ಇಸ್ರೇಲ್​ನಿಂದ ಸಿರಿಯಾ ಮೇಲೆ ವೈಮಾನಿಕ ದಾಳಿ, ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ 3 ಮಂದಿ ಸಾವು

ಇಸ್ರೇಲ್​ ಹಮಾಸ್​ ಮೇಲಿನ ದಾಳಿಯನ್ನು ಮುಂದುವರೆಸಿದೆ, ಸಿರಿಯಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಸ್ರೇಲಿ ಸೇನೆಯು ಲೆಬನಾನ್‌ನ ಬೈರುತ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಇಸ್ರೇಲ್​ನಿಂದ ಸಿರಿಯಾ ಮೇಲೆ ವೈಮಾನಿಕ ದಾಳಿ, ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ 3 ಮಂದಿ ಸಾವು
Image Credit source: AIMonitor
Follow us
ನಯನಾ ರಾಜೀವ್
|

Updated on: Oct 03, 2024 | 11:40 AM

ಇಸ್ರೇಲ್​ ಹಮಾಸ್​ ಮೇಲಿನ ದಾಳಿಯನ್ನು ಮುಂದುವರೆಸಿದೆ, ಸಿರಿಯಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಸ್ರೇಲಿ ಸೇನೆಯು ಲೆಬನಾನ್‌ನ ಬೈರುತ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಇಸ್ರೇಲಿ ಸೇನೆಯು ತನ್ನ ಶತ್ರುಗಳನ್ನು ಕೊಲ್ಲಲು ಸಿರಿಯಾದಲ್ಲಿ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಮತ್ತೊಮ್ಮೆ ಇಸ್ರೇಲ್ ಸೇನೆಯು ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಿತು. ಇಸ್ರೇಲಿ ಸೇನೆಯು ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ವೈಮಾನಿಕ ದಾಳಿ ನಡೆಸಿತು. ಡಮಾಸ್ಕಸ್‌ನ ಮಜ್ಜೆ ವೆಸ್ಟರ್ನ್ ವಿಲ್ಲಾ ಪ್ರದೇಶದ ಮನೆಯೊಂದರ ಮೇಲೆ ಇಸ್ರೇಲಿ ಸೇನೆ ಈ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ.

ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಅಳಿಯ ಹಸನ್ ಜಾಫರ್ ಖಾಸಿರ್ ಕೂಡ ಸಾವನ್ನಪ್ಪಿದ್ದಾರೆ. ಇಸ್ರೇಲಿ ಪಡೆಗಳು ನಸ್ರಲ್ಲಾ, ಅವರ ಮಗಳು, ಅಳಿಯ ಮತ್ತು ಹಲವಾರು ಪ್ರಮುಖ ಕಮಾಂಡರ್‌ಗಳು ಸೇರಿದಂತೆ ಅನೇಕ ಹಿಜ್ಬುಲ್ಲಾ ಭಯೋತ್ಪಾದಕರನ್ನು ಕೊಂದಿವೆ.

ಮತ್ತಷ್ಟು ಓದಿ: ಲೆಬನಾನ್‌: ಹಿಬ್ಜುಲ್ಲಾ ವಿರುದ್ಧದ ಯುದ್ಧದಲ್ಲಿ 8 ಇಸ್ರೇಲಿ ಸೈನಿಕರು ಸಾವು

ಲೆಬನಾನ್‌ನ ಉಗ್ರ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರುಲ್ಲಾಹ್ ಹತ್ಯೆ ಮಾಡಿದ ಬೆನ್ನಲ್ಲೇ ಲೆಬನಾನ್ ಮೇಲೆ ಭೂ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್, ತನ್ನ ಸೈನಿಕ ಸಾವನ್ನಪ್ಪಿರುವ ಕುರಿತು ಹೇಳಿಕೆ ನೀಡಿದೆ.

ಇದರೊಂದಿಗೆ ಭೂ ಸೇನಾ ಕಾರ್ಯಾಚರಣೆಯಲ್ಲಿ ತನ್ನ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಇದು ಹಿಜ್ಬುಲ್ಲಾವನ್ನು ಗುರಿಯಾಗಿಸಿ ಗಡಿ ದಾಟಿ ಅದರ ಪಡೆಗಳ ಮೇಲೆ ನಡೆಸುತ್ತಿರುವ ದಾಳಿಯಲ್ಲಿ ಸಂಭವಿಸಿದ ಇಸ್ರೇಲ್ ಪಡೆಯ ಮೊದಲ ಸಾವು ಎಂದು ವರದಿಯಾಗಿದೆ.

22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನ ಯುದ್ಧದ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ