ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಟ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ತುತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ಇರುವ ಪಾಕ್ನಲ್ಲಿ ವಿದ್ಯುತ್ ಹಾಗೂ ಇತರೆ ಅಗತ್ಯ ವಸ್ತುಗಳ ದರಗಳನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಜನರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಈ ಸಂದರ್ಭದಲ್ಲಿ ಭಾರತದ ಧ್ವಜ ಕೂಡ ಹಾರಿದೆ.
ವಿದ್ಯುತ್(Electricity) ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಮುಷ್ಕರದ ಸಮಯದಲ್ಲಿ, ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟವು ಮತ್ತು ಸಾಮಾನ್ಯ ಜೀವನವು ಪರಿಣಾಮ ಬೀರಿತು, ಇದು ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗೆ ಕಾರಣವಾಯಿತು.
ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಆಕ್ಷನ್ ಕಮಿಟಿ (ಜೆಕೆಜೆಎಎಸಿ) ಕರೆದಿದ್ದ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಾಫರಾಬಾದ್‌ನಲ್ಲಿ ಬಂದ್ ಮತ್ತು ಜಾಮ್ ಮುಷ್ಕರದ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಬಳಿಕ ಮಸೀದಿಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಈ ಸಮಯದಲ್ಲಿ, ಪ್ರತಿಭಟನಾಕಾರರು ಪಿಒಕೆಯ ಸಂಹಾನಿ, ಸೆಹನ್ಸಾ, ಮೀರ್‌ಪುರ್, ರಾವಲ್‌ಕೋಟ್, ಖುಯಿರಟ್ಟಾ, ತಟ್ಟಪಾನಿ, ಹಟ್ಟಿಯಾನ್ ಬಾಲಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಾಕ್ ಆಡಳಿತದ ಕಾಶ್ಮೀರ ಸರ್ಕಾರವು ಇಡೀ ಪಿಒಕೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಿತ್ತು. ಇದರೊಂದಿಗೆ ಮೇ 10 ಮತ್ತು 11 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದಾಗ್ಯೂ, ಏರುತ್ತಿರುವ ವಿದ್ಯುತ್ ಮತ್ತು ಹಿಟ್ಟಿನ ಬೆಲೆಗಳ ವಿರುದ್ಧ ಪಿಒಕೆಯ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಜನರು ಬೀದಿಗಿಳಿದರು.
ಮತ್ತಷ್ಟು ಓದಿ: ತುಂಬಾ ಕಾಸ್ಟ್ಲಿ ದುನಿಯಾ! ಪಾಕಿಸ್ತಾನದಲ್ಲಿ ಇಂಟರ್ನೆಟ್ ದರ ಎಷ್ಟಿದೆ ಗೊತ್ತಾ? 5GB ರೇಟ್ ಕೇಳಿದರೆ ನಖೋ ಅಂತೀರೀ!
ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ ವೈರಲ್ ಆಗಿದ್ದು, ಪಾಕಿಸ್ತಾನದ ಆತಂಕ ಹೆಚ್ಚಾಗಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಪ್ರತಿಭಟನೆ ಭುಗಿಲೆದ್ದಿದೆ. ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ತುತ್ತು ಅನ್ನಕ್ಕೂ ಪರದಾಡ, ವಿದ್ಯುತ್ ಕಡಿತ ಸೇರಿದಂತೆ ಹಲವು ಸಮಸ್ಯೆಗಳಿಂದ ಪರಿದಾಡುತ್ತಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಜನ, ಪಾಕಿಸ್ತಾನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಇಲ್ಲಿನ ಜನರು ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಆರೋಗ್ಯ ಸೌಲಭ್ಯವಿಲ್ಲ, ಸರ್ಕಾರದ ಯಾವುದೇ ಯೋಜನೆಗಳು ಈ ಭಾಗಕ್ಕೆ ಇಲ್ಲ. ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಬೆಲೆ ಏರಿಕೆಯಿಂದ ಇಲ್ಲಿನ ಜನರು ಅಗತ್ಯವಸ್ತುಗಳ ಖರೀದಿಗೂ ಸಾಧ್ಯವಾಗುತ್ತಿಲ್ಲ. ಪ್ರತಿಭಟನಾ ನಿರತರನ್ನು ಪಾಕಿಸ್ತಾನ ಸೇನೆ ಹಾಗೂ ಪೊಲೀಸ್ ಬಂಧಿಸುತ್ತಿದೆ. 144 ಸೆಕ್ಷನ್ ಜಾರಿ ಮಾಡಿ ಜನರ ಮೇಲೆ ದಬ್ಬಾಳಿ ಮಾಡುತ್ತಿದೆ ಎಂದು ಯುನೈಟೆಡ್ ಕಾಶ್ಮೀರ ಪೀಪಲ್ ನ್ಯಾಷನಲ್ ಪಾರ್ಟಿ ಹೇಳಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ