Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಅಲೆಯಲ್ಲಿ ಹಾಂಗ್​ ಕಾಂಗ್​ ಮುಳುಗುತ್ತಿದೆ; ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಾಯಕಿ ಕ್ಯಾರಿ ಲ್ಯಾಮ್

ಹಾಂಗ್​ ಕಾಂಗ್​ನ ನಾಯಕಿ ಕ್ಯಾರಿ ಲ್ಯಾಮ್​ ಕೂಡ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಒಮಿಕ್ರಾನ್​ ಮತ್ತು ಕೊವಿಡ್​ ಅತ್ಯಂತ ಆಕ್ರಮಣಕಾರಿಯಾಗಿ ಹರಡುತ್ತಿದೆ ಎಂದು ಹೇಳಿದ್ದಾರೆ.

ಒಮಿಕ್ರಾನ್​ ಅಲೆಯಲ್ಲಿ ಹಾಂಗ್​ ಕಾಂಗ್​ ಮುಳುಗುತ್ತಿದೆ; ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಾಯಕಿ ಕ್ಯಾರಿ ಲ್ಯಾಮ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Feb 14, 2022 | 4:45 PM

ಕೊರೊನಾ ಸೋಂಕಿನ ಪ್ರಸರಣ, ಪ್ರಮಾಣ ಚೀನಾದ ಹಾಂಗ್​ಕಾಂಗ್​ನಲ್ಲಿ(Hong Kong) ಅತ್ಯಂತ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಒಮಿಕ್ರಾನ್​ ಸೋಂಕಿನ (Omicron) ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಆಸ್ಪತ್ರೆಗಳಲ್ಲಿ ರೋಗಿಗಳು ಹೆಚ್ಚುತ್ತಿದ್ದಾರೆ. ಹೀಗಾಗಿ ಹಾಂಗ್​ಕಾಂಗ್​​ನಲ್ಲಿ ಶೂನ್ಯ ಕೊವಿಡ್​ ನೀತಿಯಲ್ಲಿ ಸಡಿಲಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕಟ್ಟುನಿಟ್ಟಿನ ಕ್ರಮಗಳು ಮುಂದುವರಿದಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಚೀನಾದಲ್ಲಿ ಹಾಂಗ್​ಕಾಂಗ್​ ಸೇರಿ ಎಲ್ಲ ನಗರಗಳಲ್ಲೂ ಕೊವಿಡ್​ 19 ನಿಯಂತ್ರಣಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿನ ಸಂಖ್ಯೆಯಲ್ಲಿ ತುಸು ಹೆಚ್ಚಳ ಕಂಡುಬಂದರೂ ಸಾಮೂಹಿಕ ಕ್ವಾರಂಟೈನ್​, ಸೋಂಕಿತರ ಸಂಪರ್ಕಕ್ಕೆ ಬಂದವರ ಟ್ರ್ಯಾಕ್​ ಮಾಡುವುದು, ಸಾಮಾಜಿಕ ಅಂತರ ಪಾಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಕ್ರಮಗಳನ್ನೆಲ್ಲ ಕಳೆದು ಎರಡು ವರ್ಷಗಳಿಂದಲೂ ಕಟ್ಟುನಿಟ್ಟಾಗಿ ಹೇರಲಾಗಿದ್ದು, ಜನರೂ ಕೂಡ ಪಾಲಿಸುತ್ತಿದ್ದಾರೆ.

ಆದರೆ ಡಿಸೆಂಬರ್​​ನಲ್ಲಿ ಹಾಂಗ್​ಕಾಂಗ್​​ನಲ್ಲಿ ಒಮಿಕ್ರಾನ್​ ಸೋಂಕಿನ ಹೆಚ್ಚಳದ ಜತೆ ಕೊವಿಡ್​ 19 ಪ್ರಸರಣವೂ ಮಿತಿಮೀರಿದೆ. ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆಯು ಕಳೆದ ಎರಡು ವಾರಗಳ ಹಿಂದಿನಿಗಿಂತ ಈಗ 13 ಪಟ್ಟು ಹೆಚ್ಚಳವಾಗಿದೆ. ಜನವರಿ ಅಂತ್ಯದ ಹೊತ್ತಿಗೆ ದಿನದಲ್ಲಿ 100 ಕೊರೊನಾ ಕೇಸ್​ಗಳು ದಾಖಲಾಗುತ್ತಿದ್ದವು. ಆದರೆ ಇಂದು 1530 ಪ್ರಕರಣಗಳು ದಾಖಲಾಗಿವೆ ಎಂದು ಸ್ಥಳೀಯ ಮಾಧ್ಯಮಗಳೇ ವರದಿ ಮಾಡಿವೆ.

ಹಾಂಗ್​ ಕಾಂಗ್​ನ ನಾಯಕಿ ಕ್ಯಾರಿ ಲ್ಯಾಮ್​ ಕೂಡ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಒಮಿಕ್ರಾನ್​ ಮತ್ತು ಕೊವಿಡ್​ ಅತ್ಯಂತ ಆಕ್ರಮಣಕಾರಿಯಾಗಿ ಹರಡುತ್ತಿದೆ. ಇಡೀ ನಗರ ಕೊವಿಡ್ 19 ಒಮಿಕ್ರಾನ್​ ಅಲೆಯಲ್ಲಿ ಮುಳುಗುತ್ತಿದೆ. ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂದು ಚೀನಾ ಸರ್ಕಾರದ ಅಧಿಕಾರಿಗಳು, ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಹಾಂಗ್​ಕಾಂಗ್​​ನಲ್ಲಿ ಮಾರ್ಚ್​ ಅಂತ್ಯದ ವೇಳೆಗೆ 28 ಸಾವಿರ ಪ್ರಕರಣಗಳು ದಿನವೊಂದಕ್ಕೆ ಪತ್ತೆಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿ ಮುಖದ ಮೇಲೆ ‘ಅಪ್ನಾ ಟೈಮ್ ಆಯೇಗಾ’ ಅಂತ ಬರೆಯಲಾದ ಮಾಸ್ಕ್!

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ