AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirav Modi ನೀರವ್ ಮೋದಿ ಮೇಲ್ಮನವಿ ತಿರಸ್ಕರಿಸಿದ ಕೋರ್ಟ್; ಭಾರತಕ್ಕೆ ಹಸ್ತಾಂತರಿಸಲು ಆದೇಶ

ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ 51 ವರ್ಷದ ಉದ್ಯಮಿ ಮೋದಿಗೆ ಕಳೆದ ಫೆಬ್ರವರಿಯಲ್ಲಿ ಹಸ್ತಾಂತರದ ಪರವಾಗಿ ಜಿಲ್ಲಾ ನ್ಯಾಯಾಧೀಶ ಸ್ಯಾಮ್ ಗೂಜೀ ಅವರ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ್ದರು

Nirav Modi ನೀರವ್ ಮೋದಿ ಮೇಲ್ಮನವಿ ತಿರಸ್ಕರಿಸಿದ ಕೋರ್ಟ್; ಭಾರತಕ್ಕೆ ಹಸ್ತಾಂತರಿಸಲು ಆದೇಶ
ನೀರವ್ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 09, 2022 | 5:27 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಸಾಲ ಹಗರಣ ಪ್ರಕರಣದಲ್ಲಿ ವಂಚನೆ ಮತ್ತು ಅಕ್ರಮ ಹಣ ವ್ಯವಹಾರ ಆರೋಪಗಳನ್ನು ಎದುರಿಸಲು ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು(Nirav Modi) ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್ ಬುಧವಾರ ಆದೇಶಿಸಿದೆ. ಈ ವರ್ಷದ ಆರಂಭದಲ್ಲಿ ಮೇಲ್ಮನವಿ ವಿಚಾರಣೆಯ ನೇತೃತ್ವ ವಹಿಸಿದ್ದ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರು ಈ ತೀರ್ಪು ನೀಡಿದ್ದಾರೆ. ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ 51 ವರ್ಷದ ಉದ್ಯಮಿ ಮೋದಿಗೆ ಕಳೆದ ಫೆಬ್ರವರಿಯಲ್ಲಿ ಹಸ್ತಾಂತರದ ಪರವಾಗಿ ಜಿಲ್ಲಾ ನ್ಯಾಯಾಧೀಶ ಸ್ಯಾಮ್ ಗೂಜೀ ಅವರ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದ್ದರು.

ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ಆಧಾರದ ಮೇಲೆ ಅನುಮತಿ ನೀಡಲಾಗಿದೆ. ಮಾನವ ಹಕ್ಕುಗಳ ಯುರೋಪಿಯನ್ ಕನ್ವೆನ್ಷನ್ (ECHR) ನ 3 ನೇ ವಿಧಿಯ ಅಡಿಯಲ್ಲಿ ಮೋದಿಯ ಮಾನಸಿಕ ಸ್ಥಿತಿ ಮತ್ತು ಮಾನಸಿಕ ಅಸ್ವಸ್ಥತೆಗೆ ಸಂಬಂಧಿಸಿದ ಹಸ್ತಾಂತರ ಕಾಯಿದೆ 2003 ರ ಸೆಕ್ಷನ್ 91 ರ ಕಾರಣದಿಂದ ಅವರನ್ನು ಹಸ್ತಾಂತರಿಸುವುದು ಈ ಎರಡು ಕಾರಣಗಳಾಗಿವೆ.

ಮೋದಿ ವಿರುದ್ಧ ಎರಡು ಸೆಟ್ ಕ್ರಿಮಿನಲ್ ಮೊಕದ್ದಮೆಗಳಿವೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದಲ್ಲಿ PNB ಮೇಲೆ ದೊಡ್ಡ ಪ್ರಮಾಣದ ವಂಚನೆಗೆ ಸಂಬಂಧಿಸಿದ ಪತ್ರಗಳು (LoUs) ಅಥವಾ ಸಾಲ ಒಪ್ಪಂದಗಳು ಮತ್ತು ಆ ವಂಚನೆಯ ಆದಾಯದ ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯ (ED) ಪ್ರಕರಣ. ಮೋದಿ, ಸಾಕ್ಷ್ಯ ಮರೆ ಮಾಡುವುದು ಮತ್ತು ಸಾಕ್ಷಿಗಳನ್ನು ಬೆದರಿಸುವುದು ಅಥವಾ “ಸಾವಿಗೆ ಕಾರಣವಾಗುವಂತೆ ಕ್ರಿಮಿನಲ್ ಬೆದರಿಕೆ” ಎಂಬ ಎರಡು ಹೆಚ್ಚುವರಿ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದನ್ನು ಸಿಬಿಐ ಪ್ರಕರಣಕ್ಕೆ ಸೇರಿಸಲಾಗಿದೆ.

Published On - 4:58 pm, Wed, 9 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?