ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ: ಹೌಡಿ ಮೋದಿ ‘ಹೇಗಿದೆ’? ಹಂಗಂದ್ರೆ ಏನು?    

ಹ್ಯೂಸ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದ ಭಾರತೀಯರನ್ನು ಒಂದುಗೂಡಿಸೋ ಮಹತ್ವದ ಹೆಚ್ಚೆಯನ್ನ ಇಡಲಿದ್ದಾರೆ.  ಅಮೆರಿಕಾದ ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ‘ಹೌಡಿ ಮೋದಿ’ ಕಾರ್ಯಕ್ರಮವನ್ನ ಆಯೋಜಿಸಿದೆ, ಈ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಲಿದೆ.  ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಲಿದ್ದರೆ.  ಮೋದಿಯವರ ಜೊತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಲಿರುವ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿರಲಿಲ್ಲ. ಆದರೆ ಈಗ ಸ್ವತಹ ಮೋದಿಯವರೆ ತಮ್ಮ […]

ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ: ಹೌಡಿ ಮೋದಿ ‘ಹೇಗಿದೆ’? ಹಂಗಂದ್ರೆ ಏನು?    
Follow us
ಸಾಧು ಶ್ರೀನಾಥ್​
|

Updated on: Sep 20, 2019 | 12:38 PM

ಹ್ಯೂಸ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದ ಭಾರತೀಯರನ್ನು ಒಂದುಗೂಡಿಸೋ ಮಹತ್ವದ ಹೆಚ್ಚೆಯನ್ನ ಇಡಲಿದ್ದಾರೆ.  ಅಮೆರಿಕಾದ ಹ್ಯೂಸ್ಟನ್ ನಗರದಲ್ಲಿ ಸೆ.22 ರಂದು ಭಾರತೀಯ ಸಮುದಾಯ ‘ಹೌಡಿ ಮೋದಿ’ ಕಾರ್ಯಕ್ರಮವನ್ನ ಆಯೋಜಿಸಿದೆ, ಈ ಕಾರ್ಯಕ್ರಮ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಲಿದೆ.

 ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡಲಿದ್ದರೆ.  ಮೋದಿಯವರ ಜೊತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಲಿರುವ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿರಲಿಲ್ಲ. ಆದರೆ ಈಗ ಸ್ವತಹ ಮೋದಿಯವರೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಟ್ರಂಪ್ ಆಗಮಿಸುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಟ್ರಂಪ್ ಅತಿಥಿಯಾಗಿ ಆಗಮಿಸುವ ಬಗ್ಗೆ ಶ್ವೇತ ಭವನ ಖಚಿತ ಪಡಿಸಿರಲಿಲ್ಲ. ಆದರೆ ಈಗ ಶ್ವೇತ ಭವನ ಅಧಿಕೃತವಾಗಿ ಟ್ರಂಪ್ ಪಾಲ್ಗೊಳ್ಳುವ ಬಗ್ಗೆ ಖಚಿತಪಡಿಸಿದೆ. ಈ ಕಾರ್ಯಕ್ರಮವು ಎರಡು ದೇಶದ ನಾಯಕರು ಜನರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಮಾತನಾಡುವ ಅತಿ ದೊಡ್ಡ ಖಾಸಗಿ ಕಾರ್ಯಕ್ರಮವಾಗಲಿದೆ.

ಕಾರ್ಯಕ್ರಮಕ್ಕೆ ಹೌಡಿ ಮೋದಿ ಹೆಸರೇಕೆ?:  ಅಮೆರಿಕಾ ದ ನೈಋತ್ಯ ಭಾಗದಲ್ಲಿ ಅಥಿತಿಗಳಿಗೆ ಯೋಗ ಕ್ಷೇಮ ವಿಚಾರಿಸೋಕೆ ‘ಹೌ ಡು ಯು ಡು'(ನೀವು ಹೇಗಿದ್ದೀರಿ) ಎಂದು ಕೇಳುವುದು ಸಾಮಾನ್ಯ ಅದನ್ನು ಸಂಕ್ಷಿಪ್ತವಾಗಿ ‘ಹೌಡಿ’ ಎಂದು ಕರೆಯುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಹ್ಯೂಸ್ಟನ್ ನಗರದಲ್ಲಿರುವ ಭಾರತೀಯರು ‘ಹೌಡಿ ಮೋದಿ’ ಎಂದು ಹೆಸರನ್ನಿಟ್ಟಿದ್ದಾರೆ.

ಟೆಕ್ಸಾಸ್​​ನ ಹ್ಯೂಸ್ಟನ್ ನಗರದ ಎನ್‌ಆರ್‌ಜಿ ಫುಟ್ ಬಾಲ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಭಾರತೀಯ ಮೂಲದ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವುದರ ಜೊತೆ ಅಮೆರಿಕದ 60 ಸಂಸದರು ಭಾಗವಹಿಸಲಿದ್ದಾರೆ. ಈಗಾಗಲೇ ಎಲ್ಲ ಟಿಕೆಟ್ ಗಳು ಮಾರಾಟಗೊಂಡಿದೆ. ಪತಂಜಲಿ ಯೋಗಪೀಠ, ಅಕ್ಷಯ ಪಾತ್ರಾ ಫೌಂಡೇಶನ್, ಐಐಟಿ ಹಳೆ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಸುಮಾರು 650 ಸಂಘ, ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

ಪ್ರಧಾನಿ ಮೋದಿ ಅವರು ಅಮೆರಿಕದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಇದು ಮೊದಲಲ್ಲ. ಇದಕ್ಕೂ ಮುಂಚೆ 2014ರಲ್ಲಿ ಅಮೆರಿಕ ಭೇಟಿ ವೇಳೆ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕ್ವಾರ್ ನಲ್ಲಿ 20 ಸಾವಿರ ಮಂದಿಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು, ಇನ್ನು 2015ರಲ್ಲಿ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿ ಕಾರ್ಯಕ್ರಮದಲ್ಲೂ ಸುಮಾರು 20 ಸಾವಿರ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

ವಿಶೇಷವೆಂದರೆ ಕಳೆದ ಮೂರು ತಿಂಗಳಿನಲ್ಲಿ ಇದು ಮೂರನೇ ಬಾರಿಗೆ ಮೋದಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರನ್ನ ಬೇಟಿ ಮಾಡುತ್ತಿದ್ದಾರೆ. ಹಾಗೂ ಇದು ಅವರ ಮೂರನೇ ಭಾರತೀಯರ ಕುರಿತ ವಿದೇಶಿ ಭಾಷಣ ಹೀಗಾಗಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ