Hindu Temples: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳಿಂದ ದಾಳಿ, ವಿಗ್ರಹಗಳ ಧ್ವಂಸ

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ.

Hindu Temples: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ಕಿಡಿಗೇಡಿಗಳಿಂದ ದಾಳಿ, ವಿಗ್ರಹಗಳ ಧ್ವಂಸ
ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಕ್ಕೆ ಭೇಟಿ ನೀಡಿರುವ ಅಧಿಕಾರಿಗಳುImage Credit source: Economic Times
Follow us
ನಯನಾ ರಾಜೀವ್
|

Updated on: Feb 06, 2023 | 8:07 AM

ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಗುರುತಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುತಿಸಿದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಶನಿವಾರ ತಡರಾತ್ರಿ 14 ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ

ವರದಿಯ ಪ್ರಕಾರ, ದೇವಾಲಯಗಳಲ್ಲಿ (ಬಾಂಗ್ಲಾದೇಶಿ ಹಿಂದೂ ದೇವಾಲಯ) ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್‌ನ ಬಲಿಯಾದಂಗಿಯಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ಮುಂಜಾನೆ ಅಪರಿಚಿತರು ಕತ್ತಲೆಯ ಲಾಭವನ್ನು ಪಡೆದುಕೊಂಡು ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ಮಾಡಲು ಪ್ರಾರಂಭಿಸಿದರು.

ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳು ತುಂಡುಗಳಾಗಿ ಮುರಿದು ಕೊಳಕ್ಕೆ ಎಸೆದಿದ್ದಾರೆ.

ದೇವಾಲಯಗಳ (ಬಾಂಗ್ಲಾದೇಶಿ ಹಿಂದೂ ದೇವಾಲಯ) ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ.

ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪೊಲೀಸರ ಪ್ರಾಣ ಮತ್ತು ಆಸ್ತಿ ರಕ್ಷಣೆ ಮಾಡುವಂತೆ ಮನವಿ ಮಾಡಿದರು ಸಂಘ ಪರಿಷದ್ ಅಧ್ಯಕ್ಷ ಮತ್ತು ಹಿಂದೂ ಮುಖಂಡ ಸಮರ್ ಚಟರ್ಜಿ ಅವರು ದೇವಾಲಯಗಳಲ್ಲಿ ಧ್ವಂಸ ಘಟನೆಯ ಬಗ್ಗೆ ದುಃಖ ಮತ್ತು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದು ಹಿಂದೂ ಮತ್ತು ಮುಸ್ಲಿಮರ ಮಿಶ್ರ ಪ್ರದೇಶವಾಗಿದೆ ಎಂದು ಚಟರ್ಜಿ ಹೇಳಿದರು. ಇಲ್ಲಿ ಮುಸ್ಲಿಮರು ಬಹುಸಂಖ್ಯಾತರು, ಅವರು ಹಿಂದೂಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.

ಇಬ್ಬರ ನಡುವೆ ಯಾವುದೇ ವಿವಾದವಿಲ್ಲ. ಹೀಗಿರುವಾಗ ಈ ಘಟನೆಯನ್ನು ಯಾರು ಮಾಡಿದ್ದಾರೆ ಎಂದು ಆಶ್ಚರ್ಯವಾಗುತ್ತದೆ. ಪೊಲೀಸರು ನಿಜವಾದ ಅಪರಾಧಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ದೇವಾಲಯಗಳಲ್ಲಿ ಧ್ವಂಸ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಠಾಕೂರ್‌ಗಾಂವ್ ಪೊಲೀಸ್ ಮುಖ್ಯಸ್ಥ ಜಹಾಂಗೀರ್ ಹುಸೇನ್, ಶನಿವಾರ ತಡರಾತ್ರಿ ಧ್ವಂಸ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಈ ವಿಷಯವು ಪ್ರದೇಶದ ಶಾಂತಿಯನ್ನು ಕದಡುವ ಪಿತೂರಿಯಂತೆ ತೋರುತ್ತದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಅವರನ್ನು ಪತ್ತೆ ಹಚ್ಚಿದ ಕೂಡಲೇ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್