಿದೆ ಎಂದು ಹೈದರ್ ಹೇಳಿದ್ದಾರೆ. ಕಳೆದ ವರ್ಷದಂತೆ ಈಗ  ಪ್ರವಾಹ ಸಂಭವಿಸಿದರೆ ಪಾಕಿಸ್ತಾನವು ದೊಡ್ಡ ಆರ್ಥಿಕ ಬಿಕ್ಕಟ್ಟಿಗೆ ಸಿಲುಕುತ್ತದೆ ಎಂದಿದ್ದಾರೆ ಅವರು.

ಪಾಕಿಸ್ತಾನದ ಪಂಜಾಬ್‌ನಾದ್ಯಂತ ಮಳೆಯಾಗಿದ್ದು ಲಾಹೋರ್‌ನ ಅಜರ್ ಟೌನ್ ಮತ್ತು ಶಾಹದಾರ ಟೌನ್ ನಲ್ಲಿ ಎರಡು ಚಾವಣಿ ಕುಸಿದು ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮೂಲದ ಡಾನ್ ಶನಿವಾರ ವರದಿ ಮಾಡಿದೆ. ರಕ್ಷಣಾ ಸಂಸ್ಥೆಯ ಪ್ರಕಾರ ಯಾವುದೇ ಹೆಚ್ಚಿನ ನಾಶ ನಷ್ಟ ಬಗ್ಗೆ ವರದಿಯಾಗಿಲ್ಲ ಎಂದು ಡಾನ್ ವರದಿ ಮಾಡಿದೆ.

ಇದನ್ನೂ ಓದಿ: Helicopter Missing: ನೇಪಾಳದ ಮೌಂಟ್​ ಎವರೆಸ್ಟ್​ ಬಳಿ 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್​ ನಾಪತ್ತೆ

ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಎಂದು ವರದಿ ತಿಳಿಸಿದೆ. ಪಂಜಾಬ್‌ನ ಪರಿಹಾರ ಆಯುಕ್ತ ನಬೀಲ್ ಜಾವೇದ್ ಅವರು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಿದ್ದು, ಅಲ್ಲಿ ನದಿಗಳ ಪ್ರವಾಹದ ಅಪಾಯದ ಬಗ್ಗೆ ತಿಳಿಸಲಾಗಿದೆ ಎಂದು ಎಆರ್​​ವೈ ನ್ಯೂಸ್ ಹೇಳಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್