AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿ ಮತ್ತು ಪಾಕಿಸ್ತಾನದೊಂದಿಗಿನ ಸೌದಿ ರಕ್ಷಣಾ ಒಪ್ಪಂದದ ನಂತರ ಸೌದಿ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ ಭೀಕರ ಡ್ರೋನ್ ದಾಳಿ

ಯೆಮೆನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದ ಜಿಜಾನ್‌ನಲ್ಲಿರುವ ಸೌದಿ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ ಡ್ರೋನ್ ದಾಳಿ ನಡೆಸಿದ್ದಾರೆ. ಇದು ಒಂದು ತಿಂಗಳಲ್ಲಿ ಸೌದಿಯ ಇಂಧನ ಮೂಲಸೌಕರ್ಯದ ಮೇಲಿನ ಎರಡನೇ ಪ್ರಮುಖ ದಾಳಿಯಾಗಿದೆ. ಯೆಮೆನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಹೌತಿಗಳು ಹೇಳಿಕೊಂಡಿದ್ದಾರೆ. ಈ ದಾಳಿಯು ಜಾಗತಿಕ ತೈಲ ಪೂರೈಕೆ ಮತ್ತು ಕೆಂಪು ಸಮುದ್ರದ ಸಾರಿಗೆಗೆ ತೀವ್ರ ಆತಂಕ ತಂದೊಡ್ಡಿದೆ.

ಟರ್ಕಿ ಮತ್ತು ಪಾಕಿಸ್ತಾನದೊಂದಿಗಿನ ಸೌದಿ ರಕ್ಷಣಾ ಒಪ್ಪಂದದ ನಂತರ ಸೌದಿ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ ಭೀಕರ ಡ್ರೋನ್ ದಾಳಿ
ಸೌದಿ ಅರಾಮ್ಕೋ ದಾಳಿ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2026 | 9:31 AM

Share

ಸೌದಿ ಅರೇಬಿಯಾ, ಆ.10: ಯೆಮೆನ್‌ನ ಇರಾನ್ ಬೆಂಬಲಿತ ‘ಹೌತಿ’ (Houthi) ಬಂಡುಕೋರರು ಸೌದಿ ಅರೇಬಿಯಾದ ನೈಋತ್ಯ ಭಾಗದಲ್ಲಿರುವ ಪ್ರಮುಖ ತೈಲ ಸಂಸ್ಥೆ ‘ಸೌದಿ ಅರಾಮ್ಕೋ’ದ ಜಿಜಾನ್ (Jazan) ಸಂಸ್ಕರಣಾಗಾರದ ಮೇಲೆ ರವಿವಾರ ಭೀಕರ ಡ್ರೋನ್ ದಾಳಿ ನಡೆಸಿದ್ದಾಗಿ ಹೊಣೆ ಹೊತ್ತುಕೊಂಡಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಸೌದಿಯ ಇಂಧನ ಮೂಲಸೌಕರ್ಯದ ಮೇಲೆ ಬಂಡುಕೋರರು ನಡೆಸಿದ ಎರಡನೇ ಪ್ರಮುಖ ದಾಳಿ ಇದಾಗಿದೆ.

ಹೌತಿ ಸೇನಾ ವಕ್ತಾರ ಯಹ್ಯಾ ಸಾರಿ (Yahya Saree) ಮಾತನಾಡಿ, “ಜಿಜಾನ್‌ನಲ್ಲಿರುವ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ ನಿಖರವಾಗಿ ಡ್ರೋನ್ ದಾಳಿ ನಡೆಸುವಲ್ಲಿ ನಮ್ಮ ಪಡೆ ಯಶಸ್ವಿಯಾಗಿದೆ” ಎಂದು ತಿಳಿಸಿದ್ದಾರೆ. ಯೆಮೆನ್‌ನ ಹಜ್ಜಾ ಮತ್ತು ಸಾದಾ ಪ್ರಾಂತ್ಯಗಳ ಮೇಲೆ ಸೌದಿ ಪಡೆಗಳು ನಡೆಸಿದ ಡ್ರೋನ್ ದಾಳಿಗೆ ಪ್ರತಿಯಾಗಿ ಈ ಕೃತ್ಯ ಎಸಗಿರುವುದಾಗಿ ಅವರು ಹೇಳಿದ್ದಾರೆ.

ಸ್ಥಳೀಯ ಜಿಜಾನ್ ಅರಾಮ್ಕೋ ಘಟಕದಲ್ಲಿ ರವಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿರುವುದನ್ನು ಸೌದಿ ಅರೇಬಿಯಾದ ಇಂಧನ ಸಚಿವಾಲಯ ಪ್ರತ್ಯೇಕವಾಗಿ ದೃಢಪಡಿಸಿದೆ. ಸ್ಥಳೀಯ ಕೈಗಾರಿಕಾ ಭದ್ರತಾ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ, ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದನ್ನು ಸಚಿವಾಲಯ ಸ್ಪಷ್ಟಪಡಿಸಿಲ್ಲ.

ಜುಲೈ 26 ರಂದು ಹೌತಿ ಪಡೆಗಳು ಜಿಜಾನ್ ಮತ್ತು ಯಾನ್ಬು  ಪ್ರಾಂತ್ಯಗಳಲ್ಲಿರುವ ಅರಾಮ್ಕೋ ಘಟಕಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದ್ದವು. ಬಂಡುಕೋರರು ಯೆಮೆನ್ ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಸರ್ಕಾರದ ಅಧೀನದಲ್ಲಿರುವ ಪ್ರಮುಖ ‘ಮೊಖಾ’  ಬಂದರಿನ ಮೇಲೂ ಕ್ಷಿಪಣಿ ದಾಳಿ ನಡೆಸಿದ್ದಾರೆ ಎಂದು ಯೆಮೆನ್ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಯಲ್ಲಿ ‘ಕೆರೆ-ದಂಡೆ’ ಆಟ: ಹಾಳಾದ ರಸ್ತೆ ವಿರುದ್ಧ ಯುವಕರ ವಿಶಿಷ್ಟ ಪ್ರತಿಭಟನೆ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸೌದಿ ತೈಲ ಸಂಸ್ಥೆಗಳ ಮೇಲಿನ ದಾಳಿಯು ಜಾಗತಿಕ ತೈಲ ಪೂರೈಕೆ ಹಾಗೂ ಕೆಂಪು ಸಮುದ್ರದ ಜಲಸಾರಿಗೆ ಸುಗಮ ಸಂಚಾರಕ್ಕೆ ತೀವ್ರ ಆತಂಕ ತಂದೊಡ್ಡಿದೆ. ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ದೇಶಗಳು ಶುಕ್ರವಾರ ಮೆಕ್ಕಾದಲ್ಲಿ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಇನ್ನೊಂದೆಡೆ, ಅಮೆರಿಕ ಜೊತೆಗಿನ ಮಾತುಕತೆ ಮಧ್ಯಸ್ಥಿಕೆದಾರರ ಮೂಲಕ ಮಾತ್ರ ಸಾಗುತ್ತಿದ್ದು, ಯಾವುದೇ ನೇರ ಸಂಧಾನ ನಡೆಯುತ್ತಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಸ್ಪಷ್ಟಪಡಿಸಿದ್ದಾರೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!