ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಚಿತ್ತಗಾಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ

ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ
ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಬೆಂಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 05, 2022 | 8:28 PM

ಢಾಕಾ: ಬಾಂಗ್ಲಾದೇಶದ (Bangladesh) ಚಿತ್ತಗಾಂಗ್‌ನಲ್ಲಿರುವ ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ(shipping container depot) ಶನಿವಾರ ರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 49 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸೀತಾಕುಂದಾ ಪ್ರದೇಶದ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 300 ಜನರು ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ತಗಾಂಗ್ (Chittagong )ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಾತ್ರಿ 9ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸ್ಫೋಟದ ನಂತರ ಬೆಂಕಿ ವ್ಯಾಪಕವಾಗಿ ಹರಡಿದೆ.”ಈ ಘಟನೆಯಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು” ಎಂದು ರೆಡ್ ಕ್ರೆಸೆಂಟ್ ಯೂತ್ ಚಿತ್ತಗಾಂಗ್‌ನ ಆರೋಗ್ಯ ಮತ್ತು ಸೇವಾ ವಿಭಾಗದ ಮುಖ್ಯಸ್ಥ ಇಸ್ತಾಕುಲ್ ಇಸ್ಲಾಂ ಹೇಳಿದ್ದಾರೆ. ಮೂಲಗಳ ಪ್ರಕಾರ, ಸ್ಫೋಟದಿಂದಾಗಿ ಸಮೀಪದ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

“ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿವೆ ಮತ್ತು ಆರು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ ಎಂದು ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಹೇಳಿದ್ದಾರೆ. ಕಂಟೇನರ್ ಡಿಪೋ ಮೇ 2011 ರಿಂದ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಬಾಂಗ್ಲಾದೇಶ: ಹೊತ್ತಿ ಉರಿದ ಕಂಟೈನರ್ ಡಿಪೋ, 16 ಮಂದಿ ಸಾವು, 450 ಮಂದಿಗೆ ಗಂಭೀರ ಗಾಯ
Image
ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ