AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿದೆ ಎಂದ ಟ್ರಂಪ್​ಗೆ ಇರಾನ್ ತಿರುಗೇಟು

ಅಮೆರಿಕ ಮತ್ತು ಇರಾನ್ ನಡುವೆ ಹಾರ್ಮುಜ್ ಜಲಸಂಧಿ ನಿಯಂತ್ರಣದ ಬಗ್ಗೆ ಸಂಘರ್ಷ ತೀವ್ರಗೊಂಡಿದೆ. ಜಲಸಂಧಿಯ ಮೇಲೆ ಸಂಪೂರ್ಣ ನಿಯಂತ್ರಣವಿದೆ ಎಂಬ ಟ್ರಂಪ್ ಹೇಳಿಕೆಗೆ, ಇರಾನ್ 'ಇನ್ನು ಮುಂದೆ ಜಲಸಂಧಿ ಇರಾನ್ ನಿಯಮಗಳಡಿಯಲ್ಲೇ ನಡೆಯುತ್ತದೆ' ಎಂದು ತಿರುಗೇಟು ನೀಡಿದೆ. ಮಾತುಕತೆಗಳ ನಂತರವೂ ಉದ್ವಿಗ್ನತೆ ಮುಂದುವರಿದಿದೆ, ಆದರೆ ಸಂಘರ್ಷ ತಡೆಯಲು ಹಾಟ್‌ಲೈನ್ ಮತ್ತು ಸಮನ್ವಯ ಕೇಂದ್ರ ಸ್ಥಾಪಿಸಲು ಉಭಯ ದೇಶಗಳು ಒಪ್ಪಿಗೆ ನೀಡಿವೆ.

ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ನಮ್ಮ ನಿಯಂತ್ರಣದಲ್ಲಿದೆ ಎಂದ ಟ್ರಂಪ್​ಗೆ ಇರಾನ್ ತಿರುಗೇಟು
ಡೊನಾಲ್ಡ್​ ಟ್ರಂಪ್ Image Credit source: PTI
ನಯನಾ ರಾಜೀವ್
|

Updated on: Jun 23, 2026 | 9:29 AM

Share

ಟೆಹ್ರಾನ್, ಜೂನ್ 23: ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಸ್ವಿಟ್ಜರ್​ಲ್ಯಾಂಡ್​ನಲ್ಲಿ ನಡೆದ ಮಾತುಕತೆಗಳು ಯಶಸ್ವಿಯಾಗಿವೆ ಎಂದು ಅಮೆರಿಕ ಸಂಭ್ರಮಿಸುತ್ತಿದೆ. ಆದರೆ ಜಗತ್ತಿನ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಉಭಯ ದೇಶಗಳ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಜಲಸಂಧಿಯ ಮೇಲೆ ನಮಗೆ ಸಂಪೂರ್ಣ ನಿಯಂತ್ರಣವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹೇಳಿದ್ದರೆ, ಜಲಸಂಧಿ ಇನ್ನು ಮುಂದೆ ಇರಾನ್ ನಿಯಮಗಳಂತೆಯೇ ನಡೆಯಲಿದೆ ಎಂದು ಇರಾನ್ ತಿರುಗೇಟು ನೀಡಿದೆ.

ಸ್ವಿಟ್ಜರ್‌ಲ್ಯಾಂಡ್ ಮಾತುಕತೆಯಿಂದ ಹಿಂತಿರುಗಿದ ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಮಾತನಾಡಿ, ಹಾರ್ಮುಜ್ ಜಲಸಂಧಿಯ ನಿರ್ವಹಣೆ ಯುದ್ಧದ ಮುಂಚೆ ಇದ್ದ ಸ್ಥಿತಿಗೆ ಎಂದಿಗೂ ಮರಳುವುದಿಲ್ಲ. ಇನ್ನು ಮುಂದೆ ಅದು ಇರಾನಿನ ವ್ಯವಸ್ಥೆ ಹಾಗೂ ನಿಯಮಗಳ ಅಡಿಯಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ. ಇರಾನ್ ಎಂದಿಗೂ ಅಮೆರಿಕನ್ನರನ್ನು ನಂಬಿಲ್ಲ ಮತ್ತು ಮುಂದೆಯೂ ನಂಬುವುದಿಲ್ಲ ಎಂದು ಗಾಲಿಬಾಫ್ ವಾಷಿಂಗ್ಟನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಮ್ಮ ಶಕ್ತಿಶಾಲಿ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ. ನಾವು ವಿಧಿಸಿದ್ದ ಆರ್ಥಿಕ ದಿಗ್ಬಂಧನವು ಬಾಂಬ್‌ಗಳನ್ನು ಬೀಳಿಸುವುದಕ್ಕಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ. ಜಲಮಾರ್ಗವನ್ನು ಮುಕ್ತವಾಗಿಡಲು ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳುವ ಮೂಲಕ ಇರಾನ್ ನಾಯಕರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

ಮತ್ತಷ್ಟು ಓದಿ: ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್

ಈ ತೀವ್ರ ವಾಗ್ದಾಳಿಗಳ ನಡುವೆಯೂ, ಸಮುದ್ರದಲ್ಲಿ ಯಾವುದೇ ತುರ್ತು ಘರ್ಷಣೆಗಳು ಅಥವಾ ತಪ್ಪುಗ್ರಹಿಕೆಗಳು ನಡೆಯದಂತೆ ತಡೆಯಲು ಉಭಯ ದೇಶಗಳು ಜಂಟಿಯಾಗಿ ಒಪ್ಪಿಕೊಂಡಿವೆ. ಜಲಸಂಧಿಯಲ್ಲಿ ಚಲಿಸುವ ಹಡಗುಗಳ ಸಂಚರಣೆಗೆ ಸಂಬಂಧಿಸಿದಂತೆ ಅಮೆರಿಕಕ್ಕೆ ಯಾವುದೇ ಆಕ್ಷೇಪಣೆ ಅಥವಾ ಗೊಂದಲಗಳಿದ್ದರೆ, ತಕ್ಷಣ ಸಂಪರ್ಕಿಸಲು ನೇರ ದೂರವಾಣಿ ಹಾಟ್‌ಲೈನ್ ಮತ್ತು ಸಮನ್ವಯ ಕೇಂದ್ರವನ್ನು ಸ್ಥಾಪಿಸಲು ಉಭಯ ದೇಶಗಳು ಸಮ್ಮತಿಸಿವೆ.

ಸೋಮವಾರ ಮುಕ್ತಾಯಗೊಂಡ ಮಾತುಕತೆಯಲ್ಲಿ ಮುಂದಿನ 60 ದಿನಗಳಲ್ಲಿ ಜಾಗತಿಕ ಇತ್ಯರ್ಥವನ್ನು ಸಾಧಿಸುವ ಗುರಿಯನ್ನು ಹೊಂದಿರುವ ಮಾರ್ಗಸೂಚಿಗೆ ಉಭಯ ದೇಶಗಳು ಒಪ್ಪಿಗೆ ನೀಡಿವೆ. ಕೆಲವು ಹೆಪ್ಪುಗಟ್ಟಿದ ಇರಾನಿನ ಆಸ್ತಿಗಳನ್ನು ಬಿಡುಗಡೆ ಮಾಡಲು ಮತ್ತು ತೈಲ ರಫ್ತಿನ ಮೇಲಿನ ನಿರ್ಬಂಧಗಳನ್ನು ಸಡಿಲಗೊಳಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಹೇಳಿಕೊಂಡಿದ್ದಾರೆ. ಆದರೆ, ಅಮೆರಿಕದ ಜಂಟಿ ಹೇಳಿಕೆಯಲ್ಲಿ ಆಸ್ತಿ ಬಿಡುಗಡೆಯ ಬಗ್ಗೆ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲದ ಕಾರಣ ಈ ಆರ್ಥಿಕ ರಿಯಾಯಿತಿಗಳ ವಿಷಯ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು