‘ತಾಲಿಬಾನ್ ಬರುತ್ತಿದೆ, ಸಹಾಯ ಮಾಡಿ’ ಎಂದು ಕಣ್ಣೀರಿಟ್ಟು ಅಮೆರಿಕ ಸೇನೆಯಲ್ಲಿ ವಿನಂತಿಸಿದ ಅಫ್ಘಾನಿಸ್ತಾನದ ಮಹಿಳೆಯರು

Kabul Airport: ರೆ. "ನನಗೆ ಸಹಾಯ ಮಾಡಿ, ದಯವಿಟ್ಟು ನನಗೆ ಸಹಾಯ ಮಾಡಿ. ತಾಲಿಬಾನ್‌ಗಳು ನನಗಾಗಿ ಬರುತ್ತಿದ್ದಾರೆ," ಹೆಂಗಸರು ತಮ್ಮ ಸ್ಥಳೀಯ ಭಾಷೆಯಲ್ಲಿ ಕೂಗುತ್ತಿರುವುದು ವಿಡಿಯೊದಲ್ಲಿದೆ.

'ತಾಲಿಬಾನ್ ಬರುತ್ತಿದೆ, ಸಹಾಯ ಮಾಡಿ' ಎಂದು ಕಣ್ಣೀರಿಟ್ಟು ಅಮೆರಿಕ ಸೇನೆಯಲ್ಲಿ ವಿನಂತಿಸಿದ ಅಫ್ಘಾನಿಸ್ತಾನದ ಮಹಿಳೆಯರು
ಅಳುತ್ತಿರುವ ಅಫ್ಘಾನಿಸ್ತಾನದ ಮಹಿಳೆಯರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 18, 2021 | 8:02 PM

ಕಾಬೂಲ್: ಕಾಬೂಲ್‌ನ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇತ್ತೀಚಿನ ದಿನಗಳಲ್ಲಿ ಅಫ್ಘಾನಿಸ್ತಾನದ ಪ್ರಜೆಗಳಿಂದ ತುಂಬಿಹೋಗಿದೆ. ತಾಲಿಬಾನ್ ಆಡಳಿತವು ಮತ್ತೆ ಅಧಿಕಾರಕ್ಕೆ ಬಂದ ನಂತರ ತಮ್ಮ ದೇಶವನ್ನು ತೊರೆಯಲು ಜನರು ಓಡುತ್ತಿದ್ದಾರೆ. ಅಮೆರಿಕ ವಾಯುಪಡೆಯ ವಿಮಾನಕ್ಕೆ ಕಾಯುತ್ತಿರುವ ಜನರು ಒಂದೆಡೆಯಾದರೆ ವಿಮಾನವೇರಲು ನೂಕುನುಗ್ಗಲು ಮಾಡುವ ಜನರ ಗುಂಪುಗಳ ವಿಡಿಯೊವನ್ನು ನಾವು ನೋಡಿದ್ದೇವೆ. ಇದೀಗ ಅಂತದ್ದೇ ವಿಡಿಯೊವೊಂದನ್ನು ಬ್ರಿಟನ್​​ನ ಡೈಲಿಮೇಲ್ ಪೋಸ್ಟ್ ಮಾಡಿದೆ, ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ವಿಮಾನಕ್ಕಾಗಿ ಕಾಯುತ್ತಿರುವ ಅಫ್ಘಾನಿಸ್ತಾನದ ಮಹಿಳೆಯರ ಗುಂಪು ಅಮೆರಿಕದ ಸೈನ್ಯದೊಂದಿಗೆ ಅಂಗಲಾಚುತ್ತಿದ್ದಾರೆ. “ನನಗೆ ಸಹಾಯ ಮಾಡಿ, ದಯವಿಟ್ಟು ನನಗೆ ಸಹಾಯ ಮಾಡಿ. ತಾಲಿಬಾನ್‌ಗಳು ನನಗಾಗಿ ಬರುತ್ತಿದ್ದಾರೆ,” ಹೆಂಗಸರು ತಮ್ಮ ಸ್ಥಳೀಯ ಭಾಷೆಯಲ್ಲಿ ಕೂಗುತ್ತಿರುವುದು ವಿಡಿಯೊದಲ್ಲಿದೆ.

ಡೈಲಿ ಮೇಲ್ ವರದಿಯ ಪ್ರಕಾರ ಬುಧವಾರ 50 ಸಾವಿರ ಜನರು ವಿಮಾನ ನಿಲ್ದಾಣದಲ್ಲಿ ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಕ್ಕೆ ಹೋಗಲು ಪ್ರಯತ್ನಿಸಿದ್ದಾರೆ. ಅಮೆರಿಕ ಮತ್ತು ಬ್ರಿಟನ್ ಸೇರಿದಂತೆ ಹಲವಾರು ದೇಶಗಳ ಹೊರತಾಗಿಯೂ, “ತಲಾ ಸಾವಿರಾರು ಅಫ್ಘಾನ್ ನಿರಾಶ್ರಿತರನ್ನು ಕರೆದೊಯ್ಯುವ ಪ್ರತಿಜ್ಞೆ” ಮಾಡಿದ್ದರೂ, ಸ್ಥಳಾಂತರಿಸುವ ವಿಮಾನಗಳು ಕೇವಲ ಶೇ 50ಪ್ರಯಾಣಿಕರೊಂದಿಗೆ ಹೊರಡುತ್ತಿವೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಹೆಚ್ಚಿನ ಜನರು ಪ್ರಯಾಣದ ದಾಖಲೆಗಳನ್ನು ಹೊಂದಿಲ್ಲ ಎಂದು ವರದಿ ಹೇಳಿದೆ.

ಅಫ್ಘಾನಿಸ್ತಾನದಲ್ಲಿ ಆಗಸ್ಟ್ 15 ರಂದು ತಾಲಿಬಾನ್ ಕಾಬೂಲ್ ಅನ್ನು ವಶಪಡಿಸಿಕೊಂಡಿತು, ಹೀಗಾಗಿ 2001 ರಿಂದ ಇದೇ ಮೊದಲ ಬಾರಿಗೆ ತಾಲಿಬಾನ್ ಇಲ್ಲಿ ಅಧಿಕಾರವನ್ನು ವಶಪಡಿಸಿಕೊಂಡಿತು. 9/11 ದಾಳಿಯ ನಂತರ ದೇಶಕ್ಕೆ ಆಗಮಿಸಿದ ಅಮೆರಿಕ ನೇತೃತ್ವದ ಸೈನ್ಯವು ಅದನ್ನು ಓಡಿಸಿತು. ಏಪ್ರಿಲ್ ತಿಂಗಳಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ನಿರ್ದೇಶಿಸಿದಂತೆ ಅಮೆರಿಕದ ಸೇನೆ ಅಫ್ಘಾನಿಸ್ತಾನದಿಂದ ನಿರ್ಗಮಿಸಿದ ಬೆನ್ನಲ್ಲೇ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: ತಾಲಿಬಾನ್ ಬೆಂಬಲಿಸಿ ಹೇಳಿಕೆ ನೀಡಿದ ಎಸ್​ಪಿ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಇದನ್ನೂ ಓದಿ: Taliban In Afghanistan: ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಇದ್ದರೆ ಇಡೀ ಜಗತ್ತಿಗೆ ಕೊರೊನಾ ಇದ್ದಂತೆ ಏಕೆ?

( Help me please Video shows Afghan women pleading with US troops to let them enter Kabul airport )

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ