AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಮತ್ತೊಂದು ಹಿಂದು ದೇವಸ್ಥಾನ ಧ್ವಂಸ; ದೇವಿ ಮೂರ್ತಿಯನ್ನು ಒಡೆದ ದುಷ್ಕರ್ಮಿ

ಆಗಸ್ಟ್​ನಲ್ಲಿ ಪಾಕಿಸ್ತಾನದಲ್ಲಿ ಇಂಥದ್ದೇ ಘಟನೆ ನಡೆದಿತ್ತು. ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿದ್ದ ಈ ಸಿದ್ಧಿವಿನಾಯಕ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು.

ಪಾಕಿಸ್ತಾನದಲ್ಲಿ ಮತ್ತೊಂದು ಹಿಂದು ದೇವಸ್ಥಾನ ಧ್ವಂಸ; ದೇವಿ ಮೂರ್ತಿಯನ್ನು ಒಡೆದ ದುಷ್ಕರ್ಮಿ
ಧ್ವಂಸಗೊಂಡ ದೇವಿ ಮೂರ್ತಿ ಮತ್ತು ಆರೋಪಿ
Follow us
TV9 Web
| Updated By: Lakshmi Hegde

Updated on: Dec 21, 2021 | 12:47 PM

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಲ್ಲೆ, ಹಿಂದೂ ದೇವಸ್ಥಾನಗಳ ಧ್ವಂಸ (Hindu Temple Vandalised) ಪದೇಪದೆ ನಡೆಯುತ್ತಲೇ ಇರುತ್ತದೆ. ಸೋಮವಾರ (ಡಿ.20) ಕೂಡ ಕರಾಚಿ (Karachi)ಯಲ್ಲಿರುವ ಹಿಂದು ದೇಗುಲವೊಂದನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಪಾಕಿಸ್ತಾನದ ಉರ್ದು ಚಾನಲ್​ವೊಂದು ಈ ಬಗ್ಗೆ ವರದಿ ಮಾಡಿದ್ದು, ಕರಾಚಿಯ ರಾಂಚೋರ್ ಲೈನ್ ಪ್ರದೇಶದಲ್ಲಿರುವ ಹಿಂದು ದೇವಸ್ಥಾನಕ್ಕೆ ವ್ಯಕ್ತಿಯೊಬ್ಬ ನುಗ್ಗಿ, ಗರ್ಭಗುಡಿಯಲ್ಲಿದ್ದ ಜೋಗ್​ ಮಾಯಾ(ದೇವಿ) ಮೂರ್ತಿಯನ್ನು ಸುತ್ತಿಗೆಯಿಂದ ಕುಟ್ಟಿ ಒಡೆದಿದ್ದಾನೆ. ಬಳಿಕ ಆತನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಧರ್ಮ ನಿಂದನೆಗೆ ಸಂಬಂಧಪಟ್ಟ ವಿವಿಧ ಸೆಕ್ಷನ್​​ಗಳಡಿ ಕೇಸ್​ ದಾಖಲಾಗಿದೆ.

ಕರಾಚಿಯಲ್ಲಿ ಹಿಂದು ದೇಗುಲವನ್ನು ಧ್ವಂಸ ಮಾಡಿದ್ದನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್​ ಸಿರ್ಸಾ ತೀವ್ರವಾಗಿ ಖಂಡಿಸಿದ್ದಾರೆ. ಇದು ಅಲ್ಲಿನ ಸರ್ಕಾರ ಬೆಂಬಲಿತ ಕೃತ್ಯ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿದ್ದ ಮತ್ತೊಂದು ಹಿಂದು ದೇವಸ್ಥಾನವನ್ನು ನಾಶಗೊಳಿಸಲಾಗಿದೆ. ಈ ದೇವಸ್ಥಾನವಿದ್ದ ಜಾಗ ಪೂಜಾ ಸ್ಥಳವಾಗಲು ಯೋಗ್ಯವಾದುದ್ದಲ್ಲ ಎಂದು ಅದನ್ನು ನಾಶ ಮಾಡಿದವರು ಸಮರ್ಥನೆ ಬೇರೆ ಮಾಡಿಕೊಳ್ಳುತ್ತಿದ್ದಾರೆ. ಇದು ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನ ಸರ್ಕಾರ ಬೆಂಬಲಿತ ಭಯೋತ್ಪಾದನೆ ಎಂದು ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದಲ್ಲಿ ಪದೇಪದೆ ಹಿಂದುಗಳ ಮೇಲೆ ಆಕ್ರಮಣ ನಡೆಯುತ್ತಿದೆ. ದೇಗುಲಗಳನ್ನು ಧ್ವಂಸ ಮಾಡಲಾಗುತ್ತಿದೆ. ಈ ವಿಚಾರವನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಬೇಕು ಎಂದು ಸಿರ್ಸಾ, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ರನ್ನು ಒತ್ತಾಯಿಸಿದ್ದಾರೆ.  ಬರೀ ಹಿಂದುಗಳ ಮೇಲಷ್ಟೇ ಅಲ್ಲ, ಅಲ್ಲಿನ ಸಿಖ್ಖರ ಮೇಲೆ ಕೂಡ ನಿರಂತರ ಆಕ್ರಮಣ, ದೌರ್ಜನ್ಯ ನಡೆಯುತ್ತಿದೆ ಎಂದೂ ಆರೋಪಿಸಿದ್ದಾರೆ. ಅಕ್ಟೋಬರ್​ನಲ್ಲಿ ಸಿಂಧ್​ ಪ್ರಾಂತ್ಯದಲ್ಲಿರುವ ಹನುಮಾನ್​ ದೇವಿ ಮಠ ಮಂದಿರವನ್ನು ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಅಪವಿತ್ರಗೊಳಿಸಿತ್ತು. ಆ ಮಂದಿರದ ಲಾಕ್​ನ್ನು ಮುರಿದು ನಗದು, ಆಭರಣಗಳನ್ನು ಕಳವು ಮಾಡಿದ್ದರು. ದೇವಿಯ ಕುತ್ತಿಗೆಯಲ್ಲಿದ್ದ ಬೆಳ್ಳಿ ನೆಕ್ಲೆಸ್​​ನ್ನು ಕೂಡ ಕಳವು ಮಾಡಿದ್ದರು. ಕಾಣಿಕೆ ಡಬ್ಬವನ್ನು ಹೊತ್ತೊಯ್ದಿದ್ದರು.

ಆಗಸ್ಟ್​ನಲ್ಲಿ ಪಾಕಿಸ್ತಾನದಲ್ಲಿ ಇಂಥದ್ದೇ ಘಟನೆ ನಡೆದಿತ್ತು. ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿದ್ದ ಈ ಸಿದ್ಧಿವಿನಾಯಕ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು. ಮುಸ್ಲಿಮರ ಗುಂಪೊಂದು ದೇವರ ವಿಗ್ರಹವನ್ನು ಗರ್ಭಗುಡಿಯಿಂದ ತೆಗೆದು, ಅದನ್ನು ಬೆಂಕಿಯಿಂದ ಸುಟ್ಟಿದ ವಿಡಿಯೋಗಳು ಸಿಕ್ಕಾಪಟೆ ವೈರಲ್ ಆಗಿದ್ದವು. ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಘಟನೆಯಲ್ಲಿ ಭಾಗಿಯಾಗಿದ್ದ 20 ಜನರನ್ನು ಬಂಧಿಸಿ, 150 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ವಿಚಾರವಾಗಿ ಪಾಕ್​ ಸುಪ್ರೀಂಕೋರ್ಟ್​ ಕೂಡ ಪೊಲೀಸರಿಗೆ ಛೀಮಾರಿ ಹಾಕಿತ್ತು. ಇಷ್ಟೆಲ್ಲ ಆದರೂ ಪಾಕಿಸ್ತಾನದಲ್ಲಿ ಹಿಂದು ದೇಗುಲಗಳ ರಕ್ಷಣೆಗೆ ಯಾವುದೇ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂಬುದು ಪದೇಪದೆ ಸಾಬೀತಾಗುತ್ತಿದೆ.

ಇದನ್ನೂ ಓದಿ: ತುಮಕೂರು: ಹಾಸ್ಟೆಲ್​ನ ಕುಡಿಯುವ ನೀರಿಗೆ ವಿಷ ಹಾಕಲು ಯತ್ನಿಸಿದ ಪ್ರಕರಣ; ಅಪರಾಧಿಗೆ 7 ವರ್ಷ ಜೈಲು, 10 ಸಾವಿರ ರೂ. ದಂಡ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ