ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ; ಮೋದಿ ಜೊತೆ ಮಾತುಕತೆ ಬಳಿಕ ಎಲಾನ್ ಮಸ್ಕ್ ಮಾಹಿತಿ

ಬಿಲಿಯನೇರ್ ಉದ್ಯಮಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತರಾದ ಎಲಾನ್ ಮಸ್ಕ್ ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ನಡೆಸಿದ ನಂತರ ಎಲಾನ್ ಮಸ್ಕ್ ಎಕ್ಸ್ ಪೋಸ್ಟ್‌ನಲ್ಲಿ ಈ ಬಗ್ಗೆ ದೃಢಪಡಿಸಿದ್ದಾರೆ. "ಪ್ರಧಾನಿ ಮೋದಿ ಜೊತೆ ಮಾತನಾಡಿದ್ದು ಗೌರವದ ಸಂಗತಿ. ಈ ವರ್ಷ ನಾನು ಭಾರತಕ್ಕೆ ಭೇಟಿ ನೀಡುತ್ತೇನೆ" ಎಂದು ಎಲಾನ್ ಮಸ್ಕ್ ಹೇಳಿದ್ದಾರೆ.

ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ; ಮೋದಿ ಜೊತೆ ಮಾತುಕತೆ ಬಳಿಕ ಎಲಾನ್ ಮಸ್ಕ್ ಮಾಹಿತಿ
Elon Musk Pm Modi

Updated on: Apr 19, 2025 | 4:32 PM

ವಾಷಿಂಗ್ಟನ್, ಏಪ್ರಿಲ್ 19: ಟೆಸ್ಲಾ ಸಿಇಒ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಉದ್ಯಮಿ ಎಲಾನ್ ಮಸ್ಕ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಫೋನ್​ನಲ್ಲಿ ಮಾತನಾಡಿದ್ದು ಗೌರವದ ಸಂಗತಿ ಎಂದು ಕೀಡ ಅವರು ಹೇಳಿದ್ದಾರೆ. ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿಯ ಸಮಯದಲ್ಲಿ ಅವರು ಹಿಂದೆ ಚರ್ಚಿಸಿದ ವಿಷಯಗಳ ಕುರಿತು ಪ್ರಧಾನಿ ಮೋದಿ ಮತ್ತು ಎಲಾನ್ ಮಸ್ಕ್ ಶುಕ್ರವಾರ ಚರ್ಚೆ ನಡೆಸಿದ್ದರು. ಬಹು ಕ್ಷೇತ್ರಗಳಲ್ಲಿ ಸಹಯೋಗದ ಅಪಾರ ಸಾಮರ್ಥ್ಯದ ಕುರಿತು ನಾವಿಬ್ಬರೂ ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ.

“ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯಲ್ಲಿ ನಾವು ಚರ್ಚಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಎಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ. ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದನ್ನೂ ಓದಿ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಚೀನಾ ಬಿಟ್ಟು ಎಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ ಟ್ರಂಪ್

ಈ ವರ್ಷದ ಫೆಬ್ರವರಿಯ ಆರಂಭದಲ್ಲಿ ಪ್ರಧಾನಿ ಮೋದಿ ಬ್ಲೇರ್ ಹೌಸ್‌ನಲ್ಲಿ ಎಲಾನ್ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ, ಪ್ರಧಾನಿ ಮೋದಿ ತಾವಿಬ್ಬರೂ ಬಾಹ್ಯಾಕಾಶ, ತಂತ್ರಜ್ಞಾನ ಮತ್ತು ನಾವೀನ್ಯತೆ ಮುಂತಾದ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಎಕ್ಸ್​ನಲ್ಲಿ ತಿಳಿಸಿದ್ದರು. ಈ ಸಭೆಯ ಸಮಯದಲ್ಲಿ ಮೋದಿ ಮತ್ತು ಎಲಾನ್ ಮಸ್ಕ್ ಸ್ಟಾರ್‌ಲಿಂಕ್ ಮತ್ತು ಟೆಸ್ಲಾದ ಭಾರತದ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿತ್ತು. ಎಲಾನ್ ಮಸ್ಕ್ ಸ್ಪೇಸ್‌ಎಕ್ಸ್ ಮತ್ತು ಇಸ್ರೋ ನಡುವಿನ ಸಂಭಾವ್ಯ ಸಹಯೋಗದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು.


ಟೆಸ್ಲಾ ಈಗಾಗಲೇ ಭಾರತಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಲು ಪ್ರಾರಂಭಿಸಿದೆ. ಅದಕ್ಕಾಗಿ ಸ್ಥಳಗಳು ಮತ್ತು ಉದ್ಯೋಗಿಗಳನ್ನು ಹುಡುಕುತ್ತಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 4,000 ಚದರ ಅಡಿ ಜಾಗವನ್ನು ಬಾಡಿಗೆಗೆ ಪಡೆದಿದೆ ಎಂದು ವರದಿಯಾಗಿದೆ. ಅದು ಕೆಲವು ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಬರುತ್ತದೆ. ಟೆಸ್ಲಾ ದೆಹಲಿ ಮತ್ತು ಮುಂಬೈನಲ್ಲಿ ಕೆಲವು ಹೆಚ್ಚುವರಿ ಸ್ಥಳವನ್ನು ಸಹ ಆಯ್ಕೆ ಮಾಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಷ್ಯಾದ ಯುದ್ಧಕ್ಕೆ ಚೀನಾ ಸಹಾಯ; ಉಕ್ರೇನ್​ಗೆ ಭೇಟಿ ನೀಡಿ ಎಂದ ಝೆಲೆನ್ಸ್ಕಿಗೆ ಟ್ರಂಪ್ ಹೇಳಿದ್ದೇನು?

ಭಾರತವು ಪ್ರಸ್ತುತ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿದೆ. ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಪರಸ್ಪರ ಸುಂಕಗಳ ವಿರಾಮವನ್ನು ಘೋಷಿಸಿದ್ದಾರೆ. ಟ್ರಂಪ್ ಭಾರತದ ಮೇಲೆ ಶೇ. 26ರಷ್ಟು ಪರಸ್ಪರ ಸುಂಕವನ್ನು ವಿಧಿಸಿದ್ದರು. ಆದರೆ, ಟ್ರಂಪ್ ಚೀನಾವನ್ನು ಹೊರತುಪಡಿಸಿ ಎಲ್ಲಾ ದೇಶಗಳ ಮೇಲೆ 90 ದಿನಗಳ ವಿರಾಮವನ್ನು ಘೋಷಿಸಿದ ನಂತರ ಭಾರತದ ಮೇಲಿನ ಸುಂಕವು ಶೂನ್ಯಕ್ಕೆ ಇಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ